ಧನಕರ್, ಮಲಿಕ್ ಅವರನ್ನು ನಡೆಸಿಕೊಂಡ ರೀತಿಗೆ ಸರ್ಕಾರದ ವಿರುದ್ಧ ಟೀಕೆ; ಬಿಜೆಪಿ ವಕ್ತಾರ ಉಚ್ಛಾಟನೆ

Date:

ಮಾಜಿ ರಾಜ್ಯಪಾಲ ದಿ. ಸತ್ಯಪಾಲ್ ಮಲಿಕ್ ಮತ್ತು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಡೆಸಿದ್ದ ಧೋರಣೆಯ ಬಗ್ಗೆ ಟೀಕಿಸಿದ್ದಕ್ಕಾಗಿ, ಬಿಜೆಪಿ ವಕ್ತಾರ ಕೃಷ್ಣಕುಮಾರ್ ಜಾನು ಅವರನ್ನು ಬಿಜೆಪಿ ಉಚ್ಚಾಟಿಸಿದೆ. ರಾಜಸ್ಥಾನದ ಜಾನು ಅವರು 6 ವರ್ಷಗಳ ಕಾಲ ಪಕ್ಷದ ಸಾಮಾನ್ಯ ಸದಸ್ಯವನ್ನೂ ಹೊಂದಿರುವುದಿಲ್ಲ ಎಂದು ಹೇಳಿದೆ.

ಇತ್ತೀಚೆಗೆ, ರಾಜಸ್ಥಾನದ ಜುಂಝುನು ಜಿಲ್ಲಾ ಅಧ್ಯಕ್ಷೆಯಾಗಿ ಹರ್ಷಿನಿ ಕುಲ್ಹಾರಿ ಅವರನ್ನು ನೇಮಿಸಿದ್ದನ್ನು ಜಾನು ಪ್ರಶ್ನಿಸಿದ್ದರು. ಆ ಕಾರಣಕ್ಕೆ, ಅವರಿಗೆ ಶೋಕಾಸ್ ನೋಟಿಸ್‌ ನೀಡಲಾಗಿತ್ತು. ಆದಾಗ್ಯೂ, ಬಿಜೆಪಿಯ ಧೋರಣೆಗಳನ್ನು ಜಾನು ಟೀಕಿಸಿದ್ದರು. ಕಳೆದ ತಿಂಗಳು ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದಾಗ, ಅವರಿಗೆ ಗೌರವಯುವ ವಿದಾಯ ನೀಡಿದ ಬಿಜೆಪಿ ನಡೆಸಿಕೊಂಡ ರೀತಿಯ ಬಗ್ಗೆಯೇ ಜಾನು ಅಸಮಧಾನ ವ್ಯಕ್ತಪಡಿಸಿದ್ದರು.

ಕಳೆದ ವಾರ, ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಮೃತಪಟ್ಟಾಗ ಅವರ ಅಂತ್ಯಕ್ರಿಯೆ ನಡೆಸಿದ ರೀತಿ ಮತ್ತು ಸರಿಯಾದ ರೀತಿಯಲ್ಲಿ ಗೌರವ ಸಲ್ಲಿಸದ್ದರ ಬಗ್ಗೆಯೂ ಆಕ್ಷೇಪ ವ್ಯಕ್ತಪರಿಸಿದ್ದರು. ಹಿರಿಯ ನಾಯಕರನ್ನು ಬದಿಗಿಡುವ ಮೂಲಕ ಪ್ರಸ್ತುತ ನಾಯಕತ್ವವು ದಿಕ್ಕು ತಪ್ಪುತ್ತಿದೆ ಎಂದು ಟೀಕಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಯಶವಂತ್ ಸಿನ್ಹಾ, ಪ್ರವೀಣ್ ತೊಗಾಡಿಯಾ, ಸಂಜಯ್ ಜೋಶಿ, ವಸುಂಧರಾ ರಾಜೆ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಿರಿಯ ನಾಯಕರನ್ನು ಬದಿಗೆ ತಳ್ಳಲು ಪಕ್ಷದ ಹಿರಿಯ ನಾಯಕತ್ವವೇ ಕಾರಣ. ತಳಮಟ್ಟದಲ್ಲಿ ಬಲಿಷ್ಠರಾಗಿದ್ದ ನಾಯಕರನ್ನು ಕೈಗೊಂಬೆಗಳನ್ನಾಗಿ ಮಾಡಲಾಗಿದೆ” ಎಂದು ಆರೋಪಿಸಿದ್ದರು. ಈ ಕಾರಣಗಳಿಗಾಗಿ ಜಾನು ಅವರು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು.

ಅವರ ವಿರುದ್ಧ ರಾಜಸ್ಥಾನ ಬಿಜೆಪಿಯ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಅಂಕುರ್ ಸಿಂಗ್ ಲಖವತ್ ಅವರು, “ಜಾನು ಪಕ್ಷದಲ್ಲಿ ಅಶಿಸ್ತು ತೋರಿಸಿದ್ದಾರೆ. ಅಲ್ಲದೆ, ಶೋಕಾಸ್ ನೋಟಿಸ್‌ಗೂ ಸರಿಯಾಗಿ ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಅವರನ್ನು ಉಚ್ಛಾಟನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...