ಉಪ ಚುನಾವಣೆ | ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಪಕ್ಕಾ: ಸಿಎಂ ಸಿದ್ದರಾಮಯ್ಯ ವಿಶ್ವಾಸ

Date:

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಅ.21) ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು. ಇದೇ ವೇಳೆ ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ” ಎಂದು ಹೇಳಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಇದೇ ವೇಳೆ ತಿಳಿಸಿದರು.

ಸಿಎಂಗೆ ಮುತ್ತಿಗೆ

ಚಿತ್ರದುರ್ಗದ ಚಳ್ಳಕೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಮೀಸಲಾತಿ ಹೋರಾಟಗಾರರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಹೋರಾಟಗಾರರನ್ನು ತಡೆದು ಚದುರಿಸಿ, ಸಿಎಂಗೆ ದಾರಿ ಮಾಡಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...