ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್‌. ಆಂಜನೇಯ

Date:

“ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮ, ನಮ್ಮ ರಾಮ ಸಿದ್ದರಾಮಯ್ಯ” ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್. ಆಂಜನೇಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು. ಸ್ವತಃ ಸಿದ್ದರಾಮಯ್ಯ ಅವರೇ ರಾಮ, ಹೀಗಿರುವಾಗ ಆ ರಾಮನಿಗೇಕೆ ಹೋಗಿ ಅವರು ಪೂಜಿಸಬೇಕು” ಎಂದು ಪ್ರಶ್ನಿಸಿದ್ದಾರೆ.

“ಸಿದ್ಧರಾಮನಹುಂಡಿಯಲ್ಲಿ ರಾಮನ ದೇವಸ್ಥಾನ ಇದೆ, ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮ. ಬಿಜೆಪಿಯವರನ್ನು ಕರೆಸಿಕೊಂಡು ಭಜನೆ ಮಾಡುತ್ತಾರೆ. ನಮ್ಮ ರಾಮ ಎಲ್ಲ ಕಡೆಗೂ ಇದ್ದಾನೆ, ನಾನು ಆಂಜನೇಯ. ನಾವೆಲ್ಲಾ ಶ್ರೀರಾಮನ ಭಕ್ತರು” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸಮುದಾಯದವರು ರಾಮ, ಆಂಜನೇಯ, ಹನುಮಂತ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಬಿಜೆಪಿಯವರದ್ದು ಧರ್ಮಗಳನ್ನು ಒಡೆದು ಆಳುವ ನೀತಿ. ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಟಿಸುವ ಭ್ರಮೆ ಬಿಜೆಪಿಗಿದೆ” ಎಂದು ಆಂಜನೇಯ ಟೀಕಿಸಿದರು.

“ಬಿಜೆಪಿ ಆಡಳಿತದಲ್ಲಿ ಯಾರಿಗೆ ಅನುಕೂಲ ಆಗಿದೆ? ಹಿಂದೂ ಯುವಕರಿಗೆ ಬಿಜೆಪಿ ಆಡಳಿತದಿಂದ ಅನುಕೂಲ ಆಗಿದೆಯಾ?” ಎಂದು ಕೇಳಿದ ಅವರು, “ನಾವೆಲ್ಲಾ ಹಿಂದೂಗಳೇ, ಹಿಂದೂ, ಹಿಂದೂ ಧರ್ಮವನ್ನ ಬಿಜೆಪಿ ಕೊಂಡುಕೊಂಡಿಲ್ಲ. ಧರ್ಮದಲ್ಲಿನ ಮೇಲು ಕೀಳು, ಶೋಷಣೆಗೆ ಪರಿಹಾರ ನೀಡಿದ್ದಾರೆಯೇ” ಎಂದು ಆಂಜನೇಯ ಪ್ರಶ್ನಿಸಿದರು.

“ಮಂದಿರ ನಿರ್ಮಾಣ ಸಾಕು, ಮನೆ-ಮನ ಕಟ್ಟುವ ಕೆಲಸ ಆಗಬೇಕು. ದೇಶದ ಅನೇಕ ಜನ ನಾಯಿ ನರಿ ವಾಸಿಸಲು ಯೋಗ್ಯವಲ್ಲದ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಅಂಥವರ ಕಣ್ಣೀರೊರೆಸಿ ಸೂರು ಕೊಟ್ಟು ರಕ್ಷಣೆ ಮಾಡುವ ಕೆಲಸ ಆಗಲಿ. ಸೂರಿಲ್ಲದವರಿಗೆ ಮನೆ ಕಟ್ಟಿಸಿ ರಾಮಮಂದಿರ ಅಂತ ಹೆಸರಿಡಿ. ಆಗ ನಿಜವಾದ ರಾಮ ಬಂದು ಆಶೀರ್ವದಿಸುತ್ತಾನೆ. ಓಟಿನ ರಾಮ ಅಲ್ಲ, ಓಟಿಗಾಗಿ ಬಿಜೆಪಿ ರಾಮನ ಮಾಡುವುದು ಬೇಡ” ಎಂದು ಆಂಜನೇಯ ಬಿಜೆಪಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಹಿಂದೂ ಸಮಾಜಕ್ಕೆ ಅವಮಾನ ಮಾಡುತ್ತಲೇ ಬಂದಿರುವ ಕಾಂಗ್ರೆಸ್‌, ಈಗ ಶ್ರೀ ರಾಮಚಂದ್ರರನ್ನು ಇತರರಿಗೆ ಹೋಲಿಸಿ ಮತ್ತೊಮ್ಮೆ ಹಿಂದೂ ಸಮಾಜಕ್ಕೆ ಅವಮಾನಿಸುತ್ತಿದೆ” ಬಿಜೆಪಿ ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...