ಬಜೆಟ್‌ ಅಧಿವೇಶನ | ಏಪ್ರಿಲ್ 1ರಿಂದ ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ

Date:

ಹೊಸದಾಗಿ ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್‌ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

“ಬಿಪಿಎಲ್ ಕಾರ್ಡ್​ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ವಾ?” ಎಂದು ಶಾಸಕಿ ನಯನ ಮೋಟಮ್ಮ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಪಿಎಲ್ ಕಾರ್ಡ್ ಕೊಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಸರ್ವರ್ ಡೌನ್ ಅದೂ ಇದೂ ಸಮಸ್ಯೆ ಅಂತ ಹೇಳುತ್ತಿದ್ದೀರಿ. ಐದು ಗ್ಯಾರಂಟಿಗಳಿಗೆ ಜನರ ಸಂಖ್ಯೆ ಹೆಚ್ಚಾಗಬಾರದು ಅಂತ ಬಿಪಿಎಲ್ ಕಾರ್ಡ್ ಕೊಡುತ್ತಿಲ್ವಾ? ಇದುವರೆಗೂ ಎಷ್ಟು ಬಿಪಿಎಲ್ ಕೊಟ್ಟಿದ್ದೀರಿ ತಿಳಿಸಿ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದರು.

ಸಚಿವ ಕೆ ಹೆಚ್ ಮುನಿಯಪ್ಪ ಉತ್ತರಿಸಿ, “ವಿಧಾಸಭೆ ಚುನಾವಣೆ ಬಂತು ಅಂತ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್​ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿದೆ. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್​​​ಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿದ್ದೇವೆ” ಎಂದು ಸದನಕ್ಕೆ ತಿಳಿಸಿದರು.

ನಂತರ ಶಾಸಕಿ ನಯನಾ ಮೋಟಮ್ಮ, “ತಾಂತ್ರಿಕ ದೋಷದಿಂದ 5 ಕೆಜಿ ಅಕ್ಕಿಯ ಹಣ ಬರದವರಿಗೆ ಅರಿಯರ್ಸ್ ಕೊಡಿ” ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುನಿಯಪ್ಪ, “5 ಕೆಜಿ ಅಕ್ಕಿಯ ಹಣ ಬರದವರಿಗೆ ಅರಿಯರ್ಸ್ ಕೊಡುವ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಆದರೆ 100ಕ್ಕೆ 90ರಷ್ಟು ಪಡಿತರ ಕಾರ್ಡ್‌ದಾರರಿಗೆ ಐದು ಕೆಜಿ ಅಕ್ಕಿಯ ಹಣ ಕೊಟ್ಟಿದ್ದೇವೆ. ಶೇ 5ರಷ್ಟು ಏರುಪೇರು ಇದರಲ್ಲಿ ಇದೆ, ಅದನ್ನೂ ಸರಿಪಡಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...