ಬಜೆಟ್‌ ಅಧಿವೇಶನ | ಸವಳು-ಜವಳು ಭೂಮಿ ಸುಧಾರಣೆಗೆ ಸರ್ಕಾರ ಕ್ರಮ: ಸಚಿವ ಚಲುವರಾಯಸ್ವಾಮಿ

Date:

ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಜಲಾನಯನ ಪ್ರದೇಶದಲ್ಲಿ (ಅಚ್ಚುಕಟ್ಟು ಹೊರತುಪಡಿಸಿ) ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬಸಿ ಕಾಲುವೆಗಳ ನಿರ್ಮಾಣದ ಮೂಲಕ ಸವಳು-ಜವಳು ಮಣ್ಣಿನ ಸುಧಾರಣೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ ಕಾಗವಾಡ ಕ್ಷೇತ್ರದ ಶಾಸಕರಾದ ಬರಮಗೌಡ ಆಲಗೌಡ ಕಾಗೆ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಈ ಕಾರ್ಯಕ್ರಮದಡಿ ಕಪ್ಪು ಮಣ್ಣಿನ ಪ್ರತಿ ಹೆಕ್ಟೇರ್‌ಗೆ ರೂ.1.25ಲಕ್ಷಗಳು ಹಾಗೂ ಕೆಂಪು ಮಣ್ಣಿನಲ್ಲಿ ರೂ.65000/-ಗಳ ವೆಚ್ಚದಲ್ಲಿ ಅಂತರ ಬಸಿ ಕಾಲುವೆಯನ್ನು ನಿರ್ಮಾಣ ಮಾಡುವುದರ ಮೂಲಕ ಉಪಚರಿಸಲು ಅವಕಾಶವಿದೆ” ಎಂದರು.

“ಒಣ ಭೂಮಿ/ಶುಷ್ಕ ಪ್ರದೇಶಗಳಲ್ಲಿ, ನೀರು ಆವಿಯಾಗುವಿಕೆಯು ಬೀಳುವ ಮಳೆಯ ಪ್ರಮಾಣವನ್ನು ಮೀರಿದ ಸಂದರ್ಭದಲ್ಲಿ ಮಣ್ಣಿನಲ್ಲಿರುವ ಲವಣಗಳು ಮಣ್ಣಿನ ಮೇಲ್ಮೆ/ಬೇರಿನ ಬಳಿ ಸಂಗ್ರಹವಾಗುವುದು, ನೀರಾವರಿಯ ಅತಿಯಾದ ಬಳಕೆ, ನೀರಿನ ಗುಣಮಟ್ಟ ಲವಣಯುಕ್ತವಾಗಿದ್ದರೆ, ಅಸಮರ್ಪಕ ಮತ್ತು ನೀರಿನ ದುರ್ಬಲ ಬಸಿಯುವಿಕೆಯಿಂದ ನಿರಂತರವಾಗಿ ಮಣ್ಣಿನ ಮೇಲ್ಭಾಗ ಮತ್ತು ಕೆಳಭಾಗದ ಮಣ್ಣಿನಲ್ಲಿ (sub surface) ಲವಣ ಶೇಖರಣೆ ಪ್ರಮಾಣವು ಹೆಚ್ಚು ವೇಗವಾಗಿರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸವಳು-ಜವಳು ಮಣ್ಣಿನಲ್ಲಿ ಸೋಡಿಯಂ ಪ್ರಮಾಣ ಅಧಿಕವಾಗಿರುವುದರಿಂದ ಮಣ್ಣಿನ ಭೌತಿಕ ಗುಣಧರ್ಮಗಳು ಹಾಳಾಗಿರುವುದರಿಂದ ಮಣ್ಣಿನ ಭೌತಿಕ ಗುಣಧರ್ಮಗಳು ಹಾಳಾಗುವುದರ ಜೊತೆಗೆ ನಿಧಾನವಾಗಿ ನೀರಿನ ಬಸಿಯುವಿಕೆ, ಸಾವಯವ ಅಂಶದ ಕೊರತೆಯಿಂದ ಸೂಕ್ಷ್ಮ ಜೀವಿಗಳ ಕುಂಠಿತ ಚಟುವಟಿಕೆ, ಬೆಳೆಗೆ ದೊರೆಯುವ ಸಾರಜನಕದ/ಲಘು ಪೋಷಕಾಂಶಗಳ ಕೊರತೆಯಂತಹ ಸಮಸ್ಯೆಗಳಿಂದಾಗಿ ಸಸ್ಯಗಳ ಬೆಳವಣಿಗೆ ಕುಂಠಿತವಾಗುವುದು. ಇದರಿಂದಾಗಿ ಕಾಲಕ್ರಮೇಣ ಭೂಮಿಯು ವ್ಯವಸಾಯ/ಬೇಸಾಯ ಕೈಗೊಳ್ಳಲು ನಿರುಪಯುಕ್ತವಾಗುವುದು” ಎಂದು ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ಬೆಳಗಾವಿ ಜಿಲ್ಲೆ ಅವಿಭಾಜ್ಯ ಅಥಣಿ (ಕಾಗವಾಡ) ತಾಲ್ಲೂಕಿನಲ್ಲಿ 1151.54 ಹೆಕ್ಟೇರ್ ಸವಳು-ಜವಳು ಕೃಷಿ ಭೂಮಿ ಇದ್ದು, ಹಂತ ಹಂತವಾಗಿ ಮಣ್ಣು ಸುಧಾರಣೆ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ” ಎಂದು ಚಲುವರಾಯಸ್ವಾಮಿ ತಿಳಿಸಿದರು.

“ಕಾಗವಾಡ ತಾಲ್ಲೂಕಿನಲ್ಲಿ ಸವಳು-ಜವಳಾಗಿರುವ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಜಲಾನಯನ ಅಭಿವೃದ್ಧಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಸಕಾರಾತ್ಮಕ ಮಣ್ಣಿನ ಸುಧಾರಣೆ ಕಾರ್ಯಕ್ರಮದಡಿ 2016-17ನೇ ಸಾಲಿನಲ್ಲಿ ಕುಸನಾಳ ಗ್ರಾಮದಲ್ಲಿ 100 ಹೆಕ್ಟೇರ್ ಪ್ರದೇಶವನ್ನು ಹಾಗೂ 2020-21ನೇ ಸಾಲಿನಲ್ಲಿ ಜುಗಳ ಗ್ರಾಮದಲ್ಲಿ 154.08 ಹೆಕ್ಟೇರ್, 2022-23ನೇ ಸಾಲಿನಲ್ಲಿ ಕಾಗವಾಡ ಗ್ರಾಮದಲ್ಲಿ 46.94 ಹೆಕ್ಟೇರ್ ಪ್ರದೇಶ ಭೂಮಿಯನ್ನು ಅಭಿವೃಧ್ಧಿಪಡಿಸಲು ಆಯ್ಕೆ ಮಾಡಲಾಗಿದೆ” ಎಂದು ಅವರು ಅಂಕಿ ಅಂಶ ಒದಗಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...