ಮುಡಾ, ವಾಲ್ಮೀಕಿ ನಿಗಮ ಅಕ್ರಮ ಖಂಡಿಸಿ ದೆಹಲಿಯಲ್ಲಿ ಬಿಜೆಪಿ ಸಂಸದರ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ

Date:

ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಖಂಡಿಸಿ ಪ್ರತಿಭಟಿಸಿದರು.

ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿದೆ. ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು.

‘ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂಬರ್ಥವುಳ್ಳ ಹಿಂದಿ ಘೋಷಣೆ ಕೂಗಿದರು. ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಕೇಳಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ರಿಟರ್ನ್ ದಿ ಲೂಟೆಡ್ ಮನಿ ಬಿಲಾಂಗಿಂಗ್ ಟು ಎಸ್‍ಟಿ ಕಮ್ಯುನಿಟಿ’, ಮುಡಾ ಹಗರಣದಲ್ಲಿ ಕೋಟಿ ಕೋಟಿ ನುಂಗಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ- ಇವೇ ಮೊದಲಾದ ಪ್ಲಕಾರ್ಡ್ ಹಿಡಿದು ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಂಸದ ಜಗದೀಶ ಶೆಟ್ಟರ್ ಮಾತನಾಡಿ, “ಮುಖ್ಯಮಂತ್ರಿಗಳು ಮುಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಸಂಸದ ಗೋವಿಂದ ಕಾರಜೋಳ ಮಾತನಾಡಿ, “ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಪಿ.ಸಿ.ಮೋಹನ್ ಅವರು ಮಾತನಾಡಿ, “ವಾಲ್ಮೀಕಿ ನಿಗಮದ ಹಗರಣ- ಮೂಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು” ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...