ಉಪ ಚುನಾವಣೆ 2023 ಫಲಿತಾಂಶ: ಇಂಡಿಯಾ 4, ಬಿಜೆಪಿ 3 ಕ್ಷೇತ್ರಗಳಲ್ಲಿ ಜಯ

Date:

ಮಂಗಳವಾರ(ಸೆ.8) ವಿವಿಧ ರಾಜ್ಯಗಳ ಏಳು ಸ್ಥಾನಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶದಲ್ಲಿ ಇಂಡಿಯಾ ಒಕ್ಕೂಟ 4 ಹಾಗೂ ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಇಂಡಿಯಾ ಒಕ್ಕೂಟದ ಭಾಗವಾಗಿ ಕೇರಳದಲ್ಲಿ ಕಾಂಗ್ರೆಸ್, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಉತ್ತರ ಪ್ರದೇಶದಲ್ಲಿ ಎಸ್‌ಪಿ, ಜಾರ್ಖಂಡ್‌ನಲ್ಲಿ ಜೆಎಂಎಂ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ತ್ರಿಪುರಾದ ಎರಡು ಕ್ಷೇತ್ರ ಹಾಗೂ ಉತ್ತರಾಖಂಡದ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ.  

ಕೇರಳದ ಪುತ್ತುಪಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಪುತ್ರ ಚಾಂಡಿ ಉಮ್ಮನ್ ಅವರು ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದ ಧುಪ್ಗುರಿ ವಿಧಾನಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ 4,300 ಮತಗಳಿಂದ ಬಿಜೆಪಿಯನ್ನು ಸೋಲಿಸಿತು. ಜಾರ್ಖಂಡ್‌ನ ಡುಮ್ರಿಯಲ್ಲಿ ಜೆಎಂಎಂ ಅಭ್ಯರ್ಥಿ ಬೇಬಿ ದೇವಿ 17,000 ಮತಗಳಿಂದ ಗೆದ್ದಿದ್ದಾರೆ. ತ್ರಿಪುರಾದ ಧನ್‌ಪುರ್ ಮತ್ತು ಬೊಕ್ಸಾನಗರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಾಂಸಾಹಾರ ಸೇವನೆಯಿಂದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಐಐಟಿ ಪ್ರಾಧ್ಯಾಪಕ ವಿವಾದಾತ್ಮಕ ಹೇಳಿಕೆ

ಉತ್ತರಾಖಂಡದಲ್ಲಿ ಬಿಜೆಪಿ ಅಭ್ಯರ್ಥಿ ಭಾರಿ ಪೈಪೋಟಿಯ ನಡುವೆ ಕೇವಲ ಮೂರು ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸಿದರು. ಉತ್ತರ ಪ್ರದೇಶದ ಎಸ್‌ಪಿ ಅಭ್ಯರ್ಥಿ ಕೇಸರಿ ಪಕ್ಷದ ಅಭ್ಯರ್ಥಿಯನ್ನು 30 ಸಾವಿರ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಜಯ ಪತಾಕೆ ಹಾರಿಸಿದ್ದಾರೆ.

ಉತ್ತರ ಪ್ರದೇಶದ ಘೋಸಿ, ಜಾರ್ಖಂಡ್‌ನ ಡುಮ್ರಿ, ಕೇರಳದ ಪುತ್ತುಪ್ಪಲ್ಲಿ, ಉತ್ತರಾಖಂಡದ ಬಾಗೇಶ್ವರ್ ಮತ್ತು ಪಶ್ಚಿಮ ಬಂಗಾಳದ ಧೂಪ್‌ಗುರಿ ಕ್ಷೇತ್ರಗಳಲ್ಲಿ ಸೆಪ್ಟೆಂಬರ್ 5 ರಂದು ಉಪ ಚುನಾವಣೆ ನಡೆದಿದ್ದವು.

“ನನ್ನ ತಂದೆಯಂತೆಯೇ ನನ್ನ ರಾಜಕೀಯವೂ ಜನಪರವಾಗಿರುತ್ತದೆ. ನಾನು ನನ್ನ ತಂದೆಯ ಕೆಲಸವನ್ನು ನೋಡಿದ್ದೇನೆ ಮತ್ತು ನಾನು ಆ ದಾರಿಯಲ್ಲಿ ಹೋಗಲು ಬಯಸುತ್ತೇನೆ. ನನ್ನ ತಂದೆ ಪ್ರಾರಂಭಿಸಿದ್ದನ್ನು ನಾನು ಮುಂದುವರಿಸುತ್ತೇನೆ” ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಪುತ್ರ ಚಾಂಡಿ ಉಮ್ಮನ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...