ಕೇಂದ್ರ ಬಜೆಟ್‌ | ನಿಜವಾದ ‘ಚಾರ್‌ ಸೋ ಪಾರ್’ ಮಾಡಲು ಪ್ರಧಾನಿಗೆ ಅವಕಾಶ ಎಂದ ಕಾಂಗ್ರೆಸ್!

Date:

ಕೇಂದ್ರ ಬಜೆಟ್ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶಾದಾದ್ಯಂತ ‘ಚಾರ್‌ ಸೋ ಪಾರ್’ (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ರಾಷ್ಟ್ರವ್ಯಾಪಿ ಕನಿಷ್ಠ ವೇತನ 400 ರೂಪಾಯಿಗೂ ಅಧಿಕ ಮಾಡಬಹುದು ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. ಕನಿಷ್ಠ ವೇತನವೊಂದರ ಡೇಟಾವನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಅವರಿಗೆ ‘ಚಾರ್‌ ಸೋ ಪಾರ್’ ಮಾಡುವ ಅವಕಾಶದ ಬಗ್ಗೆ ವಿವರಿಸಿದ್ದಾರೆ.

‘ನೈಜ ವೇತನ ಕುಸಿತ’ದ ಬಗ್ಗೆ ಪ್ರಸ್ತಾಪ ಮಾಡಿರುವ ಕಾಂಗ್ರೆಸ್, “ಲೋಕಸಭೆಯಲ್ಲಿ ಚಾರ್ ಸೋ ಪಾರ್ ಅನ್ನು ತಲುಪುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತದಾರರು ಛೀಮಾರಿ ಹಾಕಿದ್ದಾರೆ. ಆದರೆ ಬಜೆಟ್ ಅವರಿಗೆ ಅವಕಾಶ ನೀಡುತ್ತದೆ. ದಿನಕ್ಕೆ 400 ರೂಪಾಯಿಗಳ ರಾಷ್ಟ್ರವ್ಯಾಪಿ ಕನಿಷ್ಠ ವೇತನದ ಅಸಲಿ ಚಾರ್‌ ಸೋ ಪಾರ್‌ ಅನ್ನು ಸಾಧಿಸುವ ಅವಕಾಶವಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

“10 ವರ್ಷಗಳ ಹಿಂದೆ ಕಾರ್ಮಿಕರು ಎಷ್ಟು ಆಹಾರ, ವಸ್ತು ಸಾಮಾಗ್ರಿಗಳ ಖರೀದಿಸುವ ಆರ್ಥಿಕ ಬಲವನ್ನು ಹೊಂದಿದ್ದರೋ ಅದಕ್ಕಿಂತ ಅತೀ ಕಡಿಮೆ ಸಾಮರ್ಥ್ಯವನ್ನು ಪ್ರಸ್ತುತ ಹೊಂದಿದ್ದಾರೆ ಎಂದು ಸರ್ಕಾರದ ಅಧಿಕೃತ ಅಂಕಿಅಂಶಗಳು ಸೇರಿದಂತೆ ಅನೇಕ ಡೇಟಾ ಮೂಲಗಳು ತೋರಿಸುತ್ತದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಇನ್ನು ಲೇಬರ್ ಬ್ಯೂರೋದ ವೇತನ ದರ ಸೂಚ್ಯಂಕದ ಸರ್ಕಾರಿ ದತ್ತಾಂಶವನ್ನು ಉಲ್ಲೇಖಿಸಿದ ರಮೇಶ್, “ಕಾರ್ಮಿಕರ ನೈಜ ವೇತನವು 2014 ಮತ್ತು 2023ರ ನಡುವೆ ಸ್ಥಿರವಾಗಿದೆ. ವಾಸ್ತವವಾಗಿ 2019 ಮತ್ತು 2024 ರ ನಡುವೆ ಕುಸಿದಿದೆ” ಎಂದು ಹೇಳಿದರು.

ಕೃಷಿ ಸಚಿವಾಲಯದ ಕೃಷಿ ಅಂಕಿಅಂಶಗಳನ್ನು ಉಲ್ಲೇಖಿಸಿರುವ ಅವರು, ಮನಮೋಹನ್ ಸಿಂಗ್ ಸರ್ಕಾರದಡಿಯಲ್ಲಿ ಕೃಷಿ ಕಾರ್ಮಿಕರ ನೈಜ ವೇತನವು ಪ್ರತಿ ವರ್ಷ ಶೇಕಡ 6.8ರಷ್ಟು ಏರಿಕೆಯಾಗಿದೆ. ಆದರೆ ಮೋದಿ ಸರ್ಕಾರದಡಿಯಲ್ಲಿ ಕೃಷಿ ಕಾರ್ಮಿಕರ ನೈಜ ವೇತನವು ಪ್ರತಿ ವರ್ಷ ಋಣಾತ್ಮಕ ಶೇಕಡ 1.3ರಷ್ಟು (-1.3 %) ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...