ಬಿಜೆಪಿ ಸಂಸದರು ಕನ್ನಡಿಗರ ಪಾಲಿಗೆ ಇದ್ದೂ ಇಲ್ಲದಂತಿರುವ ನಿರುಪಯೋಗಿ ಜೀವಿಗಳು!

Date:

ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ, ಸುಟ್ಟರೇ ನೊಸಲಿಗೆ ವಿಭೂತಿಯಾದೆ ತಟ್ಟದೇ ಹಾಕಿದರೆ ಮೇಲುಗೊಬ್ಬರವಾದೆ, ಆದರೆ ನೀವಾರಿಗಾದಿರೋ ಬಿಜೆಪಿ ಸಂಸದರೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಖ್ಯಾತ ಕವಿ ಎಸ್ ಜಿ. ನರಸಿಂಹಾಚಾರ್ ಅವರ ಕವನವನ್ನು ಹಿನ್ನೆಲೆಯನ್ನಾಗ ಇಟ್ಟುಕೊಂಡು ಅವರು ರಾಜ್ಯದ ಸಮಸ್ಯೆಗಳ ಪ್ರಶ್ನೆ ಎದುರಾದಾಗ ಬಿಜೆಪಿ ಸಂಸದರು ಮೌನಕ್ಕೆ ಶರಣಾಗಿದ್ದಾರೆ ಎಂದು ʼಎಕ್ಸ್ʼ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡು ಬಿಜೆಪಿ ಸಂಸದರನ್ನು ಕಟುವಾಗಿ ಟೀಕಿಸಿದ್ದಾರೆ.

“ನೆರೆ ಬಂದಾಗ ಯಡಿಯೂರಪ್ಪನವರು ವೇದಿಕೆ ಮೇಲೆಯೇ ನೆರೆ ಪರಿಹಾರಕ್ಕೆ ಪ್ರಧಾನಿಗೆ ಆಗ್ರಹಿಸಿದ್ದಾಗಲೂ ಬಿಜೆಪಿ ಸಂಸದರು ಕರ್ನಾಟಕದ ಪರ ಬಾಯಿ ಬಿಡಲಿಲ್ಲ. ಜಿಎಸ್‌ಟಿ ಪರಿಹಾರ, ವಿಶೇಷ ಅನುದಾನದಲ್ಲಿನ ಅನ್ಯಾಯದ ಕುರಿತು ಬೊಮ್ಮಾಯಿಯವರು ಮಾತಾಡಿದಾಗಲೂ ಬಿಜೆಪಿ ಸಂಸದರು ಬಾಯಿ ಬಿಡಲಿಲ್ಲ.ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಕಡೆಗಣಿಸಿದಾಗಲೂ ಬಿಜೆಪಿ ಸಂಸದರು ತುಟಿ ಬಿಚ್ಚಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

https://x.com/PriyankKharge/status/1777200754656526632

“ಕೋವಿಡ್ ಸಮಯದಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ವ್ಯಾಕ್ಸಿನ್ ಹಂಚಿಕೆಯಲ್ಲಿ ರಾಜ್ಯವನ್ನು ಕಡೆಗಣಿಸಿದಾಗಲೂ ಬಿಜೆಪಿ ಸಂಸದರು ಮಾತಾಡಲಿಲ್ಲ. ಯಾವುದೇ ವಿಷಯದಲ್ಲೂ ಕರ್ನಾಟಕದ ಪರವಾಗಿ ಸಂಸದರ ನಿಯೋಗ ಕೇಂದ್ರ ಸರ್ಕಾರವನ್ನು ಭೇಟಿಯಾದ ಉದಾಹರಣೆಯೇ ಇಲ್ಲ.ಈಗ ಭೀಕರ ಬರ ಎದುರಿಸುತ್ತಿರುವ ರಾಜ್ಯಕ್ಕೆ ಬರ ಪರಿಹಾರ ಕೇಳುವುದಕ್ಕೂ ಬಿಜೆಪಿ ಸಂಸದರ ಧ್ವನಿ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದತ್ತ ದೇಶ ದಾಪುಗಾಲು ಹಾಕುತ್ತಿಲ್ಲವೇ? ಅವರಿಗಾದದ್ದು ನಮಗಾಗುವುದಿಲ್ಲವೇ?

“ಜಗತ್ತಿನಲ್ಲಿ ಪ್ರತಿ ವಸ್ತುವೂ ಒಂದಿಲ್ಲೊಂದು ಉಪಯೋಗಕ್ಕೆ ಬರುತ್ತವೆ, ಆದರೆ ಯಾವುದೇ ಪ್ರಯೋಜನಕ್ಕೆ ಬಾರದ ಬಿಜೆಪಿ ಸಂಸದರು ಕನ್ನಡಿಗರ ಪಾಲಿಗೆ ಇದ್ದೂ ಇಲ್ಲದಂತಿರುವ ನಿರುಪಯೋಗಿ ಜೀವಿಗಳು! ಎಂದು ಖರ್ಗೆ ಜರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...