ಬಿಎಸ್‌ವೈ ಪೋಕ್ಸೋ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Date:

ಪೋಕ್ಸೋ ಪ್ರಕರಣದಲ್ಲಿ ಸಂಜ್ಞೇ ಮಾಡಿದ್ದಾರೆ ಎಂಬ ಹೇಳಿಕೆಯನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿದ್ದು, ಅದನ್ನು ರದ್ದುಪಡಿಸಬೇಕೆಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ. ಗುರುವಾರ (ಅ.23) ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಶನಿವಾರಕ್ಕೆ (ಅ.25) ಕಾಯ್ದಿರಿಸಿದೆ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್‌ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ನಂತರ ಪ್ರಕರಣವನ್ನು ಸಿಐಡಿಗೆ ತನಿಖೆ ವರ್ಗಾಯಿಸಲಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯವು ಪೋಕ್ಸೊ ಪ್ರಕರಣದಲ್ಲಿ ಮೊದಲ ಬಾರಿಗೆ ಸಂಜ್ಞೇಯನ್ನು ಪರಿಗಣಿಸಿತ್ತು. ಅದನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ಇತರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಹೊಸದಾಗಿ ಸಂಜ್ಞೇ ಪರಿಗಣಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು. ಈಗ ಎರಡನೇ ಬಾರಿಗೂ ವಿಚಾರಣಾ ನ್ಯಾಯಾಲಯವು ಸಂಜ್ಞೇಯನ್ನು ಪರಿಗಣಿಸಿತ್ತು. ಹೀಗಾಗಿ, ಮತ್ತೊಮ್ಮೆ ಸಂಜ್ಞೇ ಪರಿಗಣಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಅರ್ಜಿಯ ವಿಚಾರಣೆ ವೇಳೆ, ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, “ವಿಚಾರಣಾ ನ್ಯಾಯಾಲಯವು ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಆಧರಿಸಿ ಸಂಜ್ಞೇ ಪರಿಗಣಿಸಿದೆ. ಈ ತೀರ್ಮಾನಕ್ಕೆ ಸರಿಯಾದ ಕಾರಣವನ್ನು ದಾಖಲಿಸಿಲ್ಲ. ನ್ಯಾಯಾಂಗವು ವಿವೇಚನೆಯನ್ನು ಬಳಸಿಲ್ಲ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಪ್ರಿಯಾಂಕ್ ಪರ ಕೆಬಿಜಿ ಪೋಸ್ಟ್: ಬಲಪಂಥೀಯ ಟೂಲ್‌ಕಿಟ್ ಪ್ರತಿಕ್ರಿಯೆ ಏನಿತ್ತು? – ತನಿಖಾ ವರದಿ

ಪ್ರಾಸಿಕ್ಯೂಷನ್‌ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌ ಜಗದೀಶ್‌ ಅವರು, “ಸಂತ್ರಸ್ತೆಯ ತಾಯಿ ಮತ್ತು ಯಡಿಯೂರಪ್ಪ ನಡುವಿನ ಆಡಿಯೋ ರೆಕಾರ್ಡಿಂಗ್‌ ಅನ್ನು ನಾಶಪಡಿಸಲಾಗಿದೆ. ಅದು ಇಲ್ಲ ಎಂದಾದರೆ ಯಡಿಯೂರಪ್ಪ ಅವರು ಎರಡು ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಏಕೆ ನೀಡಿದ್ದರು? ಸಂತ್ರಸ್ತೆಯ ತಾಯಿಯ ಮೊಬೈಲ್‌ ಕಸಿದು ಸಹ ಆರೋಪಿ ಅರುಣ್‌ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ಆಡಿಯೋ ರೆಕಾರ್ಡಿಂಗ್‌ ಡಿಲೀಟ್‌ ಮಾಡಿಸಿದ್ದಾರೆ. ಆದರೆ, ಸಂತ್ರಸ್ತೆ ಮೊಬೈಲ್‌ನಲ್ಲಿ ಅಸಲಿ ಆಡಿಯೋ ಇದೆ” ಎಂದು ವಾದಿಸಿದ್ದಾರೆ.

ಆಡಿಯೊದಲ್ಲಿರುವ ಧ್ವನಿ ಯಡಿಯೂರಪ್ಪ ಅವರದ್ದೇ ಎಂದು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿ ದೃಢಪಡಿಸಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಎರಡೂ ಕಡೆಯ ವಿವರವಾದ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿದೆ. ವಾಸ್ತವಿಕ ಅಂಶಗಳಿಗೆ ಸಂಬಂಧಿಸಿದ ವಿವರಣೆಯನ್ನು ಶನಿವಾರ ನೀಡಲಾಗುವುದು ಎಂದು ಮೌಖಿಕವಾಗಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...