ಶಿಂದೆ ಟೀಕೆ ವಿವಾದ | ಕುನಾಲ್ ಕಾಮ್ರಾಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಅಳಿಸಿ ಹಾಕಿದ ‘ಬುಕ್‌ಮೈಶೋ’

Date:

ಆನ್‌ಲೈನ್ ಟಿಕೆಟ್‌ ಮಾಡುವ ಪ್ಲಾಟ್‌ಫಾರ್ಮ್ ಆದ ಬುಕ್‌ಮೈಶೋ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಅಳಿಸಿಹಾಕಿದೆ. ತನ್ನ ವೆಬ್‌ಸೈಟ್‌ನಲ್ಲಿದ್ದ ಕಲಾವಿದರ ಪಟ್ಟಿಯಿಂದ ಕುನಾಲ್ ಕಾಮ್ರಾ ಹೆಸರನ್ನೂ ತೆಗೆದುಹಾಕಿದೆ ಎಂದು ವರದಿಯಾಗಿದೆ.

ಯುವ ಶಿವಸೇನೆ ಪ್ರಧಾನ ಕಾರ್ಯದರ್ಶಿ ರಾಹುಲ್ ಎನ್ ಕನಾಲ್ ಬುಕ್‌ಮೈಶೋಗೆ ಇತ್ತೀಚೆಗೆ ಪತ್ರ ಬರೆದಿದ್ದು, ಅದಾದ ಬಳಿಕ ಈ ಕ್ರಮಕೈಗೊಳ್ಳಲಾಗಿದೆ. ಕುನಾಲ್ ಕಾರ್ಯಕ್ರಮಗಳಿಗೆ ಟಿಕೆಟ್ ಮಾರಾಟವನ್ನು ಮಾಡಬಾರದು ಎಂದು ಒತ್ತಾಯಿಸಿ ರಾಹುಲ್ ಪತ್ರ ಬರೆದಿದ್ದರು.

ಇದನ್ನು ಓದಿದ್ದೀರಾ? ‘ಯಾರು ಅವರು, 2 ನಿಮಿಷದ ಕಾಮೆಡಿಯನ್’: ಕುನಾಲ್ ಕಾಮ್ರಾ ಬಗ್ಗೆ ಕಂಗನಾ ರಣಾವತ್ ಕಿಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 2ರಂದು ಈ ಪತ್ರವನ್ನು ಬರೆಯಲಾಗಿದ್ದು, ಕುನಾಲ್ ಕಾರ್ಯಕ್ರಮದಿಂದ ಸಾರ್ವಜನಿಕರ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಉಲ್ಲೇಖಿಸಲಾಗಿದೆ. “ಬುಕ್‌ಮೈಶೋ ಈ ಹಿಂದೆ ಆಕ್ರಮಣಕಾರಿಯಾಗಿ ಮಾತನಾಡುವ ಕುನಾಲ್ ಕಾಮ್ರಾ ಶೋಗಳ ಟಿಕೆಟ್ ಮಾರಾಟಕ್ಕೆ ಅವಕಾಶ ನೀಡಿದೆ ಎಂದು ತಿಳಿದುಬಂದಿದೆ. ಆದರೆ ಅವರು ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಇತರೆ ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಅವರ ಟಿಕೆಟ್ ಮಾರಾಟಕ್ಕೆ ಅವಕಾಶ ನೀಡಬಾರದು” ಎಂದು ಉಲ್ಲೇಖಿಸಲಾಗಿದೆ.

ತನ್ನ ಪಕ್ಷವನ್ನೇ ಇಬ್ಭಾಗ ಮಾಡಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ದ್ರೋಹಿ ಎಂದು ತನ್ನ ಕಾರ್ಯಕ್ರಮವೊಂದರಲ್ಲಿ ಕುನಾಲ್ ಕಾಮ್ರಾ ಹೇಳಿದ್ದರು. ಎಲ್ಲಿಯೂ ಶಿಂದೆ ಹೆಸರನ್ನು ಉಲ್ಲೇಖಿಸದ ಕುನಾಲ್ ‘ಥಾಣೆಯ ನಾಯಕ’ ಎಂದು ಹೇಳಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಕಾರ್ಯಕ್ರಮ ನಡೆದ ಸ್ಟುಡಿಯೋವನ್ನು ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಕುನಾಲ್‌ಗೆ ಶಿವಸೇನೆ ನಾಯಕರು ಜೀವ ಬೆದರಿಕೆ ಕೂಡಾ ಹಾಕಿದ್ದರು.

ಇವೆಲ್ಲವುದರ ನಡುವೆ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ನಾಯಕರುಗಳು ಹಲವು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ವಿಚಾರಣೆಗಾಗಿ ಪೊಲೀಸರು ಒಟ್ಟು ಮೂರು ಬಾರಿ ಸಮನ್ಸ್ ನೀಡಿದ್ದು, ಕುನಾಲ್ ವಿಚಾರಣೆ ಹಾಜರಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...