‘ತೆರಿಗೆ ಭಯೋತ್ಪಾದನೆ’ಯಿಂದ ಕಾಂಗ್ರೆಸ್ ಮಣಿಸಬಹುದೆಂಬುದು ಬಿಜೆಪಿಯ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Date:

‘ತೆರಿಗೆ ಭಯೋತ್ಪಾದನೆ’ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘ತೆರಿಗೆ ಭಯೋತ್ಪಾದನೆ’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ” ಎಂದು ಕುಟುಕಿದ್ದಾರೆ.

“ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವಆರೋಪ ಹೊರಿಸಿ ರೂ.1,823 ಕೋಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ ರೂ.4.5 ಲಕ್ಷ ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ ರೂ.42 ಕೋಟಿ ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ ರೂ.4263 ಕೋಟಿ ಪಾವತಿಸಬೇಕಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ‘ಬಿರ್ಲಾ-ಸಹಾರಾ’ ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು: ಹೆಚ್‌ ಡಿ ದೇವೇಗೌಡ

“ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಡ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ” ಎಂದು ಹರಿಹಾಯ್ದಿದ್ದಾರೆ.

“ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು‌ ಮನ್ನಾ ಮಾಡಿರುವ ಬಿಜೆಪಿ ಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ” ಎಂದು ಆಗ್ರಹಿಸಿದ್ದಾರೆ.

“ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ” ಎಂದು ಟೀಕಿಸಿದ್ದಾರೆ.

“ಬಿಜೆಪಿ ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್‌ ಮೆಶಿನ್‌ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೆ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕೊಂಡು ಬರುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿದ್ದೇ ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರಮೋದಿಯವರು ವಿರೋಧಪಕ್ಷಗಳನ್ನು ಹಣಿಯಲು ಈ ರೀತಿಯ ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರಿಗೆ ಗೋಡೆ ಮೇಲಿನ ಬರಹ ಸ್ಪಷ್ಟವಾಗಿ ಕಾಣತೊಡಗಿದೆ ಎಂದರ್ಥ. ಅರಸನ ಮೈಮೇಲಿನ ಬಟ್ಟೆ ಒಂದೊಂದಾಗಿ ಕಳಚಿ ಬೀಳುತ್ತಿದೆ. ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ತಥಾಕಥಿತ ನಾಯಕರೆಲ್ಲರೂ ಬತ್ತಲೆಯಾಗುತ್ತಿದ್ದಾರೆ” ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...