ಎಂಪಿಯಾಗೋಕೆ ಬಂದಿದ್ದಾ? ಬೆಂಕಿ ಹಚ್ಚೋಕೆ ಬಂದಿದ್ದಾ?; ಶೋಭಾ ಕರಂದ್ಲಾಜೆಗೆ ಬಿಜೆಪಿ ಶಾಸಕ ತರಾಟೆ

Date:

ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆಯ ವಿರುದ್ಧ ಬಹಿರಂಗವಾಗಿಯೇ ಕಿಡಿಕಾರಿರುವ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, “ಶೋಭಾ ಕರಂದ್ಲಾಜೆ ಎಂಪಿಯಾಗೋಕೆ ಬಂದಿದ್ದಾ? ಬೆಂಗಳೂರಿಗೆ ಬೆಂಕಿ ಹಚ್ಚೋಕೆ ಬಂದಿದ್ದಾ?” ಎಂದು ಪ್ರಶ್ನಿಸಿದ್ದಾರೆ.

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಹಿರಿಯ ಬಿಜೆಪಿಯ ನಾಯಕ ಬಿಎಸ್ ಯಡಿಯೂರಪ್ಪರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್‌ ಟಿ ಸೋಮಶೇಖರ್, ನಗರ್ತಪೇಟೆ ಘಟನೆಯ ವೇಳೆ ‘ತಮಿಳುನಾಡಿನಿಂದ ಬಂದವರು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾರೆ’ ಎಂಬ ಶೋಭಾ ಹೇಳಿಕೆಯನ್ನು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ವಿಧಾನಸಭಾ ಕ್ಷೇತ್ರವು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದೆ. ಇಲ್ಲಿ ಡಿವಿ ಸದಾನಂದಗೌಡರು ಕ್ಷೇತ್ರವನ್ನು 10 ವರ್ಷಗಳ ಕಾಲ ಸಂಸತ್ತಿನಲ್ಲಿ ಪ್ರತಿನಿಧಿಸುವ ಮೊದಲು ಡಿಬಿ ಚಂದ್ರೇಗೌಡರು ಸಂಸದರಾಗಿದ್ದರು. ತಾನು 10 ವರ್ಷಗಳಿಂದ ಶಾಸಕನಾಗಿ, ಜನರ ನಡುವೆ ಕೆಲಸ ಮಾಡುತ್ತಿದ್ದೇನೆ. ಈ ಎಲ್ಲ ಅವಧಿಯಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ, ಆದರೆ ಈ ಸಲ ಟಿಕೆಟ್ ಗಿಟ್ಟಿಸಿರುವ ಶೋಭಾ ಕರಂದ್ಲಾಜೆ, ಗೆಲ್ಲುವ ಮೊದಲೇ ಅಸಂಬದ್ಧ ಮತ್ತು ಮತೀಯ ಗಲಾಟೆಗಳಿಗೆ ಉತ್ತೇಜನ ನೀಡುವ ಹೇಳಿಕೆ ನೀಡುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಬೆಂಗಳೂರು ಒಂದು ಶಾಂತಿಪ್ರಿಯ ನಗರ ಎನ್ನುವುದನ್ನು ಶೋಭಾ ಕರಂದ್ಲಾಜೆ ಮನಗಾಣಬೇಕು. ಅವರ ಹೇಳಿಕೆಗಳಿಂದಾಗಿ ಖುದ್ದು ನನಗೇ ನನ್ನ ಕ್ಷೇತ್ರದಲ್ಲಿ ವಾರದಿಂದೀಚೆಗೆ ಓಡಾಡಲು ಭಯವಾಗುತ್ತಿದೆ. ಯಾವ ಸಮಯದಲ್ಲಿ ಏನು ದ್ವೇಷ ಭಾಷಣ ಮಾಡುತ್ತಾರೋ, ಯಾವ ಸಮಯದಲ್ಲಿ ನನ್ನ ವಿರುದ್ಧ ಮಾತನಾಡುತ್ತಾರೋ, ಏನು ನಡೆಯಲಿದೆಯೋ ಅನ್ನುವ ಆತಂಕ ಶುರುವಾಗಿದೆ” ಎಂದು ಎಸ್‌ ಟಿ ಸೋಮಶೇಖರ್ ಆತಂಖ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆ: ‘ಫ್ಯಾಕ್ಟ್‌ ಚೆಕ್ ಘಟಕ’ ಸ್ಥಾಪನೆಗೆ ತಡೆ

“ಸದಾನಂದ ಗೌಡರು ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯವರನ್ನು ಒಂದೇ ಥರ ನೋಡಿ, ಕೆಲಸ ಮಾಡಿದ್ದಾರೆ. ಒಂದೇ ಒಂದು ಬೆಂಕಿಯುಗುಳುವಂತಹಾ ಮಾತನ್ನು ಅವರು ಈವರೆಗೆ ಆಡಿಲ್ಲ. ಡಿ ಬಿ ಚಂದ್ರೇಗೌಡರು ಕೂಡ ಆಡಿಲ್ಲ. ಶೋಭಾ ಕರಂದ್ಲಾಜೆ ಹೇಳಿಕೆಯಿಂದ ನನಗೇ ಭಯ ಶುರುವಾಗಿದೆ. ಇದು ಇದೇ ರೀತಿ ಮುಂದುವರಿದರೆ, ಖುದ್ದು ನಾನೇ ಬೆಂಗಳೂರು ಪೊಲೀಸ್ ಕಮಿಷನರ್ ಅವರಲ್ಲಿ ರಕ್ಷಣೆ ಕೇಳಬೇಕಾದ ಪರಿಸ್ಥಿತಿ ಬರಬಹುದು. ಶೋಭಾ ಕರಂದ್ಲಾಜೆ ಎಂಪಿಯಾಗೋಕೆ ಬಂದಿದ್ದಾ? ಬೆಂಗಳೂರಿಗೆ ಬೆಂಕಿ ಹಚ್ಚೋಕೆ ಬಂದಿದ್ದಾ? ಎಂದು ಎಸ್‌ಟಿ ಸೋಮಶೇಖರ್, ಕೇಂದ್ರ ಸಚಿವೆಯ ವಿರುದ್ಧವೇ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...