ರಾಜರಾಮ್ ಮೋಹನ್ ರಾಯ್ ‘ಬ್ರಿಟಿಷ್ ಏಜೆಂಟ್’ ಹೇಳಿಕೆ; ಕ್ಷಮೆಯಾಚಿಸಿದ ಬಿಜೆಪಿ ನಾಯಕ

Date:

ಸಮಾಜ ಸುಧಾರಕ ರಾಜರಾಮ್ ಮೋಹನ್ ರಾಯ್ ಅವರನ್ನು ‘ಬ್ರಿಟಿಷ್ ಏಜೆಂಟ್’ ಎಂದು ಕರೆದಿದ್ದ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಇಂದರ್ ಸಿಂಗ್ ಪರ್ಮಾರ್, ವಿವಾದವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. “ಬಾಯಿ ತಪ್ಪಿ ಹೇಳಿಕೆಯನ್ನು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಬುಡಕಟ್ಟು ಮುಖಂಡ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದಂದು ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಇಂದರ್ ಸಿಂಗ್, “ರಾಜರಾಮ್ ಮೋಹನ್ ರಾಯ್ ಒಬ್ಬ ಬ್ರಿಟಿಷ್ ಏಜೆಂಟ್. ದೇಶದಲ್ಲಿ ಬ್ರಿಟಿಷರ ದಲ್ಲಾಳಿಯಾಗಿ ಕೆಲಸ ಮಾಡಿದ್ದರು. ಧಾರ್ಮಿಕ ಮತಾಂತರಕ್ಕೆ ಸಹಾಯ ಮಾಡಿದ್ದರು” ಎಂದಿದ್ದರು.

ಇದನ್ನು ಓದಿದ್ದೀರಾ? ಉಡುಪಿ | ಸೌಹಾರ್ದ ಜಿಲ್ಲೆ ನಿರ್ಮಾಣದ ಸಂಕಲ್ಪದೊಂದಿಗೆ ಸಿಪಿಎಂ ಪರ್ಯಾಯ ಶಕ್ತಿ ಆಗಬೇಕು : ಸುರೇಶ್ ಕಲ್ಲಾಗರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬ್ರಿಟಿಷರು ಹಲವಾರು ಜನರನ್ನು ‘ನಕಲಿ ಸಮಾಜ ಸುಧಾರಕರು’ ಎಂದು ಬಿಂಬಿಸಿದ್ದರು. ಮತಾಂತರವನ್ನು ಪ್ರೋತ್ಸಾಹಿಸುವವರನ್ನು ಉತ್ತೇಜಿಸಿದ್ದು. ಇದನ್ನು ನಿಲ್ಲಿಸಿ ಬುಡಕಟ್ಟು ಸಮುದಾಯವನ್ನು ರಕ್ಷಿಸುವ ಧೈರ್ಯ ಯಾರಿಗಾದರೂ ಇದ್ದರೆ, ಅದು ಬಿರ್ಸಾ ಮುಂಡಾ ಮಾತ್ರ” ಎಂದೂ ಹೇಳಿಕೊಂಡಿದ್ದರು.

ಪರ್ಮಾರ್ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಟಿಎಂಸಿ ಸೇರಿದಂತೆ ಹಲವು ವಿಪಕ್ಷಗಳು ಹೇಳಿಕೆಯನ್ನು ಟೀಕಿಸಿದೆ. ಈ ಬೆನ್ನಲ್ಲೇ ಪರ್ಮಾರ್ ಕ್ಷಮೆಯಾಚಿಸಿದ್ದಾರೆ. “ರಾಜರಾಮ್ ಮೋಹನ್ ರಾಯ್ ಒಬ್ಬ ಸಮಾಜ ಸುಧಾರಕ, ಅವರನ್ನು ಗೌರವಿಸಬೇಕು. ನಾನು ಬಾಯಿ ತಪ್ಪಿ ಈ ಹೇಳಿಕೆ ನೀಡಿದೆ. ಈ ಹೇಳಿಕೆ ಬಗ್ಗೆ ತುಂಬಾ ದುಃಖಿತನಾಗಿದ್ದೇನೆ. ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

1772ರ ಮೇ 22ರಂದು ಜನಿಸಿದ ರಾಜರಾಮ್ ಮೋಹನ್ ರಾಯ್ ಬಂಗಾಳದ ರಾಧಾನಗರದಲ್ಲಿ ಸಾಂಪ್ರದಾಯಿಕ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದವರು. ಭಾರತೀಯ ನವೋದಯದ ಪಿತಾಮಹ ಎಂದೂ ಅವರನ್ನು ಕರೆಯಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...