ಜೈನಮುನಿ-ಯುವಬ್ರಿಗೇಡ್ ಹತ್ಯೆ ಪ್ರಕರಣ | ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯ ಎರಡು ತಂಡ ರಚನೆ

Date:

ಬೆಳಗಾವಿ ಜಿಲ್ಲೆಯಲ್ಲಿನ ಜೈನ ಮುನಿ ಹತ್ಯೆ ಮತ್ತು ಮೈಸೂರು ಜಿಲ್ಲೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲಿಸಲು ಬಿಜೆಪಿಯ ಎರಡು ತಂಡಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಲಿವೆ.

ಎರಡೂ ತಂಡಗಳಿಂದ ಬೆಳಗಾವಿ ಮತ್ತು ಮೈಸೂರಿಗೆ ಭೇಟಿ, ಪರಿಶೀಲನೆ ನಡೆಸಲಿವೆ. ಒಂದು ತಂಡಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವ ವಹಿಸಲಿದ್ದು, ಇನ್ನೊಂದು ತಂಡಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ನೇತೃತ್ವ ವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನಗಳಲ್ಲಿ ಹತ್ಯಾ ಪ್ರಕರಣಗಳ ಅಸಲಿಯತ್ತಿನ‌ ಬಗ್ಗೆ ವರದಿ ಸಿದ್ದ ಮಾಡಲಿರುವ ತಂಡಗಳು, ಬಳಿಕ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಲಿವೆ. ಬಳಿಕ ಬಿಜೆಪಿಯು ಉನ್ನತ ಮಟ್ಟದ ತನಿಖೆ, ನಿಜವಾದ ಆರೋಪಿಗಳ ಬಂಧನ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬಿಜೆಪಿ 5

ಜೈನಮುನಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಲಿರುವ ತಂಡ

  1. ನಳಿನ್‌ ಕುಮಾರ್‌ ಕಟೀಲ್‌, ರಾಜ್ಯಾಧ್ಯಕ್ಷ
  2. ಅಶ್ವತ್ಥನಾರಾಯಣ,‌ ರಾಜ್ಯ ಪ್ರಧಾನ ಕಾರ್ಯದರ್ಶಿ
  3. ಶಾಸಕ ಮಹೇಶ ಟೆಂಗಿನಕಾಯಿ
  4. ಶಾಸಕ ಅಭಯ ಪಾಟೀಲ್‌
  5. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
  6. ಸಂಸದೆ ಮಂಗಳಾ ಸುರೇಶ್‌ ಅಂಗಡಿ
  7. ಎಂಎಲ್‌ಸಿ ಮಹಾಂತೇಶ್‌ ಕವಟಗಿಮಠ,
  8. ಬೆಳಗಾವಿ ನಗರ ಜಿಲ್ಲಾಧ್ಯಕ್ಷ ಅನಿಲ್‌ ಬೆನಕೆ
  9. ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ. ರಾಜೇಶ್‌ ನೇರ್ಲಿ
  10. ಸಂಜಯ್‌ ಪಾಟೀಲ್‌, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ
  11. ಎಂ.ಬಿ. ಜಿರಲಿ, ಬಿಜೆಪಿ ವಕ್ತಾರ

ವೇಣುಗೋಪಾಲ್‌ ನಾಯಕ್‌ ಮನೆಗೆ ಭೇಟಿ ನೀಡಲಿರುವ ತಂಡ

  1. ಸಿ ಟಿ ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
  2. ಶಾಸಕ ಡಾ. ಸಿ ಎನ್‌ ಅಶ್ವತ್ಥನಾರಾಯಣ
  3. ಸಂಸದ ಪ್ರತಾಪಸಿಂಹ
  4. ಶಾಸಕ ಶ್ರೀವತ್ಸ
  5. ಮಾಜಿ ಶಾಸಕ ಎನ್‌ ಮಹೇಶ್‌
  6. ಮಾಜಿ ಶಾಸಕ ಪ್ರೀತಂ ಜೆ ಗೌಡ
  7. ಮುಖಂಡ ಅಪ್ಪಣ್ಣ
  8. ಪ್ರೊ. ಮಲ್ಲಿಕಾರ್ಜುನ, ಮೇಲ್ಮನೆ ಮಾಜಿ ಸದಸ್ಯ
  9. ವೈ ವಿ ರವಿಶಂಕರ್‌, ವಿಭಾಗ ಪ್ರಭಾರಿ
  10. ಮಂಗಳಾ ಸೋಮಶೇಖರ್‌, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...