ಸುಲಿಗೆ ಪ್ರಕರಣ: ಬಿಆರ್‌ಎಸ್‌ ಶಾಸಕ ಕೌಶಿಕ್ ರೆಡ್ಡಿ ಬಂಧನ

Date:

ಸುಲಿಗೆ ಪ್ರಕರಣದಲ್ಲಿ ತೆಲಂಗಾಣದ ಬಿಆರ್‌ಎಸ್‌ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ಶನಿವಾರ ಮುಂಜಾನೆ ವಾರಂಗಲ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ತೆಲಂಗಾಣದ ಹುಜೂರಾಬಾದ್ ಶಾಸಕರಾದ ಕೌಶಿಕ್ ಅವರನ್ನು ಆರ್‌ಜಿಐ ವಿಮಾನ ನಿಲ್ದಾಣದಲ್ಲಿ ಬಂಧಿಸಿ ವಾರಂಗಲ್‌ಗೆ ಕರೆದೊಯ್ಯಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಬಿಆರ್‌ಎಸ್‌ ನಾಯಕ ಕೆಟಿಆರ್ ಸೇರಿದಂತೆ 8 ನಾಯಕರಿಗೆ ‘ಗೃಹಬಂಧನ’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಕೌಶಿಕ್ ರೆಡ್ಡಿ ಅವರು ಕ್ವಾರಿ ಮಾಲೀಕರನ್ನು ಬೆದರಿಸಿ 25 ಲಕ್ಷ ರೂ. ಪಡೆದಿದ್ದಾರೆ, ಬಳಿಕ ಮತ್ತೆ 50 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ ನಮ್ಮ ಶಾಸಕದ ಮೇಲೆ ಸುಳ್ಳು ಆರೋಪ ಮಾಡಲಾಗಿದೆ, ಇವೆಲ್ಲವನ್ನು ಕಾಂಗ್ರೆಸ್ ಸರ್ಕಾರವೇ ಮಾಡುತ್ತಿದೆ ಎಂದು ಬಿಆರ್‌ಎಸ್ ದೂರಿದೆ. ಸರ್ಕಾರದ ಅಕ್ರಮಗಳನ್ನು ಪ್ರಶ್ನಿಸಿದ ಕಾರಣಕ್ಕೆ ಈ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿದೆ.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಅಕ್ರಮಗಳು, ಸಚಿವರು ಮತ್ತು ಆಡಳಿತಾರೂಢ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕೌಶಿಕ್ ರೆಡ್ಡಿ ಪ್ರಶ್ನಿಸುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೂಡಲಾಗುತ್ತಿದೆ ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಕೌಶಿಕ್ ಅವರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...