ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ: ದರಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Date:

  • ‘ಯತೀಂದ್ರ ಸಿದ್ದರಾಮಯ್ಯ ‘ಶ್ಯಾಡೋ ಸಿಎಂ’ ಪೋಸ್ಟರ್‌ ಬಿಡುಗಡೆ’
  • ‘ಸರ್ಕಾರದಲ್ಲಿ ಶ್ಯಾಡೋ ಸಿಎಂ ಯತೀಂದ್ರ ಹಸ್ತಕ್ಷೇಪ ಮಿತಿ ಮೀರಿದೆ’

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೆಲವು ದಿನಗಳಿಂದ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡುತ್ತಿದ್ದಾರೆ. ಇದರ ಬೆನ್ನೆಲೆ ಬಿಜೆಪಿ ರಾಜ್ಯದಲ್ಲಿ ಬೆಲೆ ಏರಿಕೆ ಆಗಿರುವ ತರಕಾರಿಗಳ ಜೊತೆಗೆ ವರ್ಗಾವಣೆಗೆ ಹಣ ನಿಗದಿ ಮಾಡಲಾಗಿದೆ ಎಂದು ಆರೋಪಿಸಿ ಪಟ್ಟಿ ಬಿಡುಗಡೆ ಮಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಯತೀಂದ್ರ ಸಿದ್ದರಾಮಯ್ಯ ಅವರನ್ನು ಶ್ಯಾಡೋ ಸಿಎಂ ಎಂದು ಉಲ್ಲೇಖಿಸಿದೆ. “ನಾಮ್‌ಕೆವಾಸ್ತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು ಶ್ಯಾಡೋ ಸಿಎಂ ಮಾಡಿ, ಅಧಿಕಾರವನ್ನು ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರಿಗೆ ಕೊಟ್ಟಿದ್ದಾರೆ. ಪರಿಣಾಮ, ರಾಜ್ಯದಲ್ಲಿ ಸಚಿವರು, ಶಾಸಕರ ಸಂಬಂಧಿಕರ ದರ್ಬಾರ್ ಜೋರಾಗಿದೆ” ಎಂದು ಬಿಜೆಪಿ ಆರೋಪಿಸಿದೆ.

“ರಾಜ್ಯದಲ್ಲಿ ಅಗತ್ಯ ವಸ್ತುಗಳು ಹಾಗೂ ಅಗತ್ಯ ಹುದ್ದೆಗಳ ಇಂದಿನ ದರ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತರಕಾರಿ
ಟೊಮ್ಯಾಟೊ – ₹120-130
ಬೀನ್ಸ್‌ – ₹120
ಕ್ಯಾರೆಟ್‌ – ₹110
ಹಸಿಮೆಣಸಿನಕಾಯಿ – ₹170

ವರ್ಗಾವಣೆ ತರಹೇವಾರಿ
ಮುಖ್ಯ ಎಂಜಿನಿಯರ್: ₹5‌ ಕೋಟಿ
ಜಿಲ್ಲಾ ಆರೋಗ್ಯಾಧಿಕಾರಿ: ₹2 ಕೋಟಿ
ಲೆಕ್ಕಾಧಿಕಾರಿ: ₹ 2.25 ಕೋಟಿ
ತಹಶೀಲ್ದಾರ್‌: ₹1.25 ಕೋಟಿ

ಪೊಲೀಸ್‌ ಸಬ್‌ ಇನ್ಸ್ ಪೆಕ್ಟರ್
ಬೆಂಗಳೂರು ನಗರ – ₹1.5 ಕೋಟಿ
ಜಿಲ್ಲಾ ಕೇಂದ್ರ – ₹80 ಲಕ್ಷ
ತಾಲ್ಲೂಕು ಕೇಂದ್ರ: ₹40 ಲಕ್ಷ

ಕೇಂದ್ರದ ಸುರ್ಜೇವಾಲಾ ಕಮಿಷನ್‌ ಪ್ರತ್ಯೇಕ.

ಪ್ರಕಟಣೆ : ಎಟಿಎಂ ಸರ್ಕಾರದ ಪರವಾಗಿ ಶ್ಯಾಡೋ ಸಿಎಂ ಯತೀಂದ್ರ” ಎಂದು ಬಿಜೆಪಿ ದರಪಟ್ಟಿ ಬಿಡುಗಡೆ ಮಾಡಿದೆ.

ಮತ್ತೊಂದು ಟ್ವೀಟ್‌ನಲ್ಲಿ, “ರಾಜ್ಯದ ಎಟಿಎಂ ಸರ್ಕಾರದಲ್ಲಿ ವರುಣಾದ ನಿರುದ್ಯೋಗಿ ಶ್ಯಾಡೋ ಸಿಎಂ ಯತೀಂದ್ರ ಹಸ್ತಕ್ಷೇಪ ಮಿತಿ ಮೀರಿದೆ. ಒಂದೇ ಹುದ್ದೆಗೆ ಹಲವು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಶಿಫಾರಸ್ಸು ಪತ್ರ ನೀಡುವುದು, ಕಾರ್ಯವಾದ ಬಳಿಕ ವ್ಯವಹಾರ ಕುದುರದಿದ್ದಲ್ಲಿ, ಆದೇಶವನ್ನು ಹಿಂಪಡೆಯುವುದು. ಹೀಗೆ ಹಲವಾರು ಅಕ್ರಮಗಳನ್ನು ಮುಖ್ಯಮಂತ್ರಿ ಕಚೇರಿ ಮೂಲಕ ರಾಜಾರೋಷವಾಗಿ ನಡೆಸುತ್ತಾ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಇಷ್ಟು ಸಾಲದ್ದಕ್ಕೆ, ತನಗೊಂದು ಸಾಂವಿಧಾನಿಕ ಹುದ್ದೆ ಕಬಳಿಸಿಕೊಂಡು, ತನ್ನ ಅಕ್ರಮ ದಂಧೆಗಳಿಗೆ ಸಕ್ರಮದ ಲೇಬಲ್ ಅಂಟಿಸುವ ಬಗ್ಗೆ ಗಾಢವಾಗಿ ಸ್ಕೆಚ್ ಹಾಕಿದ್ದಾರೆ” ಎಂದು ಬಿಜೆಪಿ ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌರ್ಜನ್ಯ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...