ಏಕತಾ ಓಟ: ಕ್ರೇನ್ ಆಪರೇಟರ್ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ; ವಿಡಿಯೋ ವೈರಲ್

Date:

ಮಧ್ಯಪ್ರದೇಶ ಸತ್ನಾದಲ್ಲಿ ಬಿಜೆಪಿ ಸಂಸದ ಗಣೇಶ್ ಸಿಂಗ್ ಸಾರ್ವಜನಿಕವಾಗಿ ಪುರಸಭೆಯ ಕ್ರೇನ್ ಆಪರೇಟರ್‌ ಕೆನ್ನೆಗೆ ಬಾರಿಸಿದ್ದು ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಸತ್ನಾದ ಏಕತಾ ಓಟ ನಡೆಸಲಾಗಿದ್ದು ಈ ವೇಳೆ ನಡೆದಿದೆ.

ಸಂಸದರು ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕಲು ಹೈಡ್ರಾಲಿಕ್ ಕ್ರೇನ್‌ನಲ್ಲಿದ್ದರು. ಕ್ರೇನ್‌ನಿಂದ ಇಳಿಯುವಾಗ ಯಂತ್ರ ಕಂಪಿಸಿದೆ. ಕೆಲವು ಸೆಕೆಂಡುಗಳ ಕಾಲ ಗಣೇಶ್ ಸಿಂಗ್ ಕ್ರೇನ್‌ನಲ್ಲೇ ಸಿಲುಕಿದರು. ಇದರಿಂದಾಗಿ ಕೋಪಗೊಂಡ ಬಿಜೆಪಿ ಸಂಸದರು ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು ಮತ್ತು ದಾರಿಹೋಕರ ಮುಂದೆಯೇ ಪುರಸಭೆಯ ಉದ್ಯೋಗಿ, ಕ್ರೇನ್ ಆಪರೇಟರ್ ಗಣೇಶ್ ಕುಶ್ವಾಹ ಕೆನ್ನೆಗೆ ಬಾರಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಮಾನ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಕೆನ್ನೆಗೆ ಬಾರಿಸಿದ ಸ್ಪೈಸ್‌ಜೆಟ್ ಮಹಿಳಾ ಸಿಬ್ಬಂದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದ್ದು ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಸಂಸದರನ್ನು ಟೀಕಿಸಲಾಗುತ್ತಿದೆ. ವಿಡಿಯೋದಲ್ಲಿ ಸಂಸದರು ಕ್ರೇನ್‌ನಿಂದ ಇಳಿಯುವಾಗ ಆಪರೇಟರ್ ಅನ್ನು ಕರೆದು ಕೆನ್ನೆಗೆ ಬಾರಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಪುರಸಭೆಯ ಉದ್ಯೋಗಿಗಳು, “ಆಪರೇಟರ್ ತನ್ನ ಕೆಲಸವನ್ನು ಮಾತ್ರ ಮಾಡುತ್ತಿದ್ದರು. ಆದರೆ ಸಣ್ಣ ತಾಂತ್ರಿಕ ದೋಷ ಉಂಟಾಗಿದೆ. ಆದರೆ ಸಂಸದರ ತಾಳ್ಮೆ ಕಳೆದುಕೊಂಡರು” ಎಂದು ಹೇಳಿದ್ದಾರೆ.

ಇದಾದ ಸ್ವಲ್ಪ ಸಮಯದ ನಂತರ, ಸಂಸದರ ಬೆಂಬಲಿಗರು ನೀತಾ ಸೋನಿ ಸಾಮಾಜಿಕ ಮಾಧ್ಯಮದಲ್ಲಿ ಈ ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಸಂಸದರು ಕ್ರೇನ್ ಆಪರೇಟರ್‌ ಕೆನ್ನೆಗೆ ಬಾರಿಸಿದರು. ಅವರ ಕೈಕಾಲು ಮುರಿಯಬೇಕಿತ್ತು. ಸಂಸದರು ಆ ಎತ್ತರದಿಂದ ಕೆಳಕ್ಕೆ ಬಿದ್ದಿದ್ದರೆ, ಯಾರು ಜವಾಬ್ದಾರರು” ಎಂದು ಪ್ರಶ್ನಿಸಿದ್ದಾರೆ.

ಈ ಪೋಸ್ಟ್ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಈ ಕೃತ್ಯವನ್ನು ಖಂಡಿಸಿದ್ದು, “ದುರಹಂಕಾರ ಮತ್ತು ಅಧಿಕಾರದ ಅಮಲಿನ ಪ್ರದರ್ಶನ” ಎಂದು ಹೇಳಿದೆ. ಕಾಂಗ್ರೆಸ್ ವಕ್ತಾರ ಅಭಿನವ್ ಬರೌಲಿಯಾ, “ಇದು ಬಿಜೆಪಿಯ ನಿಜವಾದ ಮುಖ. ಬಿಜೆಪಿ ನಾಯಕರು ಸರ್ಕಾರಿ ಕೆಲಸಗಾರರನ್ನು, ಜನರನ್ನು ತಮ್ಮ ಆಳುಗಳಂತೆ ನೋಡುತ್ತಾರೆ” ಎಂದು ಟೀಕಿಸಿದ್ದಾರೆ.

ಸದ್ಯ ಏಕತೆ ಮತ್ತು ಗೌರವವನ್ನು ಉತ್ತೇಜಿಸಲು ಆಯೋಜಿಸಲಾಗಿದ್ದ ಸರ್ಕಾರದ ಕಾರ್ಯಕ್ರಮದಲ್ಲೇ ನಡೆದ ಹಲ್ಲೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸಂಸದರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆಯೇ ಮತ್ತು ಕ್ರೇನ್ ಆಪರೇಟರ್ ದೂರು ನೀಡುತ್ತಾರೆಯೇ ಅಥವಾ ನೀಡಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...