ಬ್ರಿಜ್ ಭೂಷಣ್ ದೋಷಿ ಅಲ್ಲ, ಮಗನಿಗೆ ಟಿಕೆಟ್ ನೀಡಿದ್ದು ಪ್ರಶ್ನಾರ್ಹವಲ್ಲ: ನಿರ್ಮಲಾ ಸೀತಾರಾಮನ್

Date:

ಬ್ರಿಜ್ ಭೂಷಣ್ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಸಂಬಂಧ ಹಲವು ಗಂಭೀರ ಆರೋಪಗಳಿದ್ದರೂ, ಅವರ ಕಿರಿಯ ಪುತ್ರ ಕರಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶದ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಲ್ಲಿ ಕರಣ್‌ ಸಿಂಗ್‌ ಅವರನ್ನು ಕಣಕ್ಕಿಳಿಸಿರುವ ಬಿಜೆಪಿ ನಿರ್ಧಾರವನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ. “ಬ್ರಿಜ್ ಭೂಷಣ್ ದೋಷಿ ಅಲ್ಲ, ಮಗನಿಗೆ ಟಿಕೆಟ್ ನೀಡಿದ್ದು ಪ್ರಶ್ನಾರ್ಹವಲ್ಲ” ಎಂದು ಹೇಳಿದ್ದಾರೆ.

“ತಂದೆ, ತಾಯಿ ಅಥವಾ ಚಿಕ್ಕಪ್ಪನ ಮೇಲೆ ಗಂಭೀರ ಅಪರಾಧದ ಆರೋಪಗಳಿರುವ ಎಷ್ಟು ಜನರು ಟಿಕೆಟ್‌ ಪಡೆದಿದ್ದಾರೆ. ಅಂತವರಿಗೆ ಎಲ್ಲ ಪಕ್ಷಗಳೂ ಟಿಕೆಟ್ ನೀಡುತ್ತವೆ. ಶಿಕ್ಷೆಗೊಳಗಾದವರ ಮಕ್ಕಳಿಗೂ ಟಿಕೆಟ್ ಸಿಗುತ್ತದೆ. ಇಲ್ಲಿ ಬ್ರಿಜ್ ಭೂಷಣ್ ವಿರುದ್ಧ ಇನ್ನೂ ಯಾವುದೇ ಆರೋಪಗಳುಸಾಬೀತಾಗಿಲ್ಲ. ಹಾಗಿದ್ದಲ್ಲಿ, ಅವರ ಮಗನಿಗೆ ಟಿಕೆಟ್ ನೀಡಿರುವುದನ್ನು ಹೇಗೆ ಪ್ರಶ್ನಿಸಲು ಸಾಧ್ಯ? ಅವರು ತಪ್ಪಿತಸ್ಥ ಎಂದು ನಾವು ಹೇಗೆ ನಿರ್ಧರಿಸಬಹುದು” ಎಂದು ನಿರ್ಮಲಾ ವಾದಿಸಿದ್ದಾರೆ.

ಬ್ರಿಜ್ ಭೂಷಣ್ ಸಿಂಗ್ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷನಾಗಿ ತಮ್ಮ ಸ್ಥಾನವನ್ನು ದುರುಪಯೋಗ ಮಾಡಿಕೊಂಡು ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ವಿನೇಶ್ ಪೋಗಟ್ ಸೇರಿದಂತೆ ಆರು ಮಂದಿ ಕುಸ್ತಿಪಟುಗಳು ಆರೋಪಿಸಿದ್ದರು. ಅಪ್ರಾಪ್ತ ಕುಸ್ತಿಪಟು ಕೂಡ ಸಿಂಗ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಆರೋಪ ಮಾಡಿದ್ದರು. ಅಪ್ರಾಪ್ತ ಕುಸ್ತಿಪಟು ಕುಟುಂಬದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪಗಳ ನಡುವೆ, ಪೋಕ್ಸೋ ದೂರನ್ನು ಕುಟುಂಬವು ಹಿಂಪಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಪೋಗಟ್ ಹಾಗೂ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಸಿಂಗ್ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಬಂಧನಕ್ಕೆ ಒತ್ತಾಯಿಸಿದ್ದರು. ಅದಾಗ್ಯೂ, ಕೇಂದ್ರ ಸರ್ಕಾರ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬದಲಾಗಿ, ಪ್ರತಿಭಟನಾನಿರಕ ಮಹಿಳಾ ಕುಸ್ತಿಪಟುಗಳ ಮೇಲೆಯೇ ಪೊಲೀಸರು ಮೂಲಕ ದೌರ್ಜನ್ಯ ಎಸಗಿತ್ತು. ಇದೀಗ, ಆತನ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಭಾರತೀಯ ಕುಸ್ತಿಪಟುಗಳು ಮತ್ತು ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಕರಣ್ ಅವರನ್ನು ಕಣಕ್ಕಿಳಿಸುವ ಬಿಜೆಪಿ ನಿರ್ಧಾರವನ್ನು ತೀಕ್ಷ್ಣವಾಗಿ ಖಂಡಿಸಿದ್ದಾರೆ.

ಬ್ರಿಜ್ ಭೂಷಣ್ ಅವರ ಹಿರಿಯ ಮಗ ಪ್ರತೀಕ್ ಭೂಷಣ್ ಸಿಂಗ್ ಉತ್ತರ ಪ್ರದೇಶದಲ್ಲಿ ಶಾಸಕರಾಗಿದ್ದಾರೆ. ಬ್ರಿಜ್ ಭೂಷಷ್ ಮತ್ತೊಬ್ಬ ಪುತ್ರನಿಗೆ ಲೋಕಸಭೆ ಟಿಕೆಟ್ ನೀಡಿದ್ದನ್ನು ಖಂಡಿಸಿ ಬಿಜೆಪಿಯ ಮಿತ್ರ ಪಕ್ಷ ಆರ್‌ಎಲ್‌ಡಿಯ ವಕ್ತಾರ ರೋಹಿತ್ ಜಾಕರ್ ರಾಜೀನಾಮೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಪ್ರಕರಣದಲ್ಲಿ ಆರೋಪಿಯ ಪರವಾಗಿ ಬಿಜೆಪಿ ನಿಂತಿದೆ. ಮಾತ್ರವಲ್ಲ, ಹಲವಾರು ಪ್ರಕರಣಗಳಲ್ಲಿ ಅತ್ಯಾಚಾರ ಆರೋಪಿಳ ಪರವಾಗಿ ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ, ಕರ್ನಾಟಕದ ಹಾಸನ ಸಂಸದ, ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕೃತ್ಯಗಳ ಬಗ್ಗೆ ಮೊದಲೇ ತಿಳಿದಿದ್ದರೂ, ಆತನಿಗೆ ಟಿಕೆಟ್‌ ನೀಡಲು ಬಿಜೆಪಿ ಒಪ್ಪಿಕೊಂಡಿತ್ತು. ಮಾತ್ರವಲ್ಲದೆ, ಆತ ಪರವಾಗಿ ಪ್ರಧಾನಿ ಮೋದಿ ಮತ ಯಾಚಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...