ಜ್ಯೋತಿಷಿ ಆರೋಪಿಯಾಗಿರುವ ಕೊಲೆ ಪ್ರಕರಣದಲ್ಲಿ BJP ಶಾಸಕ ಸುರೇಶ್ ಕುಮಾರ್ ಪಾತ್ರವೇನು: ಬಿ.ಕೆ ಹರಿಪ್ರಸಾದ್ ಪ್ರಶ್ನೆ

Date:

ವಂಸತ್‌ ನಾಯ್ಕ್‌ ಎಂಬವರ ಕೊಲೆ ಪ್ರಕರಣ ಆರೋಪಿ, ಜ್ಯೋತಿಷಿ ಕಮಲಾಕರ ಭಟ್ ಎಂಬಾತನನ್ನು ಪ್ರೋತ್ಸಾಹಿಸಿ ಬೆಳೆಸಿದ್ದ ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿರುವ ಬಿಜೆಪಿ ಶಾಸಕ ಸುರೇಶ್‌ ಕುಮಾರ್. ಈ ಕ್ರಿಮಿನಲ್ ಪ್ರಕರಣದಲ್ಲಿ ಸುರೇಶ್‌ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಂತಹ ಜನಪ್ರತಿನಿಧಿಗಳ ಪಾತ್ರವೇನು? ಎಂಬುದು ಸ್ವಸ್ಥ ಸಮಾಜ ದೃಷ್ಟಿಯಿಂದ ಮುಖ್ಯವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಬಿ.ಕೆ ಹರಿಪ್ರಸಾದ್, “ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್ ನಾಯ್ಕ್ ಬಲಿಯಾಗಿದ್ದಾರೆ. ಈ ಕ್ರಿಮಿನಲ್ ಪ್ರಕರಣ ನ್ಯಾಯಯುತ ತನಿಖೆಯಾಗಿ, ನ್ಯಾಯಾಲಯ ತೀರ್ಪು ಕೊಡುತ್ತದೆ. ಆದರೆ, ಇಂತಹ ಪ್ರಕರಣದಲ್ಲಿ ರಾಜಾಜಿನಗರ ಬಿಜೆಪಿ ಶಾಶಕ ಸುರೇಶ್ ಕುಮಾರ್ ಅವರಂತವರ ಪಾತ್ರವಿಲ್ಲವೇ? ಕೊಲೆ ಆರೋಪಿ ಜೋತಿಷಿ ‘ಗುರೂಜಿ’ ಕಮಲಾಕರ ಭಟ್ಟನನ್ನು ಓರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು, ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ? ಓರ್ವ ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರುವುದು ಈ ರಾಜ್ಯದ ದುರಂತ” ಎಂದಿದ್ದಾರೆ.

