ಎಸ್‍ಸಿಪಿ-ಟಿಎಸ್‍ಪಿ ಹಣ ದುರ್ಬಳಕೆ ವಿರೋಧಿಸಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Date:

ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.

ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ನಡೆದ ‘ಎಸ್‍ಸಿಪಿ-ಟಿಎಸ್‍ಪಿ ಹಣ ದುರ್ಬಳಕೆ’ ವಿರೋಧಿಸಿ ಸರ್ಕಾರದ ವಿರುದ್ಧ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

“ದುಷ್ಟ, ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ. ನಮ್ಮ ಹೋರಾಟ ನಿರಂತರವಾಗಿರಲು ಕೈಜೋಡಿಸಿ. ನಾಳೆ ಬೆಳಿಗ್ಗೆ ಇದೇ ಜಾಗದಲ್ಲಿ ಬೃಹತ್ ಹೋರಾಟ ನಡೆಯಲಿದೆ. ಎಲ್ಲರೂ ಭಾಗವಹಿಸಿ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ಮಾಡಿಲ್ಲ, ಮಾಡುವುದೂ ಇಲ್ಲ. ಈ ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತ ಬಂದಿದೆ. ಬಿಜೆಪಿ ಯಾವತ್ತೂ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಪರವಾಗಿದೆ” ಎಂದರು.

“ರಾಜ್ಯದ ಎಸ್‍ಸಿ, ಎಸ್‍ಟಿ ಸಮುದಾಯಗಳ ಹಣವನ್ನು ದುರುಪಯೋಗ ಮಾಡುವ ಕಾಂಗ್ರೆಸ್ ಸರಕಾರದ ವಿರುದ್ಧ 14 ತಂಡಗಳನ್ನು ರಚಿಸಿ ಜನಾಂದೋಲನ ರೂಪಿಸಲಾಗಿದೆ. ಚುನಾವಣೆ ಪೂರ್ವದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯ ಸೇರಿ ಎಲ್ಲರಿಗೂ ನ್ಯಾಯ ಕೊಡುವುದಾಗಿ ಹಾಗೂ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಹೇಳಿ ಅಧಿಕಾರಕ್ಕೆ ಬಂದಿದೆ”ಎಂದು ವಿವರಿಸಿದರು.

ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆ

“ಬಿಬಿಎಂಪಿಯಲ್ಲಿ ಬಿಜೆಪಿ ಸ್ವಂತ ಶಕ್ತಿಯಲ್ಲಿ ಅಧಿಕಾರ ಪಡೆಯುವಂತಾಗಬೇಕಿದೆ. ಮುಂದಿನ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯು ಕಾರ್ಯಕರ್ತರಿಗೆ ಶಕ್ತಿ ತುಂಬಲಿದೆ. ನಾವೆಲ್ಲರೂ ಒಗ್ಗೂಡಿ ಕಾರ್ಯಕರ್ತರ ಚುನಾವಣೆ ಎದುರಿಸಿ ಗೆಲ್ಲಿಸಲಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದಣ್ಣ, ಲೂಟಿ ಗ್ಯಾರಂಟಿ ಅಣ್ಣ: ಆರ್. ಅಶೋಕ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, “ಸರಕಾರದಲ್ಲಿ ದುಡ್ಡಿಲ್ಲ, ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ಧಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ. ನಾನು ಸಿದ್ದಣ್ಣ, ಲೂಟಿ ಗ್ಯಾರಂಟಿ ಅಣ್ಣ ಎಂಬಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದರು.

“ರಾಜ್ಯವನ್ನು ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್. ಎಲ್ಲ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಈ ಮನೆಹಾಳ ಕಾಂಗ್ರೆಸ್ ಸರಕಾರ ನೀಡಿದೆ” ಎಂದು ಆರೋಪಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ದಲಿತರ ಹಣ ದುರ್ಬಳಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಂದೋಲನ ರೂಪಿಸಿದೆ. ಬಿಜೆಪಿಯ ದಲಿತಪರ ಚಿಂತನೆ, ಅವರ ಪರವಾದ ಯೋಜನೆಗಳೇ ಕಾರಣ ಎಂದು ತಿಳಿಸಿದರು. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಈ ವಿಷಯವನ್ನು ತೀಕ್ಷ್ಣವಾಗಿ ಪರಿಗಣಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಕಿಡಿಕಾರಿದರು.

ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶಾಸಕರಾದ ಎಸ್.ಆರ್.ವಿಶ್ವನಾಥ್, ಬೈರತಿ ಬಸವರಾಜ್, ಮಾನಪ್ಪ ವಜ್ಜಲ್, ಉದಯ್ ಗರುಡಾಚಾರ್, ರಘು, ಸಿಮೆಂಟ್ ಮಂಜು, ಭಾಗೀರಥಿ ಮರುಳಸಿದ್ದಯ್ಯ, ಮಾಜಿ ಶಾಸಕ ಹಾಲಪ್ಪ, ಪ್ರಕೋಷ್ಠಗಳ ಸಂಯೋಜಕ ದತ್ತಾತ್ರಿ, ಮುಖಂಡರಾದ ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಉಮೇಶ್ ಶೆಟ್ಟಿ, ರವೀಂದ್ರ, ನಗರದ 3 ಜಿಲ್ಲೆಗಳ ಅಧ್ಯಕ್ಷರಾದ ಹರೀಶ್, ರಾಮಮೂರ್ತಿ, ಸಪ್ತಗಿರಿ ಗೌಡ ಸೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...