ಕರ್ನಾಟಕದ ಸೋಲಿನಿಂದಾಗಿ ಬಿಜೆಪಿಯಿಂದ ಅವಧಿಪೂರ್ವ ಲೋಕಸಭಾ ಚುನಾವಣೆ ಘೋಷಣೆ: ಎಂ ಕೆ ಸ್ಟಾಲಿನ್

Date:

ಕರ್ನಾಟಕದ ವಿಧಾನಸಭಾ ಸೋಲಿನಿಂದಾಗಿ ಬಿಜೆಪಿಯು ಅವಧಿಗೂ ಮುನ್ನವೇ 2024ರ ಲೋಕಸಭಾ ಚುನಾವಣೆಯನ್ನು ಘೋಷಿಸಲು ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆರೋಪಿಸಿದ್ದಾರೆ.

ಭಾನುವಾರ ಸೇಲಂ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಭಾರತಾದ್ಯಂತ ಬಿಜೆಪಿ ಪ್ರಭಾವ, ವರ್ಚಸ್ಸು ಕ್ರಮೇಣ ಕಡಿಮೆಯಾಗುತ್ತಿದೆ. ಇದರಿಂದಾಗಿ ಬಿಜೆಪಿ ನಾಯಕರು ಯಾವ ನಿರ್ಧಾರವನ್ನು ಬೇಕಾದರೂ ಕೈಗೊಳ್ಳಬಹುದು. ಕರ್ನಾಟಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರು ಸಂಸತ್ತಿನ ಚುನಾವಣೆಯನ್ನು ಮೊದಲೇ ಘೋಷಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಎಂ ಕೆ ಸ್ಟಾಲಿನ್ ತಿಳಿಸಿದರು.

“ಮುಂದಿನ ವರ್ಷ 2024ರ ಏಪ್ರಿಲ್ ಇಲ್ಲವೇ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮೊದಲು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಸಜ್ಜುಗೊಳಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ನಾನು ಸಹ ಭಾಗವಹಿಸುತ್ತೇನೆ” ಎಂದು ಸ್ಟಾಲಿನ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ ಕಳೆದ 9 ವರ್ಷಗಳಲ್ಲಿ ತಮಿಳುನಾಡಿಗೆ ಏನು ಮಾಡಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಳುತ್ತಿದ್ದೇನೆ. ತಮಿಳುನಾಡಿಗೆ ಕೇಂದ್ರ ಬಿಜೆಪಿ ಸರ್ಕಾರ ಮೀಸಲಿಟ್ಟಿರುವ ವಿಶೇಷ ಯೋಜನೆಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕು. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಮಾಡಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಅಮಿತ್‌ ಶಾ ತಿಳಿಸಬೇಕು” ಎಂದು ಅವರು ಸವಾಲೆಸೆದರು.

ಈ ಸುದ್ದಿ ಓದಿದ್ದೀರಾ? 2024ರಲ್ಲಿ ಮೋದಿ ಗೆದ್ದರೆ ನರೇಂದ್ರ ಪುಟಿನ್‌ ಆಗುತ್ತಾರೆ; ಪಂಜಾಬ್‌ ಸಿಎಂ ಭಗವಂತ್ ಮಾನ್

“ತಮಿಳುನಾಡಿನ ವೆಲ್ಲೂರಿನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈಗೆ ಆಗಮಿಸಲಿದ್ದಾರೆ ಎಂಬ ಸುದ್ದಿಗಳನ್ನು ಮಾಧ್ಯಮಗಳು ವರದಿ ಮಾಡಿವೆ. ಇವೆಲ್ಲವೂ ಅಮಿತ್ ಶಾ ಅವರು 2024ರ ಸಂಸತ್ ಚುನಾವಣೆಗೆ ಸಜ್ಜಾಗುತ್ತಿರುವುದನ್ನು ತಿಳಿಸುತ್ತವೆ” ಎಂದು ಎಂ ಕೆ ಸ್ಟಾಲಿನ್ ತಿಳಿಸಿದರು.  

ಲೋಕಸಭೆ ಚುನಾವಣೆಗೆ ಸಿದ್ಧರಾಗಿರಿ ಎಂದು ಡಿಎಂಕೆ ಕಾರ್ಯಕರ್ತರಿಗೆ ಕರೆ ನೀಡಿದ ಸ್ಟಾಲಿನ್, ಯಾವುದೇ ರಾಜಕೀಯ ಪಕ್ಷವು ಡಿಎಂಕೆಯನ್ನು ಸೋಲಿಸಲು ಸಾಧ್ಯವಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ ಸ್ಥಾನಗಳನ್ನು ಗೆಲ್ಲಲು ಶ್ರಮಿಸಬೇಕು ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...