“ಕೊಲೆಗಡುಕ, ಮಹಿಳಾ ಪೀಡಕ ಕಮಲಾಕರ ಭಟ್ ತನ್ನಲ್ಲಿಗೆ ಜೋತಿಷ್ಯ ಕೇಳಲು ಬರುವ ಗ್ರಾಹಕರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ. ಅದರ ಭಾಗವಾಗಿಯೇ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿ ಅದು ಕೊಲೆಯವರೆಗೂ ಹೋಗಿದೆ. ಈ ರೀತಿ ಜನರ ಮೂಢನಂಬಿಕೆಯನ್ನೇ ಬಳಸಿಕೊಂಡು ಹಲವು ‘ಅಕ್ರಮ’ಗಳನ್ನು ಸಂಪಾದಿಸಿಕೊಂಡು ಇಂತಹ “ಜೀ-ಗುರೂಜಿ”ಗಳು ಸಮಾಜ ಸೇವೆಯ ಹೆಸರಿನಲ್ಲಿ ಸಮಾಜವನ್ನೇ ಯಾಮಾರಿಸುತ್ತಾರೆ. ಇಂತಹ ಮೂಢನಂಬಿಕೆಯ ‘ಅಕ್ರಮ ದಂಧೆ’ಗಳನ್ನು ಬಿಜೆಪಿಯ ಸ್ವಯಂ ಘೋಷಿತ ಸಜ್ಜನ ಶಾಸಕ ಬಿರುದಾಂಕಿತ ಬಿಜೆಪಿಯ ಸುರೇಶ್ ಕುಮಾರ್ ಬೆನ್ನುತ್ತಟ್ಟಿ ಪ್ರೋತ್ಸಾಹಿಸಿ ಬೆಳೆಸಿದ್ದಾರೆ. ಹಾಗಾಗಿ ಈ ಕೊಲೆಯಲ್ಲಿ ಸುರೇಶ್ ಕುಮಾರ್ ಅಂತವರ ಪಾತ್ರ ಬಹಳ ಮುಖ್ಯವಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದನದಲ್ಲಿ ಮಹಿಳೆಯರನ್ನೇ ಅಪಮಾನ ಮಾಡುವವರು, ಸಮಾಜದಲ್ಲಿ ಸ್ತ್ರೀ ಪೀಡಕರು, ಅತ್ಯಾಚಾರಿಗಳು, ಕೊಲೆಗಡಕರು, ಅಕ್ರಮ ಚಟುವಟಿಕೆಯಲ್ಲಿ ಭಾಗವಹಿಸುವವರಿಗೆ ನೇರವಾಗಿ ಬಿಜೆಪಿ ಜೊತೆಗೆ ಅವಿನಾಭಾವ ಸಂಬಂಧ ಇರುವುದಾದರೂ ಹೇಗೆ? ಬಿಜೆಪಿ ಕರ್ನಾಟಕದಲ್ಲಿ ಈ ಕಾರಣಕ್ಕಾಗಿಯೇ ಪ್ರತ್ಯೇಕ ಮೋರ್ಚಾ ಇದೆಯೇ? ಅಥವಾ ಕ್ರಿಮಿನಲ್ ಗಳಲ್ಲಿ ಭಾಗವಹಿಸುವವರಿಗೆ ಹಾಗೂ ಪ್ರೋತ್ಸಾಹ ನೀಡುವವರಿಗೆ ಮಾತ್ರ ಸ್ಥಾನಮಾನಗಳು ಸಿಗುತ್ತದೆಯೇ?” ಎಂದಿದ್ದಾರೆ.

“ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ಗೆ ನೆನಪಿಸಲು ಬಯಸುತ್ತೇನೆ. ಭಾರತ ಸಂವಿಧಾನದ 51A(h) ಆರ್ಟಿಕಲ್ ಪ್ರಕಾರ, ಪ್ರತಿಯೊಬ್ಬ ನಾಗರಿಕನ ಮೂಲ ಕರ್ತವ್ಯವೆಂದರೆ, ‘ವೈಜ್ಞಾನಿಕ ಮನೋಭಾವ, ಮಾನವೀಯತೆ ಹಾಗೂ ಪ್ರಗತಿಪರ ಸುಧಾರಣೆಯ ಮನೋಭಾವವನ್ನು ಬೆಳೆಸಿಕೊಳ್ಳುವುದು’. ಈ ವಿಧಿಯ ಉದ್ದೇಶವು ಅಂಧಶ್ರದ್ಧೆ, ಪೂರ್ವಗ್ರಹಗಳನ್ನು ಅವಲಂಬಿಸದೆ, ತಾರ್ಕಿಕತೆ, ವಿಮರ್ಶಾತ್ಮಕ ಚಿಂತನೆ ಮತ್ತು ಪ್ರಗತಿಶೀಲ ದೃಷ್ಟಿಕೋನವನ್ನು ಉತ್ತೇಜಿಸುವುದಾಗಿದೆ” ಎಂದು ಹೇಳಿದ್ದಾರೆ.

“ಸುರೇಶ್ ಕುಮಾರ್ ಅಂತವರು ಸಂವಿಧಾನದ ಈ ಆರ್ಟಿಕಲ್ ಅನ್ನು ಉಲ್ಲಂಘಿಸಿ ಅಪರಾಧ ಮಾಡಿದ್ದೇ ಕಮಲಾಕರ ಭಟ್ ಅಂತವರು ಕೊಲೆಗಾರರಾಗಲು ಕಾರಣವಾಗಿದೆ‌. ಹಾಗಾಗಿಯೇ ಶಾಸಕ ಸುರೇಶ್ ಕುಮಾರ್ ಕೂಡಾ ಈ ಕೊಲೆಯ ನೈತಿಕ ಹೊಣೆಯನ್ನು ಹೊತ್ತುಕೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...