ಹರಿಯಾಣ ರಾಜ್ಯಾಧ್ಯಕ್ಷ ನೇಮಕದಲ್ಲಿ ಬ್ರಾಹ್ಮಣ ‘ಕಾರ್ಡ್’ ಬಳಸಿದ ಬಿಜೆಪಿ; ಒಲಿಯುತ್ತಾ ಜಾತಿ ಸಮೀಕರಣ

Date:

ಹರಿಯಾಣದಲ್ಲಿ ಬಿಜೆಪಿ ತನ್ನ ರಾಜ್ಯಾಧ್ಯಕ್ಷರ ನೇಮಕದಲ್ಲಿ ಬ್ರಾಹ್ಮಣ ‘ಕಾರ್ಡ್‌’ಅನ್ನು ದಾಳವಾಗಿ ಬಳಸಿದೆ. ಬ್ರಾಹ್ಮಣ ಸಮುದಾಯದ ನಾಯಕ, ಮೊದಲ ಬಾರಿಯ ಶಾಸಕ ಮೋಹನ್ ಲಾಲ್ ಬಡೋಲಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ. ಇತ್ತೀಚೆಗೆ, ಒಬಿಸಿ ಸಮುದಾಯದ ನಾಯಬ್ ಸಿಂಗ್‌ ಸೈನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದ ಬಿಜೆಪಿ, ಇದೀಗ, ಬ್ರಾಹ್ಮಣರನ್ನು ಓಲೈಸಲು ಬಡೋಲಿಯನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.

ಬಿಜೆಪಿಯ ನಡೆ ಜಾಟ್ ಸಮುದಾಯವನ್ನು ದಾಟಿ, ಉಳಿದ ಸಮುದಾಯಗಳನ್ನೂ ತನ್ನ ಮತಬ್ಯಾಂಕ್‌ನಲ್ಲಿ ಕ್ರೋಢೀಕರಿಸುವ ಪ್ರಯತ್ನವಾಗಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಬ್ರಾಹ್ಮಣರು ಹೆಚ್ಚಾಗಿ ಕಾಂಗ್ರೆಸ್‌ಅನ್ನು ಬೆಂಬಲಿಸುತ್ತಿದ್ದಾರೆ.

ಮಂಗಳವಾರ, ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಡೋಲಿ, 2019ರಲ್ಲಿ ಹರ್ಯಾಣ ವಿಧಾನಸಭೆಗೆ ರಾಯ್ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದಿದ್ದರು. ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮೊದಲ ಬಾರಿಗೆ ಗೆಲುವು ಸಾಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಟ್‌ಗಳು ರಾಜ್ಯದಲ್ಲಿ ಪ್ರಬಲ ಜಾತಿಯಾಗಿದ್ದು, ಜಾಟ್‌ ನಂತರದಲ್ಲಿ ಬ್ರಾಹ್ಮಣ ಜನಸಂಖ್ಯೆಯೂ ಗಣನೀಯವಾಗಿದೆ. ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಕೂಡ ಬ್ರಾಹ್ಮಣ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ನ ಮತಬ್ಯಾಂಕ್‌ಅನ್ನು ಒಡೆಯಲು ಬಿಜೆಪಿ ಎಲ್ಲ ದಾಳಗಳನ್ನೂ ಉರುಳಿಸುತ್ತಿದೆ.

ಸೈನಿ ಒಬಿಸಿಯಿಂದ ಬಂದವರಾಗಿದ್ದರೆ, ಹಿಂದಿನ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಪಂಜಾಬಿ ಸಮುದಾಯಕ್ಕೆ ಸೇರಿದವರು ಮತ್ತು ಹೊಸ ರಾಜ್ಯ ಬಿಜೆಪಿ ಮುಖ್ಯಸ್ಥ ಬ್ರಾಹ್ಮಣ ಜಾತಿಯವರು. ಬಿಜೆಪಿಯು ಈ ಬಲವಾದ ಜಾತಿ ಸಂಯೋಜನೆಯೊಂದಿಗೆ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆಲ್ಲಲು ಯತ್ನಿಸುತ್ತಿದೆ.

ಅದಾಗ್ಯೂ, ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದ ಬಡೋಲಿ ಅವರು ಸೋನಿಪತ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ವಿರುದ್ಧ ಸೋಲುಂಡಿದ್ದಾರೆ. ತಿಂಗಳ ಹಿಂದೆಯಷ್ಟೇ ಸೋಲುಂಡ ಬಡೋಲಿ ಅವರನ್ನು ಈಗ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ.

ಗಮನಾರ್ಹವಾಗಿ, ಹರಿಯಾಣದಲ್ಲಿ ಬಿಜೆಪಿ 2014ರಿಂದ ಅಧಿಕಾರದಲ್ಲಿದೆ. 10 ವರ್ಷಗಳ ಆಡಳಿತದಲ್ಲಿ ಜನರು ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜೊತೆಗೆ, ರೈತ ಹೋರಾಟದ ಸಮಯದಲ್ಲಿ ಹರಿಯಾಣ ಸರ್ಕಾರ ಎಸಗಿದ ದೌರ್ಜನ್ಯಗಳು ಜಾಟ್‌ ಸಮುದಾಯವೂ ಸೇರಿದಂತೆ ರೈತ, ಕೃಷಿ ಕಾರ್ಮಿಕರು ಬಿಜೆಪಿ ವಿರುದ್ಧ ಆಕ್ರೋಶಗೊಳ್ಳುವಂತೆ ಮಾಡಿದೆ. ರಾಜ್ಯದ ಜನರು ಬಿಜೆಪಿ ವಿರುದ್ಧವಿದ್ದಾರೆ ಎಂಬುದನ್ನು ಕಳೆದ ಲೋಕಸಭಾ ಚುನಾವಣೆ ಸೂಚಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದ ಒಟ್ಟು 10 ಸ್ಥಾನಗಳನ್ನೂ ಗೆದ್ದುಕೊಂಡಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ 5 ಸ್ಥಾನಗಳನ್ನು ಕಳೆದುಕೊಂಡಿದೆ. ಆ 5 ಸ್ಥಾನಗಳನ್ನು ಕಾಂಗ್ರೆಸ್‌ ದೋಚಿಕೊಂಡಿದೆ. ಈ ವರ್ಷದ ಅಂತ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ, ಅಧಿಕಾರಕ್ಕೇರಲು ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್‌ ಜೊತೆಗೆ ಎಎಪಿ ಕೈಜೋಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...