ಬಜೆಟ್‌ ಅಧಿವೇಶನ | ವಿಧಾನಸಭೆಯಲ್ಲಿ 13 ವಿಧೇಯಕಗಳ ಅಂಗೀಕಾರ

Date:

ವಿಧಾನಸಭಾ ಅಧಿವೇಶನದಲ್ಲಿ ಬುಧವಾರ(ಫೆ. 21) ಮಹತ್ವದ 13 ವಿಧೇಯಕಗಳನ್ನು ಸಚಿವರು ಮಂಡಿಸಿದ್ದು, ಸಭಾಧ್ಯಕ್ಷ ಯು ಟಿ ಖಾದರ್‌ ಅವರಿಂದ ಅಂಗೀಕಾರಗೊಂಡಿವೆ.

2024ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸಲು ಕಾನೂನು ಸಚಿವ ಹೆಚ್ ಕೆ ಪಾಟೀಲ್‌ರವರು, 2024ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, 2024ನೇ ಸಾಲಿನ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ ವಿಧೇಯಕ) , 2024ನೇ ಸಾಲಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಹಾಗೂ 2024ನೇ ಸಾಲಿನ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳನ್ನು ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, 2024ನೇ ಸಾಲಿನ ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರುಗಳ ವಿಧೇಯಕ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, 2024ನೇ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತ ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯನ) (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.

2024ನೇ ಅಂತರ್ ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು 2024ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಾಗೂ 2024ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, 2024ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ಹಾಗೂ 2024ನೇ ಸಾಲಿನ ಗದಗ-ಬೆಟಗೇರಿ ವ್ಯಾಪಾರ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸಲು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ ಖಾನ್ ಅವರು ಪ್ರಸ್ತಾವನೆಗಳನ್ನು ಮಂಡಿಸಿದರು.

ಪ್ರಸ್ತಾವವಗಳನ್ನು ಪರ್ಯಾಲೋಚಿಸಿದ ನಂತರ 13 ವಿಧೇಯಕಗಳನ್ನು ಸಭಾಧ್ಯಕ್ಷರಿಂದ ಅಂಗೀಕರಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...