‘ಬಿಜೆಪಿ ನಿವೃತ್ತಿ ನಿಯಮ ಮೋದಿಗೂ ಅನ್ವಯ?’; ಆರ್‌ಎಸ್‌ಎಸ್‌ಗೆ ಕೇಜ್ರಿವಾಲ್ ಪ್ರಶ್ನೆ

Date:

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪಕ್ಷಗಳನ್ನು ಒಡೆಯುತ್ತಿರುವ ಮತ್ತು ಪ್ರತಿಪಕ್ಷಗಳ ಸರ್ಕಾರಗಳನ್ನು ಉರುಳಿಸುತ್ತಿರುವ ಹಾಗೂ ‘ಭ್ರಷ್ಟ’ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿಯ ರಾಜಕೀಯವನ್ನು ಆರ್‌ಎಸ್‌ಎಸ್‌ ಒಪ್ಪುತ್ತದೆಯೇ ಎಂದು ಎಎಪಿ ನಾಯಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ತಮ್ಮ ಮೊದಲ ‘ಜಂತ್ ಕಿ ಅದಾಲತ್’ನಲ್ಲಿ ಅವರು ಮಾತನಡಿದರು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೆಲ ಪ್ರಶ್ನೆಗಳನ್ನು ಕೇಜ್ರಿವಾಲ್ ಕೇಳಿದ್ದಾರೆ. “ಎಲ್‌.ಕೆ ಅಡ್ವಾಣಿಯವರಿಗೆ ಮಾಡಿದಂತೆ ಬಿಜೆಪಿಯ ನಿವೃತ್ತಿ ವಯಸ್ಸಿನ ನಿಯಮವೂ ಮೋದಿಗೂ ಅನ್ವಯಿಸುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

“ರಾಜಕಾರಣಿಗಳನ್ನು ‘ಭ್ರಷ್ಟರು’ ಎಂದು ಕರೆದು, ಬಳಿಕ ಅವರನ್ನೇ ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಬಿಜೆಪಿಯ ರಾಜಕೀಯವನ್ನು ನೀವು ಒಪ್ಪುತ್ತೀರಾ” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಗೆ ಸೈದ್ಧಾಂತಿಕ ಮಾರ್ಗದರ್ಶನ ನೀಡುವ ಆರ್‌ಎಸ್‌ಎಸ್ ‘ತಮ್ಮ ಪಕ್ಷಕ್ಕೆ ಅಗತ್ಯವಿಲ್ಲ’ವೆಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದಾಗ ನಿಮಗೆ ಏನನ್ನಿಸಿತು” ಎಂದು ಭಾಗವತ್‌ ಅವರನ್ನು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ಆಪಾದಿತ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಗೊಳ್ಳಲಾಗಿ, ಐದು ತಿಂಗಳು ಜೈಲಿನಲ್ಲಿದ್ದು ಜಾಮೀನಿನ ಮೆಲೆ ಬಿಡೆಗಡೆಯಾದ ಕೇಜ್ರಿವಾಲ್, “ತಾನು ದೇಶ ಸೇವೆ ಮಾಡಲು ರಾಜಕೀಯಕ್ಕೆ ಸೇರಿದ್ದೇನೆಯೇ ಹೊರತು ಅಧಿಕಾರ ಅಥವಾ ಹುದ್ದೆಯ ದುರಾಸೆಗಾಗಿ ಅಲ್ಲ” ಎಂದು ಪ್ರತಿಪಾದಿಸಿದ್ದಾರೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಂದ ಮನನೊಂದು ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...