ಭಯೋತ್ಪಾದನೆ ವಿರೋಧಿ ರ್‍ಯಾಲಿಯಲ್ಲಿ ರಾಕೇಶ್ ಟಿಕಾಯತ್ ಭಾಗಿಗೆ ವಿರೋಧ; ತುರ್ತು ಕಿಸಾನ್ ಪಂಚಾಯತ್‌ಗೆ ಬಿಕೆಯು ಕರೆ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಭಾಗವಹಿಸುವಿಕೆಯನ್ನು ಕೆಲವು ಜನರು ವಿರೋಧಿಸಿದ ನಂತರ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಶನಿವಾರ ಮುಜಫರ್‌ನಗರದಲ್ಲಿ ತುರ್ತು ‘ಕಿಸಾನ್ ಪಂಚಾಯತ್’ಗೆ ಕರೆ ನೀಡಿದೆ.

ಘಟನೆಯ ಕುರಿತು ಚರ್ಚಿಸಲು ಮುಜಫರ್‌ನಗರದ ಜಿಐಸಿ ಮೈದಾನದಲ್ಲಿ ಪಂಚಾಯತ್ ನಡೆಸಲಾಗುವುದು ಎಂದು ಬಿಕೆಯು ರಾಷ್ಟ್ರೀಯ ಅಧ್ಯಕ್ಷ ನರೇಶ್ ಟಿಕಾಯತ್ ಘೋಷಿಸಿದರು. ‘ಆಕ್ರೋಶ ರ್‍ಯಾಲಿ’ಯಲ್ಲಿ ನಡೆದ ಘಟನೆಯು ರೈತರ ಚಳುವಳಿಯನ್ನು ದುರ್ಬಲಗೊಳಿಸಲು ‘ರಾಜಕೀಯ ಪಕ್ಷ’ ಆಯೋಜಿಸಿದ ಪಿತೂರಿಯ ಭಾಗವಾಗಿದೆ ಎಂದು ನರೇಶ್ ಟಿಕಾಯತ್ ಹೇಳಿದರು.

ಇದನ್ನು ಓದಿದ್ದೀರಾ? ಕನ್ವರ್ ಯಾತ್ರೆ ಬಳಿಕ ರೈತರ ಬೃಹತ್ ಪ್ರತಿಭಟನೆ; ಕೇಂದ್ರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ, ಪಹಲ್ಗಾಮ್ ದಾಳಿಯನ್ನು ವಿರೋಧಿಸಿ ಬಲಪಂಥೀಯ ಗುಂಪುಗಳು ಆಯೋಜಿಸಿದ್ದ ರಾಕೇಶ್ ಟಿಕಾಯತ್ ಅವರನ್ನು ಟೀಕಿಸಲಾಗಿದೆ ಮತ್ತು ಹಿಂತಿರುಗುವಂತೆ ಘೋಷಣೆ ಕೂಗಲಾಗಿದೆ. ಈ ಗದ್ದಲದಲ್ಲಿ ರಾಕೇಶ್ ಪೇಟವೂ ಬಿದ್ದಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನರೇಶ್ ಟಿಕಾಯತ್, “ಈ ಘಟನೆ ಸ್ವಯಂಪ್ರೇರಿತವಾಗಿ ನಡೆದಿಲ್ಲ. ಇದು ಪೂರ್ವ ಯೋಜಿತ ಮತ್ತು ರಾಜಕೀಯ ಉದ್ದೇಶದಿಂದ ಕೂಡಿದೆ” ಎಂದು ಆರೋಪಿಸಿದ್ದಾರೆ.

ಹಾಗೆಯೇ, “ಇದು ರೈತರ ಧ್ವನಿಯನ್ನು ನಿಗ್ರಹಿಸಲು ಒಂದು ನಿರ್ದಿಷ್ಟ ರಾಜಕೀಯ ಪಕ್ಷದಿಂದ ನಡೆಸಲ್ಪಟ್ಟ ಪಿತೂರಿ. ಕೆಲವು ಯುವಕರನ್ನು ಉದ್ದೇಶಪೂರ್ವಕವಾಗಿ ರ್‍ಯಾಲಿಯನ್ನು ಅಡ್ಡಿಪಡಿಸಲು ಕಳುಹಿಸಲಾಗಿದೆ. ಘೋಷಣೆಗಳನ್ನು ಕೂಗಿದವರು ಮದ್ಯಪಾನ ಮಾಡಿರುವಂತೆ ಕಂಡುಬಂದಿದೆ” ಎಂದು ದೂರಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ಬಿಕೆಯು ಟ್ರ್ಯಾಕ್ಟರ್ ಮೆರವಣಿಗೆಯನ್ನು ಆಯೋಜಿಸುವುದಾಗಿ ಟಿಕಾಯತ್ ಘೋಷಿಸಿದರು. ಮೆರವಣಿಗೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದರು. ಹಾಗೆಯೇ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...