ಬಜೆಟ್‌ ಅಧಿವೇಶನ | ನಿಮ್ಮ ಗೂಂಡಾಗಿರಿಗೆಲ್ಲ ಹೆದರಲ್ಲ; ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ತಿರುಗೇಟು

Date:

ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ, ಏಳು ಕೋಟಿ ಜನರು ನೋಡ್ತಾ ಇದ್ದಾರೆ. ಜನ ಇವರಿಗೆ ಛೀ.. ಥೂ…ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಏರು ಧ್ವನಿಯಲ್ಲೇ ಗುಡುಗಿದರು.

ವಿಧಾನ ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಉತ್ತರಿಸುವಾಗ ಸಿದ್ದರಾಮಯ್ಯ ಗೂಂಡಾಗಿರಿ ಪದವನ್ನು ಬಳಕೆ ಮಾಡಿದ್ದಾರೆ ಎಂದು ಆಕ್ಷೇಪಿಸಿ, ಬಿಜೆಪಿ ಸದಸ್ಯರು ಗದ್ದಲ ಮಾಡಿದಾಗ ಸಿಎಂ ಗದರಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಕೋಟ ಶ್ರೀನಿವಾಸ ಪೂಜಾರಿ, “ವಿಧಾನಸೌಧದಲ್ಲಿ ತೊಡೆ ತಟ್ಟಿದ್ದು ನೀವಾ, ನಾವಾ? ನಮಗೆ ಗೂಂಡಾಗಿರಿ ಅಂತೀರಲ್ಲ, ಆಗ ತೊಡೆ ತಟ್ಟಿದ್ದು ಯಾರು? ನೀವು ಗೂಂಡಾಗಳು, ನಿಮ್ಮ ಗೂಂಡಾಗಿರಿಗೆ ನಾವು ಹೆದರುವುದಿಲ್ಲ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಮರು ಉತ್ತರಿಸಿ, “ನಾನು ಫ್ಯಾಕ್ಟ್ ಹೇಳುತ್ತಿದ್ದೇನೆ, ಫ್ಯಾಕ್ಟ್ ಈಸ್ ಫ್ಯಾಕ್ಟ್. ವಿಪಕ್ಷಗಳ ಈ ನಡೆ ಸಹಿಸಲ್ಲ, ನಾನು ಉತ್ತರ ಕೊಡಲ್ಲ. ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದವರದ್ದೇನು ಮಾತು” ಎಂದರು.

“ನಿರ್ಮಲಾ ಸೀತಾರಾಮನ್​ ಕೂಡ ವಿರೋಧಿ ಧೋರಣೆ ತೋರಿಸಿದ್ದಾರೆ. ಅವರೇ ಬಜೆಟ್ ಒಪ್ಪಿಕೊಂಡಿದ್ದ 5300 ಕೋಟಿ ರೂ. ಬಿಡುಗಡೆ ಮಾಡಿಲ್ಲ. ಆದರೆ ನಾವು 1 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ” ಎಂದು ಸಿದ್ದರಾಮಯ್ಯ ಹೇಳಿದರು.

“ಯೋಜನೆಗಳ ಮೇಲಿನ ಕಾಳಜಿಯಿಂದ 1 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಹಣ ದ್ರೋಹ ಮಾಡಿದೆ. ಇದಕ್ಕೆ ಹಣಕಾಸು ಸಚಿವರು ಸಹಕಾರ ನೀಡಿದ್ದಾರೆ” ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸಿಎಂ ವಿಷಾಧಕ್ಕೆ ವಿಪಕ್ಷಗಳ ಬಿಗಿ ಪಟ್ಟು

ಸಿಎಂ ಗೂಂಡಾ ಹೇಳಿಕೆ ಖಂಡಿಸಿ ಬಿಜೆಪಿ ಸದಸ್ಯರಿಂದ ಸಭಾತ್ಯಾಗ ಮಾಡಿದರು. ಸಿದ್ದರಾಮಯ್ಯ ವಿಷಾಧ ವ್ಯಕ್ತಪಡಿಸಲೇಬೇಕು ಎಂದು ವಿಪಕ್ಷ ಬಿಗಿ ಪಟ್ಟು ಹಿಡಿಯಿತು. ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಸದಸ್ಯರ ಮನವೊಲಿಕೆ ಮಾಡಲು ಪ್ರಯತ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...