ಲೋಕಸಭಾ ಚುನಾವಣೆ | ಮುಂದಿನ ವಾರ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ವರದಿ

Date:

ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿಯು ಮುಂದಿನ ಗುರುವಾರ 100 ಅಭ್ಯರ್ಥಿಗಳ ಹೆಸರಿರುವ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ನಿರೀಕ್ಷಿತ ಘೋಷಣೆಗೆ ಮುಂಚಿತವಾಗಿ, ಬಿಜೆಪಿ ಗುರುವಾರ 100 ಅಭ್ಯರ್ಥಿಗಳ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ” ಮೂಲಗಳು ತಿಳಿಸಿರುವುದಾಗಿ ವರದಿಯಲ್ಲಿ ಎನ್‌ಡಿಟಿವಿ ತಿಳಿಸಿವೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆಬ್ರವರಿ 29ರಂದು ಸಭೆ ಸೇರುವ ಸಾಧ್ಯತೆಯಿದೆ. ಆ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ಮೋದಿ ಅವರು ಕಳೆದ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸಿ, ಸಂಸದರಾಗಿದ್ದರು. ವಾರಣಾಸಿಯಿಂದ ಎರಡು ಬಾರಿ ಗೆದ್ದಿದ್ದಾರೆ. ಅಮಿತ್ ಶಾ ಅವರು 2019 ರ ಚುನಾವಣೆಯಲ್ಲಿ ಗುಜರಾತ್‌ನ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅದುವರೆಗೂ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅಲ್ಲಿಂದ ಸ್ಪರ್ಧಿಸುತ್ತಿದ್ದರು.

ಮೊದಲ ಪಟ್ಟಿಯು ನಿರ್ಣಾಯಕವಾಗಿದ್ದು, ಎನ್‌ಡಿಎ ಮೈತ್ರಿಕೂಟವು 543 ಲೋಕಸಭಾ ಸ್ಥಾನಗಳ ಪೈಕಿ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.

ಕಳೆದ ವಾರ, 370 ಸ್ಥಾನಗಳನ್ನು ಗೆಲ್ಲುವ ಪಕ್ಷದ ಗುರಿಯನ್ನು ಈಡೇರಿಸಲು ಶ್ರದ್ಧೆಯಿಂದ ಕೆಲಸ ಮಾಡಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಮುಂದಿನ 100 ದಿನಗಳು ನಿರ್ಣಾಯಕವಾದವು ಎಂದು ತಿಳಿಸಿದ್ದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ಸೇರುವ ವದಂತಿ ನಡುವೆಯೇ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಜೆಡಿಎಸ್‌ ಶಾಸಕ

“ಮುಂದಿನ 100 ದಿನಗಳಲ್ಲಿ ನಾವೆಲ್ಲರೂ ಪ್ರತಿಯೊಬ್ಬ ಹೊಸ ಮತದಾರರನ್ನು, ಪ್ರತಿಯೊಬ್ಬ ಫಲಾನುಭವಿ, ಪ್ರತಿ ಸಮುದಾಯವನ್ನು ತಲುಪಬೇಕು. ನಾವು ಎಲ್ಲರ ವಿಶ್ವಾಸ ಗೆಲ್ಲಬೇಕು. ಎನ್‌ಡಿಎ ಕೂಟದ ಸ್ಥಾನವನ್ನು 400ಕ್ಕೆ ಕೊಂಡೊಯ್ಯಲು ಹಾಗೂ ಬಿಜೆಪಿ 370 ಕ್ಷೇತ್ರಗಳನ್ನು ಗೆಲ್ಲಲು ಶ್ರಮಿಸಬೇಕು” ಎಂದು ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...