ಬಿಜೆಪಿ ಕಾಲದ ಎಪಿಎಂಸಿ ಕಾಯ್ದೆ ರದ್ದು, ಹಳೆ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್

Date:

  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಕಾಯ್ಧೆ ರದ್ದು
  • ರೈತ ಹಿತ ಕಾಪಾಡದ ಕಾಯ್ದೆ ನಮಗೆ ಬೇಡ ಎಂದ ಎಪಿಎಂಸಿ ಸಚಿವ

ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಿ ಹಳೆ ಎಪಿಎಂಸಿ ಕಾಯ್ದೆಯನ್ನೇ ಸುಧಾರಿತ ರೂಪದಲ್ಲಿ ಜಾರಿಗೆ ತರಲಾಗುವುದು ಎಂದು ಜವಳಿ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಹೇಳಿದರು.

ವಿಧಾನಸೌಧದಲ್ಲಿ ಇಂದು ಬಿಜೆಪಿ ಸರ್ಕಾರದ ಅವಧಿಯ ಎಪಿಎಂಸಿ ಕಾಯ್ಧೆ ರದ್ದು ಮಾಡುವುದು ಹಾಗೂ ಸುಧಾರಿತ ಹೊಸ ಕಾಯ್ಧೆ ಜಾರಿ ತರುವ ಸಂಬಂಧ, ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರನ್ನೊಳಗೊಂಡಿದ್ದ ಉನ್ನತ ಮಟ್ಟದ ಸಭೆ ಬಳಿಕ ಶಿವಾನಂದ ಪಾಟೀಲ್ ಈ ಮಾಹಿತಿ ನೀಡಿದರು.

ಜುಲೈ 3 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಎಪಿಎಂಸಿಯ ಹಳೆ ಕಾಯ್ದೆಯನ್ನು ಸುಧಾರಿತ ರೂಪದಲ್ಲಿ ಮಂಡಿಸಿ ಈಗಿರುವ ಕಾಯ್ದೆಯನ್ನು ರದ್ದುಗೊಳಿಸುವ ಪ್ರಕ್ರಿಯೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಎಪಿಎಂಸಿ ಕಾಯ್ದೆಯನ್ನು ರದ್ದುಗೊಳಿಸಿ ಹಳೆ ಎಪಿಎಂಸಿ ಕಾಯ್ದೆಯನ್ನು ಜಾರಿಮಾಡುತ್ತಿದ್ದೇವೆ. ಈ ಹಿಂದೆ ಕೇಂದ್ರದ ಬಿಜೆಪಿ ಸರ್ಕಾರ ರೈತರ ಪ್ರತಿಭಟನೆಗೆ ಮಣಿದು ರೈತ ವಿರೋಧಿ ಕೃಷಿ ಕಾಯ್ದೆಯನ್ನು ವಾಪಸ್ ಪಡೆದಿತ್ತು. ಆದರೆ ಕರ್ನಾಟಕದ ಬಿಜೆಪಿ ಸರ್ಕಾರ ಈ ಕಾಯ್ದೆಗಳನ್ನು ರದ್ದು ಮಾಡದೆ ಮುಂದುವರಿಸಿತ್ತು ಎಂದರು.ಎಪಿಎಂಸಿ ಕಾಯ್ದೆ ಮೀಟಿಂಗ್

ಈ ಕಾಯ್ದೆಗಳಿಂದ ರೈತರ ಕಲ್ಯಾಣ ಆಗಲಿಲ್ಲ, ಅವರ ಆದಾಯವೂ ದ್ವಿಗುಣವಾಗಲಿಲ್ಲ. ಜತೆಗೆ ಎಪಿಎಂಸಿ ವ್ಯವಸ್ಥೆಗೂ ತೊಂದರೆಯಾಯಿತು. ಹಾಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದುಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿಸಿದ್ದೆವು. ಇಂದಿನ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಮಾಡಿದ್ದೇವೆ. ಮುಂದಿನ ಅಧಿವೇಶನದಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಎಪಿಎಂಸಿ ಕಾಯ್ದೆಯನ್ನು ಮಂಡನೆ ಮಾಡಿ ಸದನದ ಒಪ್ಪಿಗೆ ಪಡೆಯುತ್ತೇವೆ ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಹರಿಯಾಣ | ರೈತರಿಗೆ ಮತ್ತೊಂದು ದಿಗ್ವಿಜಯ; ಆಂದೋಲನಕ್ಕೆ ಮತ್ತೆ ಮಣಿದ ಬಿಜೆಪಿ ಸರ್ಕಾರ

ಹಳೆಯ ಎಪಿಎಂಸಿ ಕಾಯ್ದೆಯಲ್ಲಿ ನ್ಯೂನತೆಗಳಿದ್ದರೆ ಅದನ್ನು ಸರಿಪಡಿಸಿ ಸುಧಾರಿತ ರೂಪದಲ್ಲಿ ಮಂಡನೆ ಮಾಡುತ್ತೇವೆ. ಹಳೆ ಕಾಯ್ದೆ ಇಡಿ ದೇಶಕ್ಕೆ ಮಾದರಿಯಾಗಿತ್ತು. ಈಗಲೂ ನೂತನ ತಿದ್ದುಪಡಿ ಕಾಯ್ದೆಯನ್ನು ಹಳೆ ಮಾದರಿಯಲ್ಲೇ ರೂಪಿಸುತ್ತೇವೆ. ಮುಂದಿನ ವಾರದೊಳಗೆ ಕಾಯ್ದೆಗೆ ಅಂತಿಮ ರೂಪುರೇಷೆ ನೀಡುವುದಾಗಿ ಅವರು ಹೇಳಿದರು.

ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆಯಿಂದ ಎಪಿಎಂಸಿ ಸಮಿತಿಗಳ ಸತ್ವ ಹಾಗೂ ಶಕ್ತಿ ಕುಂದಿತ್ತು. ಇದೊಂದು ಅಪಕ್ವವಾದ ಕಾಯ್ದೆಯಾಗಿತ್ತು. ಹಾಗಾಗಿಯೇ ಈ ಕಾಯ್ದೆಯನ್ನು ರದ್ದುಗೊಳಿಸಿ ಈ ಹಿಂದಿನ ಎಂಪಿಎಂಸಿ ಕಾಯ್ದೆಯನ್ನು ಮೂಲ ಸ್ವರೂಪದಲ್ಲೇ ಜಾರಿಮಾಡುತ್ತೇವೆ. ಅಗತ್ಯವಿದ್ದರೆ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...