ಬಿಜೆಪಿ ರಾಜಕೀಯ ಪಕ್ಷವಲ್ಲ, ಮೋದಿಯನ್ನು ಆರಾಧಿಸುವ ಭಕ್ತಗಣ: ಪಿ ಚಿದಂಬರಂ

Date:

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಭಾನುವಾರ ವಾಗ್ದಾಳಿ ನಡೆಸಿದ್ದು, “ಬಿಜೆಪಿ ಪಕ್ಷವು ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಾಧಿಸುವ ಭಕ್ತಗಣವಾಗಿದೆ” ಎಂದು ಹೇಳಿದ್ದಾರೆ.

“ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ” ಎಂದು ಹೇಳಿದ ಚಿದಂಬರಂ ಅವರು, ಪ್ರಜಾಪ್ರಭುತ್ವವನ್ನು ಮತ್ತೆ ನಮ್ಮ ದೇಶದಲ್ಲಿ ಸ್ಥಾಪಿಸಿ ಎಂದು ಆಗ್ರಹಿಸಿದ್ದಾರೆ.


ಇನ್ನು ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸದಿದ್ದರೂ, ಇಂಡಿಯಾ ಬಣ ಅಧಿಕಾರಕ್ಕೆ ಬಂದ ನಂತರ ಸಿಎಎ ರದ್ದುಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್‌ ಎಲ್ಲ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ: ಪಿ ಚಿದಂಬರಂ

ತಮಿಳುನಾಡಿನ ಎಲ್ಲಾ 39 ಸ್ಥಾನಗಳು ಮತ್ತು ಚುನಾವಣೆ ಮುಗಿದ ಪಾಂಡಿಚೇರಿಯ ಒಂದು ಸ್ಥಾನವನ್ನು ಇಂಡಿಯಾ ಒಕ್ಕೂಟ ಗೆಲ್ಲಲಿದೆ ಎಂದು ಚಿದಂಬರಂ ಭರವಸೆ ವ್ಯಕ್ತಪಡಿಸಿದರು.

“ಪ್ರಣಾಳಿಕೆ ಎಂಬ ಹೆಸರಿಲ್ಲದ ಪ್ರಣಾಳಿಕೆಯನ್ನು ಬಿಜೆಪಿಯು 14 ದಿನಗಳಲ್ಲಿ ರಚಿಸಿದೆ. ಅವರು ಅದನ್ನು ಮೋದಿ ಗ್ಯಾರಂಟಿ ಎಂದು ಕರೆದಿದ್ದಾರೆ. ಬಿಜೆಪಿ ಇನ್ನು ಮುಂದೆ ರಾಜಕೀಯ ಪಕ್ಷವಾಗಿ ಉಳಿದಿಲ್ಲ. ಬದಲಾಗಿ ಭಕ್ತಗಣವಾಗಿ ಬದಲಾಗಿದೆ. ನರೇಂದ್ರ ಮೋದಿ ಅವರನ್ನು ಆರಾಧಿಸುವ ಭಕ್ತಗಣವಾಗಿದೆ” ಎಂದು ಚಿದಂಬರಂ ಟೀಕಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿ ಅಜೆಂಡಾದಂತೆ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ ಉಳಿಯಲ್ಲ: ಪಿ ಚಿದಂಬರಂ

“ಬಿಜೆಪಿಯಲ್ಲಿರುವ ವ್ಯಕ್ತಿ ಆರಾಧನೆಯನ್ನು ‘ಮೋದಿ ಕಿ ಗ್ಯಾರಂಟಿ’ ಎಂಬುವುದು ಎತ್ತಿ ತೋರಿಸುತ್ತದೆ. ಭಾರತದಲ್ಲಿ ಆ ಆರಾಧನೆಯು ಬಲಗೊಳ್ಳಲು ಪ್ರಾರಂಭಿಸಿದೆ ಮತ್ತು ಸರ್ವಾಧಿಕಾರಕ್ಕೆ ಕಾರಣವಾಗುತ್ತದೆ” ಎಂದು ಅಭಿಪ್ರಾಯಿಸಿದರು.

“ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರೀ ಧಕ್ಕೆ ಉಂಟು ಮಾಡಿದೆ. ಮೋದಿ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದರೆ, ಅವರು ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಹಾಗಿರುವಾಗ ನಾವು ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕಾಗಿದೆ” ಎಂದು ಚಿದಂಬರಂ ಪುನರುಚ್ಛರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...