ಬಿಜೆಪಿ ಪಾದಯಾತ್ರೆ | ಭ್ರಷ್ಟಾಚಾರ ವಿರುದ್ಧ ನಮ್ಮ ಹೋರಾಟ ತಾರ್ಕಿಕ ಅಂತ್ಯ ಕಾಣಲಿದೆ: ವಿಜಯೇಂದ್ರ

Date:

ಕಾಂಗ್ರೆಸ್ ಮತ್ತು ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಮ್ಮ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. 8 ದಿನಗಳ ಕಾಲ ಪಾದಯಾತ್ರೆ ನಡೆಯುತ್ತಿದ್ದು, ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಾಳೆ ಪಾದಯಾತ್ರೆಗೆ ಚಾಲನೆ ಕೊಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ಕರೆದು ಮಾತನಾಡಿದ ಅವರು, “ಹಗರಣಗಳ ಸರ್ಕಾರ ರಾಜ್ಯದಲ್ಲಿದೆ. ಇದು ಬಡವರ ವಿರೋಧಿ, ಪರಿಶಿಷ್ಟ ಸಮುದಾಯಗಳ ವಿರೋಧಿ ಸರ್ಕಾರ. ನಮ್ಮ ಪ್ರತಿಭಟನೆ ಭ್ರಷ್ಟಾಚಾರ ವಿರುದ್ಧ” ಎಂದರು.

“ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯತೆಯ ಕೊಡುಗೆ ನೀಡಿದೆ. ಅಹಿಂದ ಹೆಸರಿನಿಂದ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯನವರು ಎಲ್ಲ ಸಮುದಾಯಗಳಿಗೆ ಮೋಸ ಮಾಡಿದ್ದಾರೆ. ಪರಿಶಿಷ್ಟರ ಹಣ ಲೂಟಿ ಮಾಡಲಾಗಿದೆ. ಬಿಜೆಪಿ- ಜೆಡಿಎಸ್ ಜೊತೆಗೂಡಿ ಹೋರಾಟ ನಡೆಸುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಳೆ ಸುಮಾರು 16 ಕಿ.ಮೀ ಪಾದಯಾತ್ರೆ ಇರಲಿದೆ. ಎರಡನೇ ದಿನ ಭಾನುವಾರ ಮಂಜುನಾಥ ಕನ್ವೆನ್ಷನ್ ಹಾಲ್ ಬಿಡದಿಯಿಂದ ಆರಂಭಗೊಂಡು 22 ಕಿಮೀ, 5ರಂದು ಕೆಂಗಲ್ ಕೆವಿಕೆ ಕನ್ವೆನ್ಷನ್ ಹಾಲ್ ನಿಂದ ಆರಂಭವಾಗಿ ಸುಮಾರು 20 ಕಿಮೀ ಕ್ರಮಿಸುತ್ತೇವೆ. 6ರಂದು ನಿಡಘಟ್ಟ ಸುಮಿತ್ರಾದೇವಿ ಕನ್ವೆನ್ಷನ್ ಹಾಲ್ ನಿಂದ ಆರಂಭವಾಗಿ ಸುಮಾರು 20 ಕಿಮೀ ಕ್ರಮಿಸುತ್ತೇವೆ. 5ನೇ ದಿನ ಮಂಡ್ಯ ಶಶಿಕಿರಣ್ ಕನ್ವೆನ್ಷನ್ ಹಾಲ್ ನಿಂದ ಆರಂಭವಾಗಿ 16 ಕಿಮೀ, 8ರಂದು ಗುರುವಾರ ತೂಬಿನಕೆರೆ ಕೈಗಾರಿಕಾ ಪ್ರದೇಶದ ಬಳಿಯಿಂದ, 9ರಂದು ಶುಕ್ರವಾರ ಶ್ರೀರಂಗಪಟ್ಟಣ ಮಂಜುನಾಥ ಕಲ್ಯಾಣಮಂಟಪದಿಂದ ಆರಂಭವಾಗಲಿದೆ. 10ರಂದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ” ಎಂದು ವಿವರಿಸಿದರು.

“ಪಾದಯಾತ್ರೆಯಲ್ಲಿ ಪ್ರತಿದಿನ ಕನಿಷ್ಠ 8ರಿಂದ 10 ಸಾವಿರ ಜನರು ಪಾಲ್ಗೊಳ್ಳುತ್ತಾರೆ. ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರು ಬರಲಿದ್ದಾರೆ. ಎಲ್ಲರೂ ಉತ್ಸಾಹದಿಂದ ಭಾಗವಹಿಸುತ್ತಾರೆ. ಇದರ ರೂಟ್ ಮ್ಯಾಪ್ ಸಿದ್ಧಗೊಂಡಿದೆ” ಎಂದರು.

ರಾಜ್ಯಪಾಲರನ್ನು ಪ್ರಶ್ನಿಸುವ ಕೆಲಸ ಆಕ್ಷೇಪ

“ಕಾಂಗ್ರೆಸ್ ಸರ್ಕಾರ ಹೊಸ ಇತಿಹಾಸ ಸೃಷ್ಟಿಸಿದೆ. ಮುಖ್ಯಮಂತ್ರಿಗಳಿಲ್ಲದೇ ಸಚಿವ ಸಂಪುಟದ ಸಭೆ ನಡೆದಿದೆ. ರಾಜ್ಯಪಾಲರ ನೋಟಿಸ್‌ಗೆ ಉತ್ತರ ಕೊಡಬೇಕಾದ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಪ್ರಶ್ನಿಸುವ ಕೆಲಸ ಆಗಿದೆ” ಎಂದು ಆಕ್ಷೇಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...