ಬಿಜೆಪಿ ಶಾಸಕಾಂಗ ಸಭೆಯಿಂದ ಹೊರನಡೆದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ

Date:

ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಮೂವರು ಹೊರ ನಡೆದಿದ್ದಾರೆ.

ಬಿಜೆಪಿ ಶಾಸಕಾಂಗ ಸಭೆ ಆರಂಭಕ್ಕೂ ಮುನ್ನ ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಹಾಗೂ ರಮೇಶ್ ಜಾರಕಿಹೊಳಿ ಒಂದೇ ಕಾರಿನಲ್ಲಿ ತೆರಳಿ ಸಭೆಯನ್ನು ತಿರಸ್ಕರಿಸಿದ್ದಾರೆ.

ಹೊರಗೆ ಬಂದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯತ್ನಾಳ್, ‘ಹೊರಗೆ ಚಹಾ ಕುಡಿದು ಬರ್ತೀವಿ’ ಎಂದಾಗ ‘ಇಲ್ಲಿ ಚಹಾ ಇಲ್ಲವೇ?’ ಎಂದು ಮಾಧ್ಯಮದವರು ಮರು ಪ್ರಶ್ನೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ಹೊಟೇಲ್‌ನಲ್ಲಿ ಚಹಾ ತುಟ್ಟಿ ಐತಿ. ನಮ್ಮಂತ ಬಡವರು ಇಲ್ಲಿ ಕುಡಿಯೋಕೆ ಆಗಲ್ಲ’ ಎಂದು ಹೇಳಿ ಕಾರು ಹತ್ತಿಕೊಂಡು ಹೋಗಿದ್ದಾರೆ. ಇದೇ ಕಾರಿಗೆ ಅರವಿಂದ ಬೆಲ್ಲದ್ ಹಾಗೂ ರಮೇಶ್ ಜಾರಕಿಹೊಳಿ ಹತ್ತಿಕೊಂಡಿದ್ದಾರೆ.

ಇಂದು ಬೆಂಗಳೂರಿನ ಐಟಿಸಿ ಹೊಟೇಲ್‌ನಲ್ಲಿ ಬಿಜೆಪಿ ಶಾಸಕಾಂಗ ಸಭೆಯನ್ನು 6 ಗಂಟೆಗೆ ಆಯೋಜಿಸಲಾಗಿತ್ತು. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ವಿಪಕ್ಷ ನಾಯಕನಾಗಿ ಆರ್.ಅಶೋಕ್ ಅವರ ಹೆಸರು ಬಹುತೇಕ ಖಚಿತಗೊಂಡ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ರೀತಿ ನಡೆದುಕೊಳ್ಳುವ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಭಾಗವಹಿಸಿದ್ದಾರೆ.

ಯಾರಿಗೂ ಬೇಸರ ಆಗಿಲ್ಲ, ಬಹಿಷ್ಕಾರ ಮಾಡಿಲ್ಲ: ಅರವಿಂದ್ ಬೆಲ್ಲದ್

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಹೈಕಮಾಂಡ್​ ವೀಕ್ಷಕರ ಸಭೆ ನಡೆಸಿದ್ದು, ಈ ವೇಳೆ ಯತ್ನಾಳ್​ ಸೇರಿದಂತೆ ಬೆಲ್ಲದ್ ಅವರು ಹೊರ ಬಂದಿದ್ದಾರೆ.

ಈ ವೇಳೆ ಮಾತನಾಡಿದ ಅವರು ‘ವೀಕ್ಷಕರು ಒನ್ ಟು ಒನ್ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಯಾರಿಗೂ ಬೇಸರ ಆಗಿಲ್ಲ, ಬಹಿಷ್ಕಾರ ಮಾಡಿಲ್ಲ. ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಶಾಸಕರಿದ್ದಾರೆ. ಇನ್ನು ಏನೂ ನಿರ್ಧಾರ ಆಗಿಲ್ಲ’ ಎಂದು ಅರವಿಂದ್ ಬೆಲ್ಲದ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...