ಆರ್‌ಎಸ್‌ಎಸ್‌-ಬಜರಂಗದಳದ ದಲಿತರು, ಶೂದ್ರರನ್ನು ಸೆಳೆಯಬೇಕಿದೆ: ಸತೀಶ್‌ ಜಾರಕಿಹೊಳಿ

Date:

  • ಒಂದು ಸಂಘಟನೆ ನಿಷೇಧಿಸಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ
  • ದಲಿತರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳಬೇಕು

“ಒಂದು ಸಂಘಟನೆ ನಿಷೇಧ ಮಾಡಿದರೆ ಇನ್ನೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರನ್ನು ಸೆಳೆಯಬೇಕಿದೆ” ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರಿಗೆ ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ. ಆರ್‌ಎಸ್‌ಎಸ್‌ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. ಯಾವುದೇ ಸಂಘಟನೆ ಬ್ಯಾನ್ ಮಾಡುವುದು ನಮಗೆ ಪರಿಹಾರವಲ್ಲ” ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ರದ್ದು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಈ ಎಲ್ಲ ಕಾಯ್ದೆಗಳ ಬಗ್ಗೆ ಚರ್ಚೆ ಆಗಬೇಕು. ತಕ್ಷಣವೇ ನಿಷೇಧ ಕಾಯ್ದೆ ಜಾರಿ ಅಸಾಧ್ಯ. ಈ ಬಗ್ಗೆ ಸರ್ಕಾರ ಹಾಗೂ ಪಕ್ಷದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಆಗಬೇಕು. ಸಂಪೂರ್ಣ ಚರ್ಚೆ ಆದ ಮೇಲೆಯೇ ಈ ಸಂಬಂಧ ಸರ್ಕಾರದಿಂದ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬಿಜೆಪಿ ಟ್ವೀಟ್‌ - ಆರ್‌ಎಸ್‌ಎಸ್‌

ಆರ್‌ಎಸ್‌ಎಸ್‌ನಿಂದ ದೇಶಭಕ್ತಿ ಕಲಿಯಲಿ : ಬಿಜೆಪಿ

ಸಚಿವ ಸತೀಶ್‌ ಜಾರಕಿಹೊಳಿ ಅವರ ಹೇಳಿಕೆ ಕುರಿತು ಟ್ಟಿಟ್ಟರ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ಆರ್‌ಎಸ್‌ಎಸ್‌ನ್ನು ನೆನೆಯದಿದ್ದರೆ ಕಾಂಗ್ರೆಸ್‌ ನಾಯಕರಿಗೆ ಜೀರ್ಣವಾಗುವುದಿಲ್ಲ. ಅಂದಹಾಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಇಲ್ಲಸಲ್ಲದ್ದನ್ನು ಊಹಿಸಿಕೊಂಡು ಮಾತನಾಡುವುದನ್ನು ಬಿಟ್ಟು, ಕಾಂಗ್ರೆಸಿನ ನಾಯಕರಿಗೆ ಅತೀವವಾಗಿ ಕೊರತೆ ಇರುವ ದೇಶಭಕ್ತಿಯನ್ನು ಆರ್‌ಎಸ್‌ಎಸ್‌ನಿಂದ ಕಲಿಯಲಿ” ಎಂದು ತಿರುಗೇಟು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...