ಕರ್ತವ್ಯ ನಿರತ ಪೊಲೀಸರೊಂದಿಗೆ ಬಿಜೆಪಿ ಶಾಸಕ-ಪುತ್ರನ ಅನುಚಿತ ವರ್ತನೆ; ಸಂಚಾರಿ ಪೊಲೀಸರಿಂದ ತರಾಟೆ

Date:

ತಾನು ಶಾಸಕನ ಮಗ ಎಂದು ಹೇಳಿಕೊಂಡು ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ ಸ್ಥಳೀಯ ಎಂಎಲ್‌ಸಿಯ ಮಗನ ಯಾವುದೇ ರಾಜಕೀಯ ಹಿನ್ನೆಲೆಗೂ ಮಣಿಯದೆ ತನ್ನ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್‌ ಕಾನ್‌ಸ್ಟೆಬಲ್‌ನ ವೃತ್ತಿ ಧರ್ಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಬಿಜೆಪಿ ಶಾಸಕ ಚೌಧರಿ ರಿಷಿಪಾಲ್‌ ಸಿಂಗ್‌ನ ಪುತ್ರ ತಪೇಶ್‌ ‘ಬಿಜೆಪಿ ಶಾಸಕ’ ಎಂಬ ಸ್ಟಿಕರ್ ಮತ್ತು ಬ್ಯಾನೆಟ್‌ ಮೇಲೆ ಪಕ್ಷದ ಧ್ವಜವಿದ್ದ ಸ್ಕಾರ್ಪಿಯೋವನ್ನು ಜನನಿಬಿಡ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಈ ವೇಳೆ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್‌ ಪೊಲೀಸ್‌ ಚಾಲಕನಿಗೆ ಕಾರನ್ನು ಸ್ಥಳಾಂತರಿಸುವಂತೆ ಕೇಳಿಕೊಂಡಿದ್ದರು.

ಇದನ್ನು ಓದಿದ್ದೀರಾ? ದ್ವೇಷ ಭಾಷಣ, ಅಪರಾಧ ಪುನರಾವರ್ತಿಸಬಾರದು: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ ಎಂಎಲ್‌ಸಿ ಮಗ ತಪೇಶ್‌ ಕರ್ತವ್ಯ ನಿರತ ಪೊಲೀಸರಿಗೆ “ಮೊದಲು ಇಲ್ಲಿಂದ ತೊಲಗು” ಎಂದು ತನ್ನ ಅಧಿಕಾರ ದರ್ಪವನ್ನು ತೋರಿಸಲು ಮುಂದಾಗಿದ್ದರು. ಆದರೆ ಇದ್ಯಾವುದಕ್ಕೂ ಹೆದರದ ಪೊಲೀಸ್‌ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ರಾಫಿಕ್‌ ಪೊಲೀಸ್‌ ಮತ್ತು ಬಿಜೆಪಿ ಶಾಸಕನ ಮಗನ ನಡುವಿನ ವಾಗ್ದಾಳಿಯ ವಿಡಿಯೋ ಈಗ ವೈರಲ್‌ ಆಗಿದೆ.

“ನೀವು ಇಲಾಖೆಯ ಖ್ಯಾತಿಗೆ ದಕ್ಕೆ ತರುತ್ತಿದ್ದೀರಿ” ಎಂದು ತಪೇಶ್‌ ಎಸ್‌ಪಿ ಸಿಂಗ್‌ಗೆ ಎದುರುತ್ತರ ನೀಡಿದ್ದಾನೆ. ಆಗ “ನೀವು ಸರಿಯಾಗಿ ಮಾತನಾಡಿದ್ದರೆ, ಪೊಲೀಸರೊಂದಿಗೆ ಸರಿಯಾಗಿ ವರ್ತಿಸಿದ್ದರೆ ಇಂತಹ ಪರಿಸ್ಥಿತಿ ಸೃಷ್ಟಿಯಾಗುತ್ತಿರಲಿಲ್ಲ. ನಿಮ್ಮ ವರ್ತನೆಯಿಂದ ನಿಮ್ಮ ತಂದೆಯ ಖ್ಯಾತಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದೀರಿ” ಎಂದು ಎಸ್‌ಪಿ ಸಿಂಗ್ ಕ್ಲಾಸ್‌ ತೆಗೆದುಕೊಂಡಿದ್ದಾರೆ.

“ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ನಿಮಗಿಂತ ನಾನು ಹೆಚ್ಚು ವಿದ್ಯಾವಂತ. ಹೇಗೆ ಮಾತನಾಡಬೇಕು ಎನ್ನುವುದು ನನಗೆ ಗೊತ್ತು. ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುತ್ತೇನೆ” ಎಂದು ಸಂಚಾರಿ ಪೊಲೀಸ್‌ ಧೈರ್ಯವಾಗಿ ಸಮಾಧಾನದಿಂದಲೇ ಉತ್ತರಿಸಿದ್ದಾರೆ.

ಹತ್ರಾಸ್‌ನ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅಶೋಕ್‌ ಕುಮಾರ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಘಟನೆಯ ಬಗ್ಗೆ ಮಾಹಿತಿ ದೃಢಪಟ್ಟಿದ್ದು, ತನಿಖೆ ನಡೆಯುತ್ತಿದೆ ಮತ್ತು ವಿಚಾರಣೆಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...