ಕಾಂಗ್ರೆಸ್ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಬಿ ವೈ ವಿಜಯೇಂದ್ರ

Date:

ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ಯಾಕೆ ನೆನಪಿಸಿಕೊಳ್ಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು.

ಬಾಗಲಕೋಟೆಯಲ್ಲಿ ನಡೆದ ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿ ಮಾತನಾಡಿ ಅವರು, ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ” ಎಂದು ಆರೋಪಿಸಿದರು.

“ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ. ಕಟ್ಟಬೇಕಿದೆ. ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಳಿದರು. ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ.4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಯಾರಪ್ಪನ ದುಡ್ಡು ಸ್ವಾಮಿ? ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ. ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ” ಎಂದು ಕೇಳಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಗದ್ದೀಗೌಡರ್, ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ. ಭಾಂಡಗೆ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...