‘POK’ಯನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡುವುದು ಬಿಜೆಪಿ ಉದ್ದೇಶವಾ? ಆರ್ ಅಶೋಕ್ ಬಿಚ್ಚಿಟ್ಟ ಒಳಗುಟ್ಟು!

Date:

ಆರ್. ಅಶೋಕ್ ಅವರು ಪಿಒಕೆಯನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದೇವೆ. ಅದನ್ನು ಮರಳಿ ಕೇಳುತ್ತಿಲ್ಲ, ಕೇಳುವುದಿಲ್ಲ ಎಂದಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಮೌನವಾಗಿದೆ. ಅಂದರೆ, ಅಶೋಕ್ ಅಭಿಪ್ರಾಯಕ್ಕೆ ಬಿಜೆಪಿಯ ಸಂಪೂರ್ಣ ಸಹಮತವಿದೆ ಎಂದರ್ಥವೇ? 

ಭಾರತ-ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಸದ್ಯ ವಿರಾಮ ಬಿದ್ದಿದೆ. ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಿಸಲಾಗಿದೆ. ಸಂಘರ್ಷಕ್ಕೆ ತಡೆಬಿದ್ದಿದ್ದರೂ, ಎರಡೂ ರಾಷ್ಟ್ರಗಳ ಗಡಿ ಭಾಗದಲ್ಲಿ ಉದ್ವಿಗ್ನತೆಯ ಕಾವು ಇನ್ನೂ ಉಳಿದಿದೆ. ಕದನ ವಿರಾಮಕ್ಕೆ ಭಾರತ ಒಪ್ಪಿಕೊಂಡಿದ್ದರ ಬಗ್ಗೆ ಸ್ವತಃ ಮೋದಿ ಭಕ್ತರೇ ಪ್ರಧಾನಿ ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕದನ ವಿರಾಮ ಬೇಕಿರಲಿಲ್ಲ, ಯುದ್ಧವನ್ನೇ ಮಾಡಬೇಕಿತ್ತು ಎಂದೆಲ್ಲ ಹೇಳುತ್ತಿದ್ದಾರೆ.

ಈ ನಡುವೆ, ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ಹೇಳಿಕೆಯೊಂದನ್ನು ನೀಡಿದ್ದಾರೆ. ಅವರ ಹೇಳಿಕೆ ವಿರೋಧ, ಆಕ್ರೋಶಗಳಿಗೆ ತುತ್ತಾಗಿದೆ. ಮಾತ್ರವಲ್ಲ, ಇದೇ ಬಿಜೆಪಿಯ ಉದ್ದೇಶ ಅಥವಾ ಅಜೆಂಡಾ ಆಗಿರಬಹುದೇ ಎಂಬ ಅನುಮಾನಗಳಿಗೂ ಕಾರಣವಾಗಿದೆ.

ಇತ್ತೀಚೆಗೆ, ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಆರ್ ಅಶೋಕ್, ”ಪಾಕಿಸ್ತಾನಕ್ಕೆ ಪಿಒಕೆ (ಪಾಕ್ ಅತಿಕ್ರಮಿತ ಕಾಶ್ಮೀರ) ಬಿಟ್ಟುಕೊಟ್ಟಿದ್ದು ನಾವು. ಆ ಬಗ್ಗೆ ನಾವು ಪ್ರಶ್ನೆ ಮಾಡಿಲ್ಲ. ಆಗಿಹೋಗಿದ್ದರ ಬಗ್ಗೆ ಮಾತನಾಡುವುದು ಈ ಸಂದರ್ಭದಲ್ಲಿ ಸೂಕ್ತವಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಮಾತಿನ ಅರ್ಥದಲ್ಲಿ, ಭಾರತವೇ ಪಿಒಕೆಯನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಅದನ್ನ ಈಗ ನಾವು ವಾಪಸ್‌ ಪಡೆಯಬೇಕು ಎನ್ನುವುದು, ವಾಪಸ್ ಕೇಳುವುದು ಸೂಕ್ತವಲ್ಲ ಎಂಬುದಾಗಿ ಹೇಳಿದ್ದಾರೆ.

