ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ!

Date:

ಅನುದಾನ ನೀಡಿಕೆಯಲ್ಲಿ ತಾರತಮ್ಯ ನೀಡಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಅತ್ತ ದೆಹಲಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಇತ್ತ ಬೆಂಗಳೂರಿನಲ್ಲಿ ಪ್ರತಿಪಕ್ಷ ಬಿಜೆಪಿಯು ಬರ ಪರಿಹಾರ ಕ್ರಮಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸೇರಿರುವ ಬಿಜೆಪಿ ಶಾಸಕರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಮತ್ತಿತರರು ಭಾಗವಹಿಸಿದ್ದಾರೆ.

WhatsApp Image 2024 02 07 at 11.56.52 AM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರದಿಂದ ಬಂದ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ಅನುದಾನ ನೀಡಿಲ್ಲ ಎಂದು ಆರೋಪಿಸುತ್ತಿದೆ. ಕಾಂಗ್ರೆಸ್ ಸರ್ಕಾರವು ಹಾಲು ಉತ್ಪಾದಕರನ್ನು ವಂಚಿಸಿ ನಂದಿನಿಯನ್ನು ಮುಳುಗಿಸುತ್ತಿದೆ. ಸರ್ಕಾರವು ಎಸ್‌ಸಿ-ಎಸ್‌ಟಿಗಳ ಹಣ ನುಂಗಿ ಹಾಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ನಾಯಕರು ದೂರಿದ್ದು, ಪ್ರತಿಭಟನೆ ನಡೆಸಿದರು.

ಇದನ್ನು ಓದಿದ್ದೀರಾ? ದೆಹಲಿ ಚಲೋ | ಇದು ಎಲ್ಲ ರಾಜ್ಯಗಳ ಪ್ರಶ್ನೆ; ಅನ್ಯಾಯ ಮುಂದುವರಿಯಬಾರದು: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರವೇ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲಪೀಡಿತ ಎಂದು ಘೋಷಿಸಿದ್ದರೂ ಕುಡಿಯುವ ನೀರು ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮಗಳನ್ನು ಕೈಗೊಳ್ಳದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗವಹಿಸಿದ್ದಾರೆ. ಈ ನಡುವೆ ದೆಹಲಿಯಲ್ಲಿ ಕೂಡ ಬಿಜೆಪಿ ಸಂಸದರು ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...