ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕ

Date:

ಕರ್ನಾಟಕದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕಗೊಳಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಕಟಣೆ ಹೊರಡಿಸಿದ್ದಾರೆ.

 

ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಅವರ ಪುತ್ರರಾಗಿರುವ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಶುಕ್ರವಾರ, ತಕ್ಷಣಕ್ಕೆ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರಕಟಣೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯೇಂದ್ರ ಅವರ ಆಯ್ಕೆಯೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ಕೊನೆಗೂ ತೆರೆ ಬಿದ್ದಂತಾಗಿದೆ. ವಿಜಯೇಂದ್ರ ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿದ್ದ ಅವಧಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತಾದರೂ, ಅಂತಿಮವಾಗಿ ಇದೀಗ ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪನವರ ಪುತ್ರನಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಮಣೆ ಹಾಕಿದೆ. ರಾಜ್ಯದ ರಾಜಕೀಯದಲ್ಲಿ ತನ್ನ ವರ್ಚಸ್ಸು ಇನ್ನೂ ಇದೆ ಎಂಬ ಸ್ಪಷ್ಟ ಸಂದೇಶವನ್ನು ಪಕ್ಷದೊಳಗೆ ತನ್ನ ವಿರುದ್ಧ ಮಸಲತ್ತು ಮಾಡಿದವರಿಗೆ ತೋರಿಸಿಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...