ಬಂಗಾಳದಲ್ಲಿ ಇವಿಎಂಗಳ ಮೇಲೆ ಬಿಜೆಪಿ ಟ್ಯಾಗ್; ಟಿಎಂಸಿ ಆರೋಪ – ಚುನಾವಣಾ ಆಯೋಗದ ಉತ್ತರವೇನು? 

Date:

ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಬಿಜೆಪಿ ಟ್ಯಾಗ್ ಇರುವ ಇವಿಎಂಗಳನ್ನು ಬಳಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿದೆ.

ಬಿಜೆಪಿಯ ಹೆಸರಿರುವ ಪೇಪರ್ ಟ್ಯಾಗ್‌ಗಳಿರುವ ಇವಿಎಂಗಳ ಎರಡು ಚಿತ್ರಗಳನ್ನು ಟಿಎಂಸಿ, “ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಮೂಲಕ ಮತಗಳನ್ನು ಬದಲಾಯಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪದೇ ಪದೇ ಹೇಳುತ್ತಿದ್ದಾರೆ. ಇದೀಗ, ಬಂಕುರಾದ ರಘುನಾಥಪುರದಲ್ಲಿ 5 ಇವಿಎಂಗಳಲ್ಲಿ ಬಿಜೆಪಿ ಟ್ಯಾಗ್‌ಗಳು ಕಂಡುಬಂದಿವೆ. ಚುನಾವಣಾ ಆಯೋಗ ತಕ್ಷಣವೇ ಇದನ್ನು ಪರಿಶೀಲಿಸಬೇಕು ಮತ್ತು ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದೆ.

ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, “ಆಡಳಿತಾತ್ಮಕ ಪರಿಶೀಲನೆ ನಡೆಸುವಾಗ ಮತಗಟ್ಟೆ ವಿಳಾಸದ ಟ್ಯಾಗ್‌ಗಳಿಗೆ ಅಭ್ಯರ್ಥಿಗಳು ಮತ್ತು ಅವರ ಏಜೆಂಟ್‌ಗಳು ಸಹಿ ಮಾಡಿದ್ದಾರೆ. ಚುನಾವಣಾ ಕಾರ್ಯಾರಂಭದ ಸಮಯದಲ್ಲಿ ಬಿಜೆಪಿ ಅಭ್ಯರ್ಥಿಯ ಪ್ರತಿನಿಧಿ ಮಾತ್ರ ಕಚೇರಿಯಲ್ಲಿ ಇದ್ದುದ್ದರಿಂದ EVM ಮತ್ತು VVPATಗಳಿಗೆ ಅವರ ಸಹಿಯನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

“ಆದಾಗ್ಯೂ, ಮತಗಟ್ಟೆ ಸಂಖ್ಯೆ 56, 58, 60, 61,62ರಲ್ಲಿ ಸ್ಥಳದಲ್ಲಿದ್ದ ಎಲ್ಲ ಏಜೆಂಟ್‌ಗಳ ಸಹಿಯನ್ನು ಮತದಾನದ ಸಮಯದಲ್ಲಿ ಪಡೆಯಲಾಗಿದೆ. ಕಾರ್ಯಾರಂಭದ ಸಮಯದಲ್ಲಿ ಚುನಾವಣಾ ಆಯೋಗದ  ಎಲ್ಲ ಮಾನದಂಡಗಳನ್ನು ಸರಿಯಾಗಿ ಅನುಸರಿಸಲಾಗಿದೆ. ಸಂಪೂರ್ಣವಾಗಿ ಸಿಸಿಟಿವಿ ಕವರೇಜ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಮತ್ತು ಅದನ್ನು ವೀಡಿಯೊಗ್ರಾಫ್ ಮಾಡಲಾಗಿದೆ” ಎಂದು ಆಯೋಗ ವಿವರಿಸಿದೆ.

ಪಶ್ಚಿಮ ಬಂಗಾಳದ 8 ಲೋಕಸಭಾ ಕ್ಷೇತ್ರಗಳಿಗೆ ಶನಿವಾರ ಆರನೇ ಹಂತದಲ್ಲಿ ಮತದಾನ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...