ಒಡಿಶಾ| ಚುನಾವಣಾ ಪೂರ್ವ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನ ಹತ್ಯೆ

Date:

ಒಡಿಶಾದಲ್ಲಿ ಚುನಾವಣಾ ಪೂರ್ವ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯದ ಗಂಜಾಂ ಜಿಲ್ಲೆಯ ಖಲ್ಲಿಕೋಟೆ ಪ್ರದೇಶದಲ್ಲಿ ಆಡಳಿತಾರೂಢ ಬಿಜು ಜನತಾ ದಳದ (ಬಿಜೆಡಿ) ಕಾರ್ಯಕರ್ತರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಹಿಂಸಾಚಾರ ನಡೆದಿದ್ದು, ಜಿಲ್ಲೆಯ ಕಲ್ಲಿಕೋಟೆ ಪೊಲೀಸ್‌ ವ್ಯಾಪ್ತಿಯ ಶ್ರೀಕೃಷ್ಣಶರಣಪುರ ಗ್ರಾಮದ ದಿಲೀಪ್‌ ಪಹಾನ್‌ ಎಂಬ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ದಿಲೀಪ್ ಎಂಕೆಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ?  ಒಡಿಶಾ ಸಿಎಂ ನವೀನ್ 2 ಕ್ಷೇತ್ರದಲ್ಲಿ ಸ್ಪರ್ಧೆ; ಮೋದಿ ಅಲೆ – ಬಿಜೆಪಿ ಮಣಿಸಲು ಬಿಜೆಡಿ ತಂತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಇನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗುರುವಾರ ಹಿಂಸಾಚಾರವನ್ನು ಖಂಡಿಸಿದ್ದಾರೆ. “ಕಲ್ಲಿಕೋಟೆ ಪ್ರದೇಶದಲ್ಲಿ ನಡೆದ ಅತ್ಯಂತ ದುರದೃಷ್ಟಕರ ಮತ್ತು ದುರಂತ ಹಿಂಸಾಚಾರದ ಘಟನೆಯಿಂದ ತೀವ್ರವಾಗಿ ವಿಚಲಿತಗೊಂಡಿದ್ದೇನೆ ಮತ್ತು ದುಃಖವಾಗಿದೆ. ಇಂತಹ ಹಿಂಸಾಚಾರದ ಘಟನೆಗಳಿಗೆ ನಮ್ಮ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜದಲ್ಲಿ ಸ್ಥಾನವಿಲ್ಲ. ಈ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಎಕ್ಸ್‌ ಪೋಸ್ಟ್ ಮಾಡಿದ್ದಾರೆ.

“ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ನನ್ನ ಆಳವಾದ ಸಂತಾಪ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಈ ಘೋರ ಅಪರಾಧಗೈದ ಅಪರಾಧಿಗಳ ವಿರುದ್ದ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಕೂಡಾ ಪೋಸ್ಟ್‌ನಲ್ಲಿ ಸಿಎಂ ಪಟ್ನಾಯಕ್ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ?  ಒಡಿಶಾ | ನವೀನ್ ಪಟ್ನಾಯಕ್‌ರ ಬಿಜೆಡಿ ಜೊತಿಗಿಲ್ಲ ಮೈತ್ರಿ; ಬಿಜೆಪಿ ಏಕಾಂಗಿ ಸ್ಪರ್ಧೆ

ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಒಡಿಶಾದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನಿಕುಂಜ ಬಿಹಾರಿ ಧಾಲ್ ಅವರು ಜಿಲ್ಲೆಯಲ್ಲಿ ಚುನಾವಣಾ ಪೂರ್ವ ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುವ ಮೂಲಕ ಶಾಂತಿ ಸ್ಥಾಪಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಗಂಜಾಂ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗುರುವಾರ ಸೂಚನೆ ನೀಡಿದ್ದಾರೆ.

ಅಸ್ಕಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಲ್ಲಿಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮೇ 20ರಂದು ಮತದಾನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...