‘ದಲಿತ ಅಧಿಕಾರಿ’ಯನ್ನು ಬದಲಿಸಿ ಎಂದು ಅಧಿಕೃತ ಪತ್ರ ಬರೆದ ಬಿಜೆಪಿ ಶಾಸಕ ಮುನಿರತ್ನ!

Date:

‘ದಲಿತ ಅಧಿಕಾರಿ’ಯನ್ನು ಬದಲಿಸಿ ಎಂದು ಚುನಾವಣಾಧಿಕಾರಿಗೆ ಅಧಿಕೃತ ಪತ್ರ ಬರೆಯುವ ಮೂಲಕ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ದಲಿತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

“ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಂಗಳೂರಿನ ನಂದಿನಿ ಲೇಔಟ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮಣ್ ಅವರು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಇವರು ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಸೇರಿದವರು. ಕಾಂಗ್ರೆಸ್ ಪಕ್ಷದ ಬಗ್ಗೆ ‘ಸಾಫ್ಟ್ ಕಾರ್ನರ್’ ಹೊಂದಿದ್ದು, ಇತರರನ್ನು ಗುರಿಯಾಗಿಸಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಅವರ ವಿರುದ್ಧ ಅಗತ್ಯ ಕ್ರಮ ಜರುಗಿಸಿ” ಎಂದು ಆರೋಪಿಸಿ ಚುನಾವಣಾಧಿಕಾರಿಗೆ ಅಧಿಕೃತ ಪತ್ರ ಬರೆದಿದ್ದಾರೆ.

letter
ಚುನಾವಣಾಧಿಕಾರಿಗೆ ಬರೆದಿರುವ ಪತ್ರದ ಪ್ರತಿ

ದಲಿತ ಸಮುದಾಯದ ಅಧಿಕಾರಿ ಎಂದು ಉಲ್ಲೇಖಿಸಿ ಮುನಿರತ್ನ ಬರೆದಿರುವ ಪತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ದಲಿತ ಮುಖಂಡ ಹಾಗೂ ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಳಿಕರ್, “ಬಿಜೆಪಿ ಶಾಸಕ ಮುನಿರತ್ನ ಅವರದ್ದು ಮನುವಾದ ಹಾಗೂ ಜಾತಿವಾದದ ಮನಸ್ಥಿತಿಯ ಪ್ರತಿರೂಪ ಇದು. ಆಯಕಟ್ಟಿನ ಹುದ್ದೆಯಲ್ಲಿರುವ ಎಸ್‌ಸಿ, ಎಸ್‌ಟಿ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ನೀಡಿರುವ ದೂರು ಇದಕ್ಕೆ ಸಾಕ್ಷಿ. ಈ ರೀತಿಯ ಜಾತಿವಾದಿ ಮನಸ್ಥಿತಿಯನ್ನು ಹೊಂದಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಮುನಿರತ್ನ ವಿರುದ್ಧ ಕಿಡ್ನಾಪ್ ಆರೋಪ: ಎಫ್‌ಐಆ‌ರ್ ದಾಖಲು

ಕಾಂಗ್ರೆಸ್ ಕಾರ್ಯಕರ್ತನನ್ನು ಬಿಜೆಪಿಗೆ ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಆರ್ ಆರ್ ನಗರ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಲಕ್ಷ್ಮಿ ದೇವಿನಗರದ ಪೇಂಟರ್ ಸ್ಯಾಮ್ಯುಯೆಲ್ ಎಂಬವರು ಆರೋಪಿಸಿದ್ದು, ಸಂತ್ರಸ್ತ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮುನಿರತ್ನ ಮತ್ತು ಆತನ ಬೆಂಬಲಿಗರಾದ ಸುರೇಶ್, ವಸಂತ್, ವಾಸಿಂ ಮತ್ತು ಸೀನಾ ವಿರುದ್ಧ ಅಪಹರಣ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

ಎರಡು ದಿನ ಮಾತನಾಡುವ ನೆಪದಲ್ಲಿ ಶಾಸಕರನ್ನು ಶಾಸಕ ಮುನಿರತ್ನ ಅವರ ಕಚೇರಿಗೆ ಬಲವಂತವಾಗಿ ಶಾಸಕರ ಹಿಂಬಾಲಕರು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಬಿಜೆಪಿ ಸೇರಿಸಿದ್ದಾರೆ ಎಂದು ಸಂತ್ರಸ್ಥ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಶಾಸಕ ಮುನಿರತ್ನ ನಿರಾಕರಿಸಿದ್ದಾರೆ.

ಇದನ್ನು ಓದಿದ್ದೀರಾ? GST ಅನ್ಯಾಯ | ‘ಬಹಿರಂಗ ಚರ್ಚೆಗೆ ನಾನು ಸಿದ್ದ’ ಎಂದ ಸಚಿವ ಕೃಷ್ಣಬೈರೇಗೌಡ; ನಿರ್ಮಲಾ ಸೀತಾರಾಮನ್‌ಗೂ ಆಹ್ವಾನ

“ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದೇನೆ. ಏ.1ರಂದು ಶಾಸಕ ಮುನಿರತ್ನ ಅವರು ಮಾತನಾಡಲು ಕರೆಯುತ್ತಿದ್ದಾರೆ ಎಂದು ಹೇಳಿ ಡಾ. ರಾಜ್ ಕುಮಾರ್‌ಸಮಾಧಿ ಬಳಿಗೆ ಸುರೇಶ್, ವಸಂತ್, ವಾಸೀಂ ಹಾಗೂ ಸೀನ ಕರೆಸಿಕೊಂಡರು. ಬಳಿಕ ಅಲ್ಲಿಂದ ವೈಯಾಲಿಕಾವಲ್‌ನಲ್ಲಿರುವ ಶಾಸಕರ ಕಚೇರಿಗೆ ನನ್ನನ್ನು ಕರೆದುಕೊಂಡು ಹೋದರು. ಅಲ್ಲಿ ನನಗೆ ಶಾಸಕ ಮುನಿರತ್ನ ಜೀವ ಬೆದರಿಕೆ ಹಾಕಿದರು” ಎಂದು ಸಾಮ್ಯುಯೆಲ್ ದೂರಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...