ಬಜೆಟ್ ಅಧಿವೇಶನ | ‘ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಲು ಅವಕಾಶವಿಲ್ಲ’ ಎಂದ ರಾಜ್ಯ ಸರ್ಕಾರ

Date:

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ.

ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಬಜೆಟ್ ಅಧಿವೇಶನದ ವೇಳೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ ಅವರು ನಿಯಮ 72ರ ಅಡಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು. ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, “ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ” ಎಂದು ತಿಳಿಸಿದ್ದಾರೆ.

“ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ. 32 ಸಾವಿರದಿಂದ 26 ಸಾವಿರದವರೆಗೂ ವೇತನ ನೀಡಲಾಗುತ್ತಿದೆ. ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ” ಎಂದು ತಿಳಿಸಿದರು.

“ಅತಿಥಿ ಉಪನ್ಯಾಸಕರನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಕಾಲೇಜುಗಳಲ್ಲಿ ಹೆಚ್ಚುವರಿ ಅವಧಿಗೆ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕ ನೇಮಕ ಮಾಡಿಕೊಳ್ಳುತ್ತಿದ್ದೇವೆ” ಎಂದು ಸ್ಪಷ್ಟನೆ ನೀಡಿದರು.

“ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡುವ ಅವಕಾಶ ಕಾನೂನಿನಲ್ಲಿ ಇಲ್ಲ. ಹಾಗಾಗಿ, ಅವರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ. ಆದರೆ, ಕಾಲಕಾಲಕ್ಕೆ ಅತಿಥಿ ಉಪನ್ಯಾಸಕರ ಇತರ ಸಮಸ್ಯೆಗಳ ಪರಿಹಾರ ಮಾಡಲಾಗುತ್ತದೆ” ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

“14 ಸಾವಿರ ರೂ ಇದ್ದ ವೇತನವನ್ನು ನಾವು 32 ಸಾವಿರ ರೂ.ಗೆ ಹೆಚ್ಚಿಸಿದ್ದೇವೆ. 10-15 ವರ್ಷ ಸೇವೆ ಮಾಡಿದವರಿಗೆ ವರ್ಷಕ್ಕೆ ಮೂರು ಅಂಕ ನೀಡಲಾಗುತ್ತದೆ. ಇದು ಅವರ ಪರಿಗಣನೆಗೆ ಸಹಕಾರಿಯಾಗಲಿದೆ. ಕಾರ್ಯಭಾರ ಪ್ರತಿ ವರ್ಷ ಬದಲಾವಣೆಯಾಗುತ್ತದೆ. ಸೀನಿಯಾರಿಟಿ ಇದ್ದವರಿಗೆ ತೊಂದರೆಯಾಗುವುದಿಲ್ಲ. ಹಾಗಾಗಿ, ಸೇವಾ ಭದ್ರತೆ ಭಯ ಬೇಡ” ಎಂದರು.

“1,242 ಸಹಾಯಕ ಪ್ರಾಧ್ಯಾಪಕರ ನೇಮಕ ಗೊಂದಲವಾಗಿದೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಸಿಐಡಿ ತನಿಖೆ ವರದಿ ಪಡೆದು ದಾಖಲೆಗಳ ಪರಿಶೀಲನೆ ನಡೆಸಿ ತ್ವರಿತ ನೇಮಕಕ್ಕೆ ಮುಂದಾಗಿದ್ದೇವೆ. ಎಲ್ಲದಕ್ಕೂ ತಂಡ ರಚಿಸಿ ವೇಗವಾಗಿ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ. 1,208 ಜನರ ದಾಖಲಾತಿ ಪರಿಶೀಲನೆ ನಡೆಸಲಾಗಿದೆ. ತಾಂತ್ರಿಕ ಶಿಕ್ಷಣ ಸೇರಿ ಇಲಾಖೆಯಡಿ ಏಳು ಸಾವಿರ ಹುದ್ದೆ ಮಂಜೂರಾತಿಗೆ ಆರ್ಥಿಕ ಇಲಾಖೆ ಅನುಮತಿ ಕೇಳಿದ್ದೇವೆ. 310 ಪ್ರಾಂಶುಪಾಲರ ಹುದ್ದೆ ನೇಮಕಾತಿಗೆ ಪ್ರಕ್ರಿಯೆ ನಡೆಸಲಾಗುತ್ತಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕತಾರ್‌ನಲ್ಲಿ ಬಂಧಿತರಾಗಿದ್ದವರ ಬಿಡುಗಡೆಗೆ ನಟ ಶಾರೂಖ್ ಖಾನ್ ಕಾರಣ: ಚರ್ಚೆಗೆ ಗ್ರಾಸವಾದ ಸುಬ್ರಮಣಿಯನ್ ಸ್ವಾಮಿ ಟ್ವೀಟ್

“ಅತಿಥಿ ಉಪನ್ಯಾಸಕರಿಗೆ 10 ತಿಂಗಳ ವೇತನವನ್ನು ಕಡ್ಡಾಯವಾಗಿ ಕೊಡಬೇಕು ಎಂದು ಆದೇಶಿಸಿದ್ದೇವೆ. ಯಾವ ರಾಜ್ಯದಲ್ಲಿಯೂ ಅತಿಥಿ ಉಪನ್ಯಾಸಕರ ಖಾಯಂ ಮಾಡಿಲ್ಲ. ಎಲ್ಲ ಆದೇಶಗಳನ್ನು ಪರಿಶೀಲಿಸಿದ್ದೇವೆ. ಪೌರ ಕಾರ್ಮಿಕರು ಇತರ ಇಲಾಖೆಗೆ ಇದನ್ನು ಹೋಲಿಕೆ ಮಾಡಲಾಗದು. ಉಮಾದೇವಿ ಪ್ರಕರಣವೂ ಇದಕ್ಕೆ ಅನ್ವಯವಾಗಲಿದೆ. ಇದನ್ನು ಅಧ್ಯಯನ ಮಾಡಿದ್ದೇನೆ. ಹಾಗಾಗಿ ಸೇವೆ ಖಾಯಂ ಹೊರತುಪಡಿಸಿ ಕಾಲಕಾಲಕ್ಕೆ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹಾರ ಮಾಡಲಾಗುತ್ತದೆ” ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ಭರವಸೆ ಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...