ಮಂಡ್ಯ | ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ; ಬಿಜೆಪಿ ಕಾರ್ಯಕರ್ತನ ಬಂಧನ

Date:

2022ರ ಡಿಸೆಂಬರ್ 18ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿರುವ ಪೋಲಿಸರು ಮಂಗಳವಾರ ಬೆಳಿಗ್ಗೆ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಂಡ್ಯದ ಸಂಜಯ ವೃತ್ತದಲ್ಲಿ 2022 ಡಿಸೆಂಬರ್ 18 ರಂದು ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಪಾಕ್ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್‌ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು. ಘೋಷಣೆ ಕೂಗುವಾಗ ‘ಪಾಕಿಸ್ತಾನ್ ಜಿಂದಾಬಾದ್’ ಎಂದೂ ಘೋಷಣೆ ಕೂಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದೂವರೆ ವರ್ಷದ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕನ್ನಂಬಾಡಿ ಕುಮಾರ್ ಎಂಬುವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದ ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ದೂರಿನನ್ವಯ ಬಿಜೆಪಿ ಕಾರ್ಯಕರ್ತರಾದ ರವಿ, ಶಿವಕುಮಾ‌ರ್ ಆರಾಧ್ಯ ಎಂಬುವರ ವಿರುದ್ಧ ಎಫ್‌ಐಆ‌ರ್ ದಾಖಲಿಸಿದ ಪೊಲೀಸರು, ಸದ್ಯ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...