ಬ್ರೇಕಿಂಗ್ ನ್ಯೂಸ್ | 370ನೇ ವಿಧಿ ರದ್ದು ; ಆಗಸ್ಟ್‌ನಿಂದ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ತೀರ್ಮಾನ

Date:

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದು ಗೊಳಿಸಿತ್ತು. ರದ್ದುಗೊಳಿಸಿರುವುದನ್ನು ಸಮರ್ಥಿಸಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು.

ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟಿನ ಮುಖ್ಯ ನಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು, ಆಗಸ್ಟ್ 2ರಿಂದ ದಿನನಿತ್ಯವೂ ಅರ್ಜಿಗಳ ವಿಚಾರಣೆ ಆಲಿಸಲು ಒಪ್ಪಿಕೊಂಡಿದೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ, ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ 20ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಸಲ್ಲಿಸಲಾಗಿದ್ದ ಅರ್ಜಿಗಳ ಪೈಕಿ ಶಾ ಫೈಸಲ್ ಹಾಗೂ ಶೆಹ್ಲಾ ರಶೀದ್ ತಮ್ಮ ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು ಸಾಂವಿಧಾನಿಕ ಪೀಠದ ಇತರ ಸದಸ್ಯರಾಗಿ, ವಿಚಾರಣೆ ಆಲಿಸಿದರು.

370ನೇ ವಿಧಿಯನ್ನು ರದ್ದುಪಡಿಸುವ ವಿಧೇಯಕವನ್ನು ಆಗಸ್ಟ್ 5, 2019ರಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದರು. ಬಳಿಕ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರಕಿತ್ತು. ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಾಖ್ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಪರಿಗಣಿಸುವ ವಿಧಿಯನ್ನು ಅಂಗೀಕರಿಸಲಾಗಿತ್ತು.

ಸುಮಾರು ನಾಲ್ಕು ವರ್ಷಗಳ ಬಳಿಕ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಈ ವಿಷಯವನ್ನು ಕೈಗೆತ್ತಿಕೊಂಡಿದ್ದು ವಿಚಾರಣೆ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಕೇಂದ್ರ ಸರ್ಕಾರ ಈ ಹೊಸ ಅಫಿಡವಿಟ್‌ನ್ನು ಸಲ್ಲಿಸಿತ್ತು.

ತನ್ನ ಅಫಿಡವಿಟ್‌ನಲ್ಲಿ, ಕೇಂದ್ರ ಗೃಹ ಸಚಿವಾಲಯವು 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಪ್ರಗತಿ ಕಾಣುತ್ತಿದೆ. ಈ ಹಿಂದೆ ಕಲ್ಲು ತೂರಾಟದಂತಹ ಘಟನೆ ನಡೆಯುತ್ತಿದ್ದವು, ಆದರೆ ಇದೀಗ ಅಂತಹ ಘಟನೆಗಳು ನಡೆಯುತ್ತಿಲ್ಲ ಎಂದು ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...