‘ಸ್ಯಾನಿಟರಿ ಪ್ಯಾಡ್‌’ ಮೇಲೆ ರಾಹುಲ್‌ ಗಾಂಧಿ ಚಿತ್ರ ಹಾಕಿ ವಿಕೃತಿ ಮೆರೆದ ಬಿಜೆಪಿ

Date:

ಮುಂಬರುವ ಬಿಹಾರ ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್‌ ಪಕ್ಷವು ‘ಪ್ರಿಯದರ್ಶಿನಿ ಉಡಾನ್ ಯೋಜನೆ’ಯಡಿ 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವುದಾಗಿ ಘೋಷಿಸಿದೆ. ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಅವರು ಯೋಜನೆಯನ್ನು ಘೋಷಿಸಿದ್ದಾರೆ. ಈ ವೇಳೆ, ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ಚಿತ್ರಗಳು ಇರುವ ಸ್ಯಾನಿಟರಿ ಪ್ಯಾಡ್‌ಗಳ ಬಾಕ್ಸ್‌ಗಳನ್ನು ಪ್ರದೇಶಿಸಿದ್ದರು. ಇದನ್ನು ಟೀಕಿಸುವ ಭರದಲ್ಲಿ ಬಿಜೆಪಿ ವಿಕೃತಿ ಮೆರೆದಿದ್ದು, ಮತ್ತೊಮ್ಮೆ ತನ್ನ ಮಹಿಳಾ ವಿರೋಧಿ ಧೋರಣೆಯನ್ನು ವ್ಯಕ್ತಪಡಿಸಿದೆ. ಮಹಿಳೆಯರನ್ನು ಅಪಮಾನಿಸಿದೆ.

ಕಾಂಗ್ರೆಸ್‌ನ ‘ಪ್ರಿಯದರ್ಶಿನಿ ಉಡಾನ್ ಯೋಜನೆ’ಯನ್ನು ಬಿಜೆಪಿ ಟೀಕಿಸಲು ತೀರಾ ತುಚ್ಚ ಹಂತಕ್ಕೆ ಇಳಿದಿದೆ. ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್‌ ಮೇಲೆ ರಾಹುಲ್‌ ಗಾಂಧಿಯವರ ಚಿತ್ರವನ್ನು ಚಿತ್ರಿಸಿ ವಿಕೃತಿ ಮೆರೆದಿದೆ. ಬಿಜೆಪಿ ಐಟಿ ಸೆಲ್ ಸೃಷ್ಟಿಸಿರುವ ಈ ಚಿತ್ರವನ್ನು ಕಾಂಗ್ರೆಸ್‌ ಚಿತ್ರಿಸಿದೆ ಎಂದು ಕೆಲ ಬಿಜೆಪಿ ನಾಯಕರೇ ಆರೋಪಿಸಿದ್ದಾರೆ.

ಬಿಜೆಪಿ ಐಟಿ ಸೆಲ್ ಸೃಷ್ಟಿಸಿರುವ ಚಿತ್ರವನ್ನು ಹಂಚಿಕೊಂಡಿರುವ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, “ರಾಹುಲ್ ಗಾಂಧಿ ಅವರ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನ ಮೇಲೆ ಮುದ್ರಿಸುವುದು ಬಿಹಾರದ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಪಕ್ಷವಾಗಿದೆ” ಎಂದು ಆರೋಪಿಸಿದ್ದಾರೆ. ಬಿಜೆಪಿಯ ಮತ್ತೊಬ್ಬ ನಾಯಕ ಕುಂದನ್ ಕೃಷ್ಣ, “ಕಾಂಗ್ರೆಸ್‌ ಬೌದ್ಧಿಕವಾಗಿ ದಿವಾಳಿಯಾಗಿದೆ. ಮಹಿಳೆಯರ ಸಮಸ್ಯೆಗಳನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ಚಿತ್ರವನ್ನು ಬಿಜೆಪಿಯೇ ಚಿತ್ರಿಸಿ, ಕಾಂಗ್ರೆಸ್‌ ಮೇಲೆ ಆರೋಪಿಸಿದೆ. ಮಾತ್ರವಲ್ಲದೆ, ಬಿಜೆಪಿಯೇ ಮಹಿಳೆಯರನ್ನು ಅಪಮಾನಿಸುತ್ತಿದೆ. ಅಕ್ಷರಶಃ ಬಿಜೆಪಿ ತನ್ನೊಳಗಿನ ಮಹಿಳಾ ವಿರೋಧಿ ವಿಕೃತಿಯನ್ನು ಹೊರಹಾಕುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಬಿಜೆಪಿಯ ವಿಕೃತಿಯನ್ನು ಖಂಡಿಸಿರುವ ಕಾಂಗ್ರೆಸ್‌ನ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ, “ಬಿಜೆಪಿಯದ್ದು ಮಹಿಳಾ ವಿರೋಧಿ ಮನಸ್ಥಿತಿ. ಬಿಹಾರದಲ್ಲಿ ಋತುಸ್ರಾವದ ಶುಚಿತ್ವದ ಕೊರತೆಯಿಂದ ಮಹಿಳೆಯರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ, ಆರೋಗ್ಯ ಜಾಗೃತಿಯನ್ನು ಹೆಚ್ಚಿಸುವುದಕ್ಕಾಗಿ ನಾವು ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವ ಯೋಜನೆಯನ್ನು ಘೋಷಿಸಿದ್ದೇವೆ. ಆದರೆ, ಬಿಜೆಪಿಗರಿಗೆ ಮಹಿಳೆಯರು ಮತ್ತು ಅವರ ಸಮಸ್ಯೆಗಳ ಬಗ್ಗೆ ಕಾಳಜಿಯಿಲ್ಲ” ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...