‘ದೆಹಲಿಯಲ್ಲಿ ಬಿಜೆಪಿ ಸಾಧನೆಗಳು’ ಎಂಬ ವಿಚಿತ್ರ ಪುಸ್ತಕ ವೈರಲ್

Date:

‘ದಿಲ್ಲಿ ಮೇ ಭಜಪಾ ಕಿ ಉಪಲಬ್ಧಿಯಾನ್’ (ದೆಹಲಿಯಲ್ಲಿ ಬಿಜೆಪಿ ಸಾಧನೆಗಳು) ಎಂಬ ಖಾಲಿ ಪುಸ್ತಕವನ್ನು ಆಮ್‌ ಆದ್ಮಿ ಪಕ್ಷ (ಎಎಪಿ) ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದಿರುವ ಎಎಪಿ, ಖಾಲಿ ಪುಸ್ತಕಗಳನ್ನು ಬಿಡುಗಡೆ ಅಪಹಾಸ್ಯ ಮಾಡಿದೆ.

ಎಎಪಿ ರಾಜ್ಯಸಭಾ ಸದಸ್ಯ ಎಂಜಯ್ ಸಿಂಗ್ ಪತ್ರಿಕಾಗೋ‍ಷ್ಟಿಯಲ್ಲಿ ‘ಬಿಜೆಪಿ ಅಚೀವ್‌ಮೆಂಟ್‌ ಇನ್ ದೆಲ್ಲಿ’ ಎಂಬ ಹೆಸರಿನ ಖಾಲಿ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಆ ಪುಸ್ತಕಗಳ ಪ್ರತಿಗಳನ್ನು ಪುಸ್ತಕ ಮಳಿಗೆಗಳಲ್ಲಿ ಇಟ್ಟು, ಖಾಲಿ ಹಾಳೆಗಳಿರುವ ಪುಸ್ತಕವನ್ನು ತೆರೆದು, ಅದನ್ನು ವಿಡಿಯೋ ಮಾಡಿ, ಇದೇ ಬಿಜೆಪಿಯ ಸಾಧನೆಯೆಂದು ಸಾಮಾಜಿಕ ಜಾಲತಾಣದಲ್ಲಿ ಎಎಪಿ ವೈರಲ್ ಮಾಡಿದೆ.

ಪುಸ್ತಕವು ಬಿಜೆಪಿಯ ಅಪ್ರಬುದ್ಧತೆಯನ್ನು ಸಂಕೇತಿಸುತ್ತದೆ ಎಂದಿರುವ ಸಿಂಗ್, “ಬಿಜೆಪಿ ತನ್ನ ಸಾಧನೆಗಳ ಬಗ್ಗೆ ಮಾತನಾಡುವುದಿಲ್ಲ. ಆದ್ದರಿಂದ ನಾವು ಅವರಿಗಾಗಿ ಈ ಪುಸ್ತಕವನ್ನು ಬಿಡುಗಡೆ ಮಾಡಿದ್ದೇವೆ. 2014ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಶಾಶ್ವತ ವಸತಿ ಒದಗಿಸುವುದು, ರೈತರ ಆದಾಯವನ್ನು ದ್ವಿಗುಣಗೊಳಿಸುವುದು, ರೂಪಾಯಿಯನ್ನು ಬಲಪಡಿಸುವುದು ಹಾಗೂ ಗಡಿ ಭದ್ರತೆಯನ್ನು ಹೆಚ್ಚಿಸುವುದು ಸೇರಿದಂತೆ ಪೊಳ್ಳು ಭರವಸೆಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2014ರಲ್ಲಿ ಭಾರೀ ಭರವಸೆಗಳನ್ನು ನೀಡಿದ್ದ ಪ್ರಧಾನಿ ಮೋದಿ, ದೇಶದ ಪ್ರತಿಯೊಬ್ಬ ನಾಗರಿಕರ ಖಾತೆಗೆ 15 ಲಕ್ಷ ರೂ. ತಲುಪಿಸಲು, ವಾರ್ಷಿಕವಾಗಿ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸಲು ಅಥವಾ ಕೊಳೆಗೇರಿಗಳಲ್ಲಿ ಪಕ್ಕಾ ಮನೆಗಳನ್ನು ಒದಗಿಸಲು ವಿಫಲರಾಗಿದ್ದಾರೆ. 50 ರೂ.ಗೆ ಪೆಟ್ರೋಲ್‌, 40 ರೂ.ಗೆ ಡೀಸೆಲ್‌ ಹಾಗೂ 250 ರೂ.ಗೆ ಅಡುಗೆ ಅನಿಲ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ವಾಸ್ತವ ಭಾರೀ ಗಂಭೀರವಾಗಿದೆ” ಎಂದು ಕಿಡಿಕಾರಿದ್ದಾರೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ಬಿಜೆಪಿಯ ಸಾಧನೆಗಳ ಕುರಿತು ಈ ಪುಸ್ತಕವನ್ನು ದೇಶದ ಮುಂದೆ ತರುವುದು ಅಗತ್ಯವಾಗಿತ್ತು. ಸಾರ್ವಜನಿಕರು ತಮಗೆ ಬಿಜೆಪಿ ಎಷ್ಟು ಸುಳ್ಳುಗಳನ್ನು ನೀಡಿತ್ತು ಎಂಬುದರ ಬಗ್ಗೆ ಗಮನಿಸಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...