ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

Date:

“ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು “ಬಿಜೆಪಿಯ ‘400 ಪಾರ್’ ಸಿನಿಮಾವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ” ಎಂದು ಶನಿವಾರ ವ್ಯಂಗ್ಯವಾಡಿದ್ದಾರೆ.

“ಮಹಾಘಟಬಂಧನ್ ಮೊದಲ ಹಂತದಲ್ಲಿ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲುತ್ತಿದೆ. ನಾವು ಬ್ಲಾಕ್ವಾರು ಸಭೆಗಳನ್ನು ನಡೆಸಿದ್ದೇವೆ ಮತ್ತು ಪ್ರತಿಕ್ರಿಯೆ ತುಂಬಾ ಚೆನ್ನಾಗಿದೆ. ಬಿಜೆಪಿಯ ‘400 ಪಾರ್’ ಚಿತ್ರವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ. ಬಿಹಾರದ ಜನರು ಜಾಗೃತರಾಗಿದ್ದು, ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲ ಹಂತದಲ್ಲಿ ಯಾವುದೇ ಪೈಪೋಟಿ ಇಲ್ಲ. ಬಿಹಾರ ಈ ಬಾರಿ ಆಘಾತಕಾರಿ ಫಲಿತಾಂಶ ನೀಡಲಿದೆ ಎಂದು ನಾವು ಮೊದಲೇ ಸಾಕಷ್ಟು ಬಾರಿ ಹೇಳಿದ್ದೆವು” ಎಂದು ತೇಜಸ್ವಿ ಯಾದವ್ ತಿಳಿಸಿದರು.

ಇದನ್ನು ಓದಿದ್ದೀರಾ?  400 ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ 420 ನಂಬರ್‌ನವರು: ನಟ ಪ್ರಕಾಶ್ ರಾಜ್

“ಅವರು (ಬಿಜೆಪಿ) ಬಿಹಾರದ ಜನರಿಗೆ ಏನನ್ನೂ ಮಾಡಿಲ್ಲ. 2014 ಮತ್ತು 2019 ರಲ್ಲಿ ಮೋದಿ ಅವರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಈಗ ಅವರ ಹೇಳಿಕೆಗಳು ಮತ್ತು ಸುಳ್ಳು ಭರವಸೆಗಳಿಂದ ಸಾರ್ವಜನಿಕರು ಬೇಸತ್ತಿದ್ದಾರೆ. ನಾವು ಬಿಹಾರಕ್ಕೆ ವಿಶೇಷ ಸ್ಥಾನಮಾನದ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತೇವೆ ಎಂದು ಭರವಸೆ ನೀಡಿದ್ದೇವೆ” ಎಂದು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದರು.

“ಮಹಾಘಟಬಂಧನ್ ಮತ್ತು ಇಂಡಿಯಾ ಬಣ ಒಟ್ಟಾಗಿ ಕೆಲಸ ಮಾಡುತ್ತಿವೆ. ಹಣದುಬ್ಬರ, ಬಡತನ ಮತ್ತು ಹೂಡಿಕೆಯ ಜೊತೆಗೆ ಬಿಹಾರದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ. ವಲಸೆ ಮತ್ತು ಪ್ರವಾಹದ ಸಮಸ್ಯೆಯೂ ಇದೆ. ಈ ಬಾರಿ ಬಿಜೆಪಿ ತುಂಬಾ ಚಿಂತೆಗೆ ಒಳಗಾಗಿದೆ” ಎಂದರು.

“ಅವರು (ಬಿಜೆಪಿ) ಸಂವಿಧಾನ ರದ್ದು ಮಾಡುವುದಾಗಿ ಹೇಳುತ್ತಾರೆ. ಯಾರು ಸಂವಿಧಾನವನ್ನು ನಾಶಪಡಿಸುತ್ತಾರೋ ಅವರೇ ನಾಶವಾಗುತ್ತಾರೆ” ಎಂದು ಯಾದವ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿಗೆ 100 ಕೋಟಿ ರೂ. ಕೊಟ್ಟು 14,400 ಕೋಟಿ ರೂ. ಗುತ್ತಿಗೆ ಪಡೆದ ಮೇಘಾ ಇಂಜಿನಿಯರಿಂಗ್ ಕಂಪನಿ

ಚುನಾವಣಾ ಆಯೋಗದ ಪ್ರಕಾರ, ಬಿಹಾರದಲ್ಲಿ ಮೊದಲ ಹಂತದಲ್ಲಿ ಶೇಕಡ 48.88ರಷ್ಟು ಮತದಾನವಾಗಿದೆ. ಜಮುಯಿ, ನವಾಡ, ಗಯಾ ಮತ್ತು ಔರಂಗಾಬಾದ್ ಎಂಬ ನಾಲ್ಕು ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಜೆಡಿಯು ಮತ್ತು ಎಲ್‌ಜೆಪಿ ಒಳಗೊಂಡಿರುವ ಬಿಜೆಪಿ ನೇತೃತ್ವದ ಎನ್‌ಡಿಎ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಮಹಾಘಟಬಂಧನ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...