ಬಿಜೆಪಿ 200 ಸೀಟುಗಳನ್ನೂ ದಾಟುವುದಿಲ್ಲ: ಮಮತಾ ಬ್ಯಾನರ್ಜಿ

Date:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳ ಗಡಿ ಮುಟ್ಟುವ ಸಾಧ್ಯತೆಗಳೂ ಇಲ್ಲ. ‘ಇಂಡಿಯಾ’ ಒಕ್ಕೂಟವು 300 ಸ್ತಾನಗಳ ಗಡಿಯನ್ನು ಸುಲಭವಾಗಿ ದಾಟುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣದ ಬೊಂಗಾವ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು. “ಇಂಡಿಯಾ ಒಕ್ಕೂಟವು ಕನಿಷ್ಠ 315 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿ ಹೆಚ್ಚೆಂದರೆ 195 ಸ್ಥಾನಗಳನ್ನು ಗೆಲ್ಲಬಹುದು” ಎಂದಿದ್ದಾರೆ.

ಪ್ರಧಾನಿ ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದಿರುವ ಬ್ಯಾನರ್ಜಿ, “ಈ ಬಾರಿ ‘ಇಂಡಿಯಾ’ ಕೂಟ ಅಧಿಕಾರಕ್ಕೆ ಬರುವುದು ಖಚಿತ. ಜೂನ್‌ ನಂತರ ದೆಹಲಿಯಲ್ಲಿ ಮೋದಿ ಇರುವುದಿಲ್ಲ. ನಿನ್ನೆಯವರೆಗೆ ನಾನು ಪಡೆದ ಅಂಕಿಅಂಶಗಳ ಆಧಾರದ ಮೇಲೆ; ಬಿಜೆಪಿ ಸುಮಾರು 190-195 ಸ್ಥಾನಗಳನ್ನು ಪಡೆಯಬಹುದು. ‘ಇಂಡಿಯಾ’ ಕೂಟ ಕನಿಷ್ಠ 315 ಸೀಟುಗಳನ್ನು ಪಡೆಯಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನು ಮುಂದೆ ಕೇಸರಿ ಪಕ್ಷ 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳಬಾರದು. ಇಲ್ಲಿಯವರೆಗಿನ ಮತದಾನ ಉತ್ತಮವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ನಾಯಕರು ಭಯಗೊಂಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಸಂದೇಶಖಾಲಿ ವಿಚಾರದಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ, ”ಬಿಜೆಪಿ ಮತ್ತು ಪ್ರಧಾನಿ ಈ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ‘ಗ್ಯಾರಂಟಿ ಬಾಬು’ (ಮೋದಿ ಗ್ಯಾರಂಟಿ) ಪಶ್ಚಿಮ ಬಂಗಾಳವನ್ನು ಕೆಣಕುತ್ತಿದೆ. ಈಗ, ಸತ್ಯ ಹೊರಬರುತ್ತಿದ್ದು (ಉದ್ದೇಶಪೂರ್ವಕವಾಗಿ ಮಾಡಿಸಿದ್ದ ವೀಡಿಯೊಗಳು), ಅವುಗಳನ್ನು ಪ್ರಸಾರ ಮಾಡಬೇಕು ಎಂದು ಬಿಜೆಪಿಗರು ಮಾಧ್ಯಮಗಳನ್ಉ ಕೇಳುತ್ತಿದ್ದಾರೆ. ಅವರು ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಮಹಿಳೆಯರ ಹೆಸರು ಕೆಡಿಸಲು ಬಿಜೆಪಿ ಸಂಚು ರೂಪಿಸಿದೆ” ಎಂದು ಕಿಡಿಕಾರಿದ್ದಾರೆ.

ಸ್ಥಳೀಯ ಬಿಜೆಪಿ ನಾಯಕರೊಬ್ಬರು ಸಂದೇಶಖಾಲಿಯ ಹಲವಾರು ಮಹಿಳೆಯರಿಂದ ಖಾಲಿ ಪೇಪರ್‌ಗಳಿಗೆ ಸಹಿ ಮಾಡಿಸಿದ್ದಾರೆ ಎಂದು ಹೇಳಲಾಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಹಿಳೆಯರಿಂದ ಖಾಲಿ ಪೇಪರ್‌ಗೆ ಸಹಿ ಹಾಕಿಸಿಕೊಂಡು, ಅದರಲ್ಲಿ ಟಿಎಂಸಿ ನಾಯಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯರು ಆರೋಪಿಸಿರುವುದಾಗಿ ಉಲ್ಲೇಖಿಸಿ, ದೂರು ನೀಡಲಾಗಿತ್ತು. ಅಲ್ಲದೆ, ಟಿಎಂಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಹಣ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...