ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಬಿಜೆಪಿ ಶಾಸಕರ ಸೋದರಳಿಯ ಸೇರಿ ಮೂವರ ಬಂಧನ

Date:

ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಬಿಜೆಪಿ ಶಾಸಕರ ಸೋದರಳಿಯ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಸದ್ಯ ಮೂವರು ಜೈಲಿನಲ್ಲಿದ್ದಾರೆ.

ಬಂಧಿತ ಆರೋಪಿಗಳನ್ನು ಶಾಸಕ ಸುರೇಶ್ ಪಾಸಿ ಅವರ ಸೋದರಳಿಯ ರವಿ ಕುಮಾರ್ ಮತ್ತು ಅವರ ಸ್ನೇಹಿತರಾದ ಬಾಬಾದಿನ್ ಮತ್ತು ರಾಂಬಚನ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರಂಭದಲ್ಲಿ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಿಸಲಾಗಿರಲಿಲ್ಲ. ಬಿಜೆಪಿ ಶಾಸಕ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಕಾಸ್‌ಗಂಜ್‌ ಸಾಮೂಹಿಕ ಅತ್ಯಾಚಾರ ಪ್ರಕರಣ; ಬಿಜೆಪಿ ನಾಯಕ ಸೇರಿ ಎಂಟು ಮಂದಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವಿ ಕುಮಾರ್ ಮತ್ತು ಅವರ ಇಬ್ಬರು ಸಹಚರರು ಜೂನ್ 7ರಂದು ಮೋಹನ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಿಂದ 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮರುದಿನ ರಾಯ್ ಬರೇಲಿ ಬಸ್ ನಿಲ್ದಾಣದಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ ಎಂದು ಅತ್ಯಾಚಾರ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಜೂನ್ 13ರಂದು ಮೋಹನ್ ಗಂಜ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 137(2)(ಅಪಹರಣ) ಮತ್ತು 87(ಮಹಿಳೆಯನ್ನು ಅಪಹರಿಸಿ ಮದುವೆಯಾಗುವಂತೆ ಒತ್ತಾಯಿಸುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಜೂನ್ 16ರಂದು ಕೋರ್ಟ್‌ನಲ್ಲಿ ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವೃತ್ತ ಅಧಿಕಾರಿ ಅಜಯ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಇನ್ನು ಬಿಜೆಪಿ ನಾಯಕರ ಒತ್ತಡ ಪೊಲೀಸರ ಮೇಲಿದೆ. ಆದ್ದರಿಂದಾಗಿ ಪೊಲೀಸರು ಈ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲು ತನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಜೂನ್ 14ರಂದು ತಾಯಿ ಆರೋಪಿಸಿದ್ದರು. ಹಾಗೆಯೇ ಪ್ರಕರಣದಲ್ಲಿ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದರು.

ಪೊಲೀಸರು ಆರಂಭದಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿರಲಿಲ್ಲ. ಮಂಗಳವಾರ ಈ ಸೆಕ್ಷನ್‌ಗಳನ್ನು ಸೇರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...