ಅವರ ಹೇಳಿಕೆ ರಾಜ್ಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಅಶೋಕ್ ಹೇಳಿಕೆ ಬೆನ್ನಲ್ಲೇ ಪಿಒಕೆಯನ್ನು ಪಾಕಿಸ್ತಾನವೇ ಇಟ್ಟುಕೊಳ್ಳಲಿ, ಅದು ನಮಗೆ ಬೇಡ, ನಾವು ಪಿಒಕೆಯನ್ನು ಕೇಳುವುದಿಲ್ಲ. ಪಿಒಕೆ ಮರಳಿ ಭಾರತದ ಭಾಗವಾಗಬೇಕು ಎಂಬ ಯಾವುದೇ ಇರಾದೆ ತಮಗಿಲ್ಲ ಎಂಬುದೇ ಬಿಜೆಪಿಯ ಅಜೆಂಡಾ ಅಥವಾ ಉದ್ದೇಶವೇ ಎಂಬ ಪ್ರಶ್ನೆಗಳು ವ್ಯಕ್ತವಾಗುತ್ತಿವೆ.

ಸದ್ಯ, ಪಹಲ್ಗಾಮ್ ದಾಳಿಯ ಬಳಿಕ ಭಾರತ-ಪಾಕ್ ನಡುವೆ ಉದ್ಭವಿಸಿದ್ದ ಸಂಘರ್ಷವನ್ನು ತಡೆದದ್ದು ನಾನೇ, ನನ್ನಿಂದ ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಣೆಯಾಯಿತು, ವ್ಯಾಪಾರ ಸಂಬಂಧದ ಅಸ್ತ್ರ ಬಳಸಿ ಎರಡೂ ದೇಶಗಳನ್ನು ಮೌನಗೊಳಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪದೇ-ಪದೇ ಹೇಳುತ್ತಿದ್ದಾರೆ.

ಅಂತಾರಾಷ್ಟ್ರೀಯವಾಗಿ ಭಾರತವನ್ನು ಟ್ರಂಪ್ ಅವಮಾನಿಸುತ್ತಿದ್ದರೂ, ಪ್ರಧಾನಿ ಮೋದಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಟ್ರಂಪ್ ಹೇಳಿಕೆಯನ್ನು ಖಂಡಿಸಿಲ್ಲ. ಅಲ್ಲಗಳೆದಿಲ್ಲ.

ಇನ್ನು, ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ದೇಶದ ಜನರಿಗೆ ಮಾಹಿತಿ ನೀಡಿದ್ದ ಸೋಫಿಯಾ ಖುರೇಷಿ ಅವರನ್ನು ಉಗ್ರಗಾಮಿಗಳ ಸಹೋದರಿ ಎಂದು ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ನಾಲಿಗೆ ಹರಿಬಿಟ್ಟಿದ್ದಾರೆ. ಆ ಬಗ್ಗೆಯೂ ಮೋದಿ ಮಾತನಾಡಿಲ್ಲ.

ಇದೀಗ, ಆರ್. ಅಶೋಕ್ ಅವರು ಪಿಒಕೆಯನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದೇವೆ. ಅದನ್ನು ಮರಳಿ ಕೇಳುತ್ತಿಲ್ಲ, ಕೇಳುವುದಿಲ್ಲ ಎನ್ನುತ್ತಿದ್ದಾರೆ. ಪಿಒಕೆ ವಿಚಾರವಾಗಿ ಅಶೋಕ್ ಗಂಭೀರ ಹೇಳಿಕೆ ನೀಡಿದ್ದರೂ, ಪ್ರಧಾನಿ ಮೋದಿ ಆದಿಯಾಗಿ ಯಾವೊಬ್ಬ ಬಿಜೆಪಿ ನಾಯಕರೂ ಖಂಡಿಸಿಲ್ಲ, ಅಶೋಕ್ ಕ್ಷಮೆ ಕೇಳುವಂತೆ ಒತ್ತಾಯಿಸಿಲ್ಲ, ಅಶೋಕ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಅಶೋಕ್ ಹೇಳಿಕೆಯ ವಿಚಾರದಲ್ಲಿ ಬಿಜೆಪಿಗರ ಮೌನವು ಅಶೋಕ್ ನೀಡಿರುವ ಹೇಳಿಕೆಗೆ ಬಿಜೆಪಿಯ ಸಂಪೂರ್ಣ ಸಹಮತವಿದೆ. ಪಿಒಕೆ ವಿಚಾರದಲ್ಲಿ ಅಶೋಕ್ ನೀಡಿರುವ ಹೇಳಿಕೆಯೇ ಬಿಜೆಪಿಯ ನಿಲುವಾಗಿದೆ ಎಂಬ ಅಭಿಪ್ರಾಯವನ್ನು ಮೂಡಿಸಿದೆ.

1971ರ ಯುದ್ಧದ ನಂತರದಲ್ಲಿ ಎರಡೂ ರಾಷ್ಟ್ರಗಳ ಸೈನಿಕರು ಉಭಯ ರಾಷ್ಟ್ರಗಳು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದವು. ಬಳಿಕ, ಬಿಡುಗಡೆ ಮಾಡಿದವು. ಆದರೆ, ಪಾಕಿಸ್ತಾನ ಸೈನಿಕರನ್ನು ಮಾತ್ರವೇ ಭಾರತ ಬಿಡುಗಡೆ ಮಾಡಿತು, ಭಾರತೀಯ ಸೈನಿಕರನ್ನು ಪಾಕ್ ಬಿಡುಗಡೆ ಮಾಡಲಿಲ್ಲ. ಚಿತ್ರಹಿಂಸೆ ಕೊಟ್ಟು ಕೊಂದಿತು. ಈ ಬಗ್ಗೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಚಕಾರ ಎತ್ತಲಿಲ್ಲವೆಂದು ಬಿಜೆಪಿ/ಸಂಘಪರಿವಾರದ ಐಟಿ ಸೆಲ್‌ಗಳು ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡುತ್ತಿವೆ.

ಇಂತಹ ಸುಳ್ಳು ಸುದ್ದಿಗಳನ್ನು ನಂಬುವ, ಹಂಚಿಕೊಳ್ಳುವ ಹಿಂದುತ್ವವಾದಿ ಕಾರ್ಯಕರ್ತರು ಅಶೋಕ್ ಹೇಳಿಕೆಯನ್ನೂ ಒಪ್ಪಿಕೊಂಡುಬಿಡಬಹುದು. ಪಿಒಕೆ ಭಾರತದ ಭಾಗವಲ್ಲ, ಭಾರತಕ್ಕೆ ಬೇಡವೆಂಬ ಅಭಿಪ್ರಾಯವನ್ನು ತಮ್ಮಲ್ಲಿ ಆಳವಾಗಿ ಇರಿಸಿಕೊಂಡು ಬಿಡಬಹುದು. ಆದರೆ, ಪಿಒಕೆ ಭಾರತಕ್ಕೆ ಸೇರಿದ್ದು, ಕಾಶ್ಮೀರದ ಭಾಗವನ್ನು ಪಾಕಿಸ್ತಾನ ಅತಿಕ್ರಮಿಸಿಕೊಂಡು, ತನ್ನ ವಶದಲ್ಲಿ ಇರಿಸಿಕೊಂಡಿದೆ. ಆ ಭಾಗ ಎಂದಿಗೂ ಭಾರತದ ಭಾಗವೇ ಆಗಿರುತ್ತದೆ. ಆ ಪ್ರದೇಶವನ್ನು ಭಾರತ ಮರಳಿ ಪಡೆಯುತ್ತದೆ ಎಂಬ ವಿಶ್ವಾಸ ಭಾರತೀಯರಲ್ಲಿದೆ. ಇಂತಹ ಸಂದರ್ಭದಲ್ಲಿ ಅಶೋಕ್‌ರಂತಹ ನಾಯಕರು ನೀಡುವ ಹೇಳಿಕೆಗಳು ಕುಂದಿಸಿಬಿಡುವ ಅಪಾಯವಿದೆ.

ದೇಶದ ವಿಚಾರದಲ್ಲಿ ಹಗುರವಾಗಿ ಮಾತನಾಡುವ, ಸುಳ್ಳು ವದಂತಿಗಳನ್ನು ಹರಡುವ, ವಿವಾದಾತ್ಮಕ ಹೇಳಿಕೆ ಕೊಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಅದಕ್ಕಾಗಿ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...