‘ಬಜೆಟ್ ಪಕ್ಷಪಾತ, ರಾಜ್ಯಗಳನ್ನು ವಿಭಜಿಸುವ ಪಿತೂರಿ’; ನೀತಿ ಆಯೋಗ ಸಭೆಯಲ್ಲಿ ಪ್ರತಿಭಟನೆಗೆ ಮಮತಾ ಸಜ್ಜು

Date:

ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಖಚಿತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್‌ ಪಕ್ಷಪಾತ ಮತ್ತು ರಾಜ್ಯಗಳನ್ನು ವಿಭಜಿಸುವ ಪಿತೂರಿ ವಿರುದ್ಧ ಪ್ರತಿಭಟಿಸಲು ಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

ಇತ್ತೀಚೆಗೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ 2 ರಾಜ್ಯಗಳಿಗೆ (ಆಂಧ್ರ ಮತ್ತು ಬಿಹಾರ) ಮಾತ್ರವೇ ಆಧ್ಯತೆ ನೀಡಲಾಗಿದೆ. ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯನ್ನು ‘ಬಾಯ್‌ಕಾಟ್’ ಮಾಡಿದ್ದು, ಸಭೆಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದಾರೆ. ಮಮತಾ ಕೂಡ ಸಭೆಯಲ್ಲಿ ಭಾಗಿಯಾಗುವುದಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅವರು ಸಭೆಗೆ ತೆರಳುವುದಾಗಿ ತಿಳಿಸಿದ್ದಾರೆ.

ದೆಹಲಿಗೆ ಹೊರಡುವ ಮೊದಲು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, “ಸಭೆಯಲ್ಲಿ ಭಾಗವಹಿಸುತ್ತೇನೆ. ‘ತಾರತಮ್ಯ ಬಜೆಟ್’ ಮತ್ತು ‘ಬಂಗಾಳ ಸೇರಿದಂತೆ ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳನ್ನು ವಿಭಜಿಸುವ ಪಿತೂರಿ’ ವಿರುದ್ಧ ಸಭೆಯಲ್ಲಿ ಪ್ರತಿಭಟನೆ ನಡೆಸುತ್ತೇನೆ. ನನ್ನ ಪ್ರತಿಭಟನೆಯನ್ನು ದಾಖಲಿಸಲು ಸಭೆಯ ಅವಕಾಶವನ್ನು ಬಳಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘‘ಸಭೆಯಲ್ಲಿ ಸ್ವಲ್ಪ ಹೊತ್ತು ಮಾತ್ರವೇ ಇರುತ್ತೇನೆ. ಸಭೆಯಲ್ಲಿ ಭಾಷಣ ಮಾಡಲು ಅವಕಾಶ ಸಿಕ್ಕರೆ ಬಜೆಟ್‌ನಲ್ಲಿ ಪ್ರತಿಪಕ್ಷಗಳ ಆಡಳಿತದಲ್ಲಿರುವ ರಾಜ್ಯಗಳ ವಿರುದ್ಧದ ತಾರತಮ್ಯ, ರಾಜಕೀಯ ಪಕ್ಷಪಾತ, ಬಂಗಾಳ ಮತ್ತು ನೆರೆಯ ರಾಜ್ಯಗಳನ್ನು ವಿಭಜಿಸುವ ಪಿತೂರಿಯನ್ನು ಖಂಡಿಸಿ, ಪ್ರತಿಭಟನೆಯನ್ನು ದಾಖಲಿಸಿ ಸಭೆಯಿಂದ ಹೊರಡುತ್ತೇನೆ” ಎಂದು ಬ್ಯಾನರ್ಜಿ ಹೇಳಿದ್ದಾರೆ.

“ಬಂಗಾಳ, ಬಿಹಾರ, ಜಾರ್ಖಂಡ್ ಮತ್ತು ಅಸ್ಸಾಂ ಅನ್ನು ವಿಭಜಿಸುವ ಷಡ್ಯಂತ್ರ ನಡೆಯುತ್ತಿದೆ. ಕೇಂದ್ರ ಸಚಿವರು ರಾಜ್ಯ ವಿಭಜನೆಯ ಬಗ್ಗೆ ತಮ್ಮದೇ ಆದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಜ್ಯಗಳನ್ನು ವಿಭಜಿಸುವ ಬೇಡಿಕೆಯು ಬಿಜೆಪಿಯ ವಿವಿಧ ವಲಯಗಳಿಂದ ಕೇಳಿ ಬರುತ್ತಿದೆ. ಬಂಗಾಳವನ್ನು ವಿಭಜಿಸುವುದು ಎಂದರೆ ಭಾರತವನ್ನು ವಿಭಜಿಸುವುದು ಎಂದರ್ಥ” ಎಂದು ